ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು; ತನಿಖೆ ಶುರು

ಇನ್ಸ್‌ಪೆಕ್ಟರ್‌ ಸಂದೇಶ್ ವಿರುದ್ಧ ಮಾಡಿರುವ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದ ಬೆನ್ನಲ್ಲೇ ಇದೀಗ ಸಂದೇಶ್‌ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಎಫ್​ಐಆರ್​ ದಾಖಲಾಗಿದೆ.

ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Mar 22, 2026 10:45 AM

ಮಂಗಳೂರು: ಇನ್ಸ್‌ಪೆಕ್ಟರ್‌ ಸಂದೇಶ್ ವಿರುದ್ಧ ಮಾಡಿರುವ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದ ಬೆನ್ನಲ್ಲೇ ಇದೀಗ ಸಂದೇಶ್‌ (Moodbidri Inspector Sandesh) ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಎಫ್​ಐಆರ್​ ದಾಖಲಾಗಿದೆ. 2018 ರಿಂದ 2023ರವರೆಗೆ ಶಿಕ್ಷಕಿ ಮನೆಗೆ ಹೋಗಿ ಬೆದರಿಸಿ ಅತ್ಯಾಚಾರ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಂಗಳೂರೂ ನಗರ ಕಮಿಷನರೇಟ್ ವ್ಯಾಪ್ತಿಗೆ ಬರುವ ಮೂಡಬಿದ್ರೆ ಪೊಲೀಸ್ ಇನ್ಸ್​ಪೆಕ್ಟರ್​ ಸಂದೇಶ್ ಮೇಲೆ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಆರೋಪ ಕೇಳಿಬಂದಿತ್ತು.

ಇದೀಗ ಇನ್ಸ್‌ಪೆಕ್ಟರ್‌ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ವೇಣೂರು ಠಾಣಾ ವ್ಯಾಪ್ತಿಯಲ್ಲೇ ಅತ್ಯಾಚಾರ ಆರೋಪದಡಿ ಸೆಕ್ಷನ್ 376(2)(a)(1), 376(2)(n), 384, 506ರಡಿ ಕೇಸ್ ದಾಖಲಾಗಿದೆ. ಸಂದೇಶ್ ವಿರುದ್ಧ ಇಬ್ಬರು ಮಹಿಳೆಯರು ಮಾಡಿದ್ದ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದೆ. ಹಲವು ಕಾರಣಗಳನ್ನು ಹಿಡಿದು, ಕೆಲ ಪ್ರಕರಣಗಳ ಕುರಿತು ಬೆದರಿಸಿ ನಿರಂತರವಾಗಿ ಅತ್ಯಾಚಾರ ಮಾಡಿದ್ದಾರೆ. 2018 ರಿಂದ 2023ರವರೆಗೆ ಸತತ 5 ವರ್ಷಗಳ ಕಾಲ ಅತ್ಯಾಚಾರ ಎಸಗಿದ್ದಾರೆ. ಜೀವ ಭಯ, ಮಾನ, ಕುಟುಂಬಸ್ಥರ ವಿರುದ್ಧವೂ ಬೆದರಿಕೆ ಹಾಕಿದ್ದ ಕಾರಣ ಮೌನವಾಗಿದ್ದೆ ಎಂದು ಶಿಕ್ಷಕಿ ದೂರಿನಲ್ಲಿ ಹೇಳಿದ್ದಾರೆ. 5 ವರ್ಷ ಬೆದರಿಸಿ ಬಲವಂತವಾಗಿ ನಿರಂತರ ಅತ್ಯಾಚಾರ ಮಾಡಿದ್ದಾರೆ ಎಂದು ಶಿಕ್ಷಕಿ ಗಂಭೀರ ಆರೋಪ ಮಾಡಿದ್ದಾರೆ.

ಇಬ್ಬರು ಮಹಿಳೆಯರ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ದ ಗಂಭೀರ ಆರೋಪಗಳನ್ನು ಮಾಡಿದ್ದರು. ಇದಕ್ಕೆ ಪೂರಕವಾಗಿ ಆಡಿಯೋ ಹಾಗೂ ವಿಡಿಯೋ ವೈರಲ್ ಆಗಿತ್ತು. ಆಡಿಯೋದಲ್ಲಿ ಅರೆಸ್ಟ್ ಆಗಿರುವ ಗಂಡನ ಬಿಡುಗಡೆ ಮಾಡಲು 25 ಲಕ್ಷ ರೂಪಾಯಿ ನೀಡುವಂತೆ ಬೆದರಿಸಿದ್ದಾರೆ. ಇಲ್ಲದಿದ್ದರೆ ತನ್ನ ಜೊತೆ ಮಲಗುವಂತೆ ಬೆದರಿಸಿದ ಆಡಿಯೋ ಭಾರಿ ಕೋಲಾಹಲ ಸೃಷ್ಟಿಸಿತ್ತು. ಆದರೆ ಈ ಪ್ರಕರಣ ಸಂಬಂಧ ಪೊಲೀಸ್ ಪ್ರಾಥಮಿಕ ತನಿಖೆಗಳು ಹೊಸ ವರದಿ ನೀಡಿತ್ತು.

Moodubidire Police inspector Case: ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

ಇನ್ಸ್‌ಪೆಕ್ಟರ್ ವರ್ತನೆಯಲ್ಲಿ ಲೋಪವಿರುವುದು ನಿಜವಾದರೂ, ಅವರ ವಿರುದ್ಧದ ಕೆಲವು ದೂರುಗಳು ಪೂರ್ವಗ್ರಹ ಪೀಡಿತ ಮತ್ತು ಸುಳ್ಳು ಎಂದು ಕಮಿಷನರ್ ಈ ಹಿಂದೆ ತಿಳಿಸಿದ್ದರು. ಇದೇ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ನೀಡಿದ್ದ ಕಿರುಕುಳದ ದೂರುಗಳ ಬಗ್ಗೆ ಪ್ರಸ್ತಾಪಿಸಿರುವ ಸುಧೀರ್ ಕುಮಾರ್ ರೆಡ್ಡಿ, ತನಿಖೆಯಲ್ಲಿ ಈ ದೂರುಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂಬುದು ಸಾಬೀತಾಗಿದೆ. ಆಡಿಯೋ/ವಿಡಿಯೋದಲ್ಲಿರುವ ಮಹಿಳೆಯರು ತಾವು ದೂರು ನೀಡುವುದಿಲ್ಲ ಎಂದು ಹೇಳಿದ್ದಾರೆ. ವಿಡಿಯೋ ಕೂಡ ಮುಜುಗರ ಉಂಟು ಮಾಡುವಂತಿದ್ದು, ಇನ್ಸ್‌ಪೆಕ್ಟರ್ ಅವರ ದುರ್ನಡತೆ ಇಲ್ಲಿ ಎದ್ದು ಕಾಣುತ್ತಿದೆ ಎಂದು ವಾಟ್ಸ್​ಆ್ಯಪ್​ ಸಂದೇಶದಲ್ಲಿ ಪೊಲೀಸ್ ಆಯುಕ್ತರು ಮಾಹಿತಿ ಹಂಚಿಕೊಂಡಿದ್ದರು.