Physical Abuse case: ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರ ಬಂಧನ
ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿರುವ ಘಟನೆ ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ನಡೆದಿದೆ. ದುರ್ಗಾಪುರದ ಐಕ್ಯೂ ಸಿಟಿ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ವರ್ಷದ ಎಂಬಿಬಿಎಸ್ ಓದುತ್ತಿದ್ದ ಒಡಿಶಾದ ವಿದ್ಯಾರ್ಥಿನಿ ಮೇಲೆ ಶುಕ್ರವಾರ ಸಾಮೂಹಿಕ ಅತ್ಯಾಚಾರ ನಡೆದಿತ್ತು.

-

ಪಶ್ಚಿಮ ಬಂಗಾಳ: ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ (Medical college student) ಮೇಲೆ ಶುಕ್ರವಾರ ನಡೆದ ಸಾಮೂಹಿಕ ಅತ್ಯಾಚಾರ (physical abuse case) ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ಪಶ್ಚಿಮ ಬಂಗಾಳದ (West Bengal crime news) ದುರ್ಗಾಪುರದಲ್ಲಿ ನಡೆದಿದೆ. ದುರ್ಗಾಪುರದ ಐಕ್ಯೂ ಸಿಟಿ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ವರ್ಷದ ಎಂಬಿಬಿಎಸ್ (MBBS Student) ಓದುತ್ತಿದ್ದ ಒಡಿಶಾ (odisha) ಮೂಲದ ವಿದ್ಯಾರ್ಥಿನಿಯ ಮೇಲೆ ಆಸ್ಪತ್ರೆ ಆವರಣದಲ್ಲೇ ಶುಕ್ರವಾರ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ಮೂವರನ್ನು ಪೊಲೀಸರು ಬಂಧಿಸಿರುವುದಾಗಿ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಒಡಿಶಾದ ಜಲೇಶ್ವರ ಮೂಲದವಳಾದ ವಿದ್ಯಾರ್ಥಿನಿ ದುರ್ಗಾಪುರದ ಶಿವಪುರ ಪ್ರದೇಶದ ಐಕ್ಯೂ ಸಿಟಿ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ವರ್ಷದ ಎಂಬಿಬಿಎಸ್ ಓದುತ್ತಿದ್ದಳು. ಆಕೆ ತನ್ನ ಸ್ನೇಹಿತರೊಬ್ಬರ ಜೊತೆ ಕ್ಯಾಂಪಸ್ ಹೊರಗೆ ಊಟಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಆಕೆಯ ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ತೆರಳಿ ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಿದರು. ಘಟನೆಗೆ ಸಂಬಂಧಿಸಿ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿನಿ ಜೊತೆಗಿದ್ದ ಸ್ನೇಹಿತ ಸೇರಿದಂತೆ ಇತರ ವ್ಯಕ್ತಿಗಳನ್ನು ವಿಚಾರಣೆ ನಡೆಸಿದ್ದಾರೆ.
On Durgapur gangrape case, Odisha CM Mohan Charan Majhi tweets, "The unfortunate incident of gang rape involving an Odia student in Durgapur, West Bengal, is highly condemnable and painful. I am deeply shocked upon hearing this news. I strongly urge the West Bengal CM Mamata… pic.twitter.com/RoCwo7nlAR
— ANI (@ANI) October 11, 2025
ಘಟನೆಗೆ ಖಂಡನೆ
ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರವನ್ನು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಖಂಡಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಒಡಿಶಾ ವಿದ್ಯಾರ್ಥಿನಿಯ ಮೇಲೆ ನಡೆದ ದುರದೃಷ್ಟಕರ ಸಾಮೂಹಿಕ ಅತ್ಯಾಚಾರ ಘಟನೆ ಅತ್ಯಂತ ಖಂಡನೀಯ. ಈ ಸುದ್ದಿ ಕೇಳಿ ನನಗೆ ತೀವ್ರ ಆಘಾತವಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕಾಗಿ ಒತ್ತಾಯಿಸುವುದಾಗಿ ತಿಳಿಸಿದ್ದಾರೆ.
ಸಂತ್ರಸ್ತೆ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಹಿರಿಯ ಅಧಿಕಾರಿಗಳು ಪಶ್ಚಿಮ ಬಂಗಾಳ ಸರ್ಕಾರವನ್ನು ಸಂಪರ್ಕಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: Afghanistan Vs Pak: ಅಫ್ಘಾನಿಸ್ತಾನ ಗಡಿಯಲ್ಲಿ ಹೆಚ್ಚಿನ ಉದ್ವಿಗ್ನತೆ; ಗುಂಡಿನ ಚಕಮಕಿ 18 ಪಾಕ್ ಸೈನಿಕರು ಸಾವು
ವಿದ್ಯಾರ್ಥಿನಿಯ ತಂದೆಯೊಂದಿಗೆ ಸಂಪರ್ಕದಲ್ಲಿರುವ ಮಾಝಿ, ಅವರಿಗೆ ಅಗತ್ಯ ಸಹಾಯವನ್ನು ಒದಗಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.