13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮಾರಣಾಂತಿಕ ಹಲ್ಲೆ ನಡೆಸಿ ಮನೆ ಹೊರಗೆ ಎಸೆದು ಹೋದ ದುಷ್ಕರ್ಮಿಗಳು
ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ಮನೆಯ ಹೊರಗೆ ಗುರುವಾರ ರಾತ್ರಿ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದಿದ್ದ ಆಕೆಯನ್ನು ನೋಡಿದ ತಂದೆ ಕೂಡಲೇ ಅವಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಈ ಕುರಿತು ಗುಮ್ಲಾ ಜಿಲ್ಲೆಯ ಪಾಲ್ಕೋಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಸಂಗ್ರಹ ಚಿತ್ರ -
ಜಾರ್ಖಂಡ್: ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ (Physical abuse case) ಎಸಗಿರುವ ಘಟನೆ ಜಾರ್ಖಂಡ್‌ನ (Jharkhand) ಗುಮ್ಲಾ ಜಿಲ್ಲೆಯಲ್ಲಿ ನಡೆದಿದೆ. ಮನೆಯ ಹೊರಗೆ ಗುರುವಾರ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಗುಮ್ಲಾ ಜಿಲ್ಲೆಯ ಪಾಲ್ಕೋಟ್ ಪೊಲೀಸ್ ಠಾಣೆಗೆ (Palkot police station) ವ್ಯಕ್ತಿಯೊಬ್ಬರು ದೂರು ನೀಡಿದರು. ಈ ಕುರಿತು ಪ್ರಕರಣ ದಾಖಲಿಸಿರುವ ಪೊಲೀಸರು 13 ವರ್ಷದ ಬಾಲಕಿಯನ್ನು ವಿಶೇಷ ವೈದ್ಯಕೀಯ ಚಿಕಿತ್ಸೆಗಾಗಿ ರಾಂಚಿಯ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (RIMS) ಗೆ ದಾಖಲಿಸಿದ್ದಾರೆ.
ಈ ಕುರಿತು ಶನಿವಾರ ಮಾಹಿತಿ ನೀಡಿದ ಪೊಲೀಸರು, ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ವ್ಯಕ್ತಿಯೊಬ್ಬರು ತಮ್ಮ 13 ವರ್ಷದ ಮಗಳ ಮೇಲೆ ಪುರುಷರ ಗುಂಪೊಂದು ಅತ್ಯಾಚಾರ ಎಸಗಿ, ನಿರ್ದಯವಾಗಿ ಹಲ್ಲೆ ನಡೆಸಿದೆ ಎಂದು ಆರೋಪಿಸಿದ್ದಾರೆ.
ಆ ವ್ಯಕ್ತಿ ಶುಕ್ರವಾರ ಪಾಲ್ಕೋಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ ಬಳಿಕ ಬಾಲಕಿಯನ್ನು ವಿಶೇಷ ವೈದ್ಯಕೀಯ ಚಿಕಿತ್ಸೆಗಾಗಿ ರಾಂಚಿಯ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಗೆ ದಾಖಲಿಸಲಾಗಿದೆ. ಬಾಲಕಿಯ ವೈದ್ಯಕೀಯ ವರದಿಯನ್ನು ಪಡೆಯಲು ಪೊಲೀಸ್ ತಂಡವನ್ನು ಕೂಡ ರಾಂಚಿಯ ಆಸ್ಪತ್ರೆಗೆ ಕಳುಹಿಸಲಾಗಿದೆ. ವೈದ್ಯಕೀಯ ವರದಿ ಬಂದ ಬಳಿಕ ಅತ್ಯಾಚಾರ ನಡೆದಿದೆಯೇ ಇಲ್ಲವೇ ಎಂಬುದು ಖಚಿತವಾಗುತ್ತದೆ ಎಂದು ತಿಳಿಸಿದರು.
ಪಾಲ್ಕೋಟ್ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ಅಂಕಿತ್ ರಾಜ್ ಮಾತನಾಡಿ, ಬಾಲಕಿ ಗುರುವಾರ ರಾತ್ರಿ ತನ್ನ ಮನೆಯ ಹೊರಗೆ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ತನ್ನ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ನಿರ್ದಯವಾಗಿ ಹಲ್ಲೆ ನಡೆಸಲಾಗಿದೆ ಎಂದು ಆಕೆಯ ತಂದೆ ಆರೋಪಿಸಿದ್ದಾರೆ. ಕೃತ್ಯದಲ್ಲಿ ಎಷ್ಟು ಮಂದಿ ಭಾಗಿಯಾಗಿದ್ದರು ಎನ್ನುವ ಮಾಹಿತಿ ಸಿಕ್ಕಿಲ್ಲ ಎಂದರು.
Hassan Woman Missing: ಹಾಸನದಲ್ಲಿ ನವವಿವಾಹಿತೆ ಕಣ್ಮರೆ ಕೇಸ್; 8 ದಿನಗಳ ಬಳಿಕ ಮೃತದೇಹ ಪತ್ತೆ!
ಬಾಲಕಿಯನ್ನು ಮೊದಲು ಸಿಮ್ಡೆಗಾ ಸದರ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿನ ವೈದ್ಯರು ಆಕೆಯನ್ನು ಗುಮ್ಲಾಕ್ಕೆ ಕಳುಹಿಸಿದರು. ಗುಮ್ಲಾದ ಸದರ್ ಆಸ್ಪತ್ರೆಯ ವೈದ್ಯರು ಆಕೆಯನ್ನು ರಾಂಚಿ ಆಸ್ಪತ್ರೆಗೆ ಶಿಫಾರಸು ಮಾಡಿದರು ಎಂದು ಬಾಲಕಿಯ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.