ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

POCSO Case: ಪೊಲೀಸನಿಂದ ಬರ್ಬರ ಕೃತ್ಯ, ಬಾಲಕಿ ಮೇಲೆ ಅತ್ಯಾಚಾರ, ಅಬಾರ್ಷನ್‌

ಯಾದಗಿರಿ ಜಿಲ್ಲೆಯ ಸೈದಾಪುರ ಠಾಣೆಯ ಕಾನ್ಸ್‌ಟೇಬಲ್ ಬಲರಾಮನ ವಿರುದ್ಧ ಈ ಗಂಭೀರ ಆರೋಪ ಕೇಳಿಬಂದಿದೆ. ಈತ ಪ್ರೀತಿಯ ನಾಟಕವಾಡಿ 16 ವರ್ಷದ ಅಪ್ರಾಪ್ತೆಯ ಮೇಲೆ 2 ವರ್ಷ ಅತ್ಯಾಚಾರವೆಸಗಿದ್ದ. ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಟ್ಯಾಬ್ಲೆಟ್ ಕೊಟ್ಟು ಅಬಾರ್ಷನ್ ಮಾಡಿಸಿದ್ದ ಎಂದು ಬಾಲಕಿ ಕುಟುಂಬಸ್ಥರು ಆರೋಪಿಸಿದ್ದಾರೆ.

ಪೊಲೀಸನಿಂದ ಬರ್ಬರ ಕೃತ್ಯ, ಬಾಲಕಿ ಮೇಲೆ ಅತ್ಯಾಚಾರ, ಅಬಾರ್ಷನ್‌

ಆರೋಪಿ ಬಲರಾಮ

ಹರೀಶ್‌ ಕೇರ ಹರೀಶ್‌ ಕೇರ Apr 9, 2025 11:46 AM

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಬರ್ಬರ ಕೃತ್ಯ ಬೆಳಕಿಗೆ ಬಂದಿದೆ. ರಕ್ಷಿಸಬೇಕಾದ ಆರಕ್ಷಕನೇ ಇದರಲ್ಲಿ ಅಮಾನುಷವಾಗಿ ವರ್ತಿಸಿದ್ದಾನೆ. ಅಪ್ರಾಪ್ತ ಬಾಲಕಿ ಮೇಲೆ (POCSO Case) ಪೊಲೀಸ್ ಕಾನ್ಸ್ ಟೇಬಲ್ (Police Constable) ಅತ್ಯಾಚಾರ (Physical Abuse) ಎಸಗಿ, ಆಕೆ ಗರ್ಭಿಣಿಯಾಗುತ್ತಿದ್ದಂತೆ ಟ್ಯಾಬ್ಲೆಟ್ ಕೊಟ್ಟು ಅಬಾರ್ಷನ್ (Abortion) ಮಾಡಿಸಿರುವ ಘಟನೆ ನಡೆದಿದೆ. ಇದೀಗ ಆತನ ಮೇಲೆ ದೂರು ದಾಖಲಾಗಿದೆ.

ಯಾದಗಿರಿ ಜಿಲ್ಲೆಯ ಸೈದಾಪುರ ಠಾಣೆಯ ಕಾನ್ಸ್‌ಟೇಬಲ್ ಬಲರಾಮನ ವಿರುದ್ಧ ಈ ಗಂಭೀರ ಆರೋಪ ಕೇಳಿಬಂದಿದೆ. ಈತ ಪ್ರೀತಿಯ ನಾಟಕವಾಡಿ 16 ವರ್ಷದ ಅಪ್ರಾಪ್ತೆಯ ಮೇಲೆ 2 ವರ್ಷ ಅತ್ಯಾಚಾರವೆಸಗಿದ್ದ. ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಟ್ಯಾಬ್ಲೆಟ್ ಕೊಟ್ಟು ಅಬಾರ್ಷನ್ ಮಾಡಿಸಿದ್ದ ಎಂದು ಬಾಲಕಿ ಕುಟುಂಬಸ್ಥರು ಆರೋಪಿಸಿದ್ದಾರೆ.

18 ವರ್ಷ ತುಂಬುತ್ತಿದ್ದಂತೆ 2024ರಲ್ಲಿ ಈಕೆಯನ್ನು ರಿಜಿಸ್ಟರ್ ಮ್ಯಾರೇಜ್ ಆಗಿದ್ದ. ಆದರೆ ಆಕೆಯನ್ನು ಮನೆಗೆ ಸೇರಿಸಿಕೊಳ್ಳಲು ಕಾನ್ಸ್ ಟೇಬಲ್ ಕುಟುಂಬದವರು ನಿರಾಕರಿಸಿದ್ದಾರೆ. ಮನನೊಂದ ಬಾಲಕಿಯ ಕುಟುಂಬದವರು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕಾನ್ಸ್ ಟೇಬಲ್ ಬಲರಾಮನ ವಿರುದ್ಧ ದೂರು ನೀಡಿದ್ದಾರೆ.

ರೌಡಿಶೀಟರ್‌ ಕಾಲಿಗೆ ಗುಂಡಿಕ್ಕಿ ಬಂಧನ

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ (Hubballi news) ಪೊಲೀಸರ ಗುಂಡಿನ ಸದ್ದು ಅನುರಣಿಸಿದೆ. ತಮ್ಮ ಮೇಲೆ ಹಲ್ಲೆ ನಡೆಸಿದ ರೌಡಿಶೀಟರ್ (Rowdy Sheeter) ಮೇಲೆ ಪೊಲೀಸರು ಗುಂಡಿನ ದಾಳಿ (Police Firing) ನಡೆಸಿ ಬಂಧಿಸಿರುವ ಘಟನೆ ಹುಬ್ಬಳ್ಳಿಯ ಆನಂದನಗರದ ಹೊರವಲಯದಲ್ಲಿ ನಡೆದಿದೆ. ರೌಡಿಶೀಟರ್ ಮಲಿಕ್ ಆದೋನಿ ಎಂಬಾತನ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿ ಆತನನ್ನು ಬಂಧಿಸಿದ್ದಾರೆ. ಹಳೆ ಹುಬ್ಬಳ್ಳಿ ಠಾಣೆಯ ಪಿಎಸ್ಐ ವಿಶ್ವನಾಥ್ ಅವರು ರೌಡಿಶೀಟರ್ ಮಲಿಕ್ ಆದೋನಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ನಿನ್ನೆ ಹಣಕಾಸಿನ ವಿಚಾರವಾಗಿ ಗಲಾಟೆ ಆಗಿತ್ತು. ವಿಚಾರಣೆಯ ವೇಳೆ ಪೊಲೀಸರ ಮೇಲೆ ಮಲಿಕ್ ಆಧೋನಿ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತ್ಮ ರಕ್ಷಣೆಗಾಗಿ ಪಿಎಸ್ಐ ವಿಶ್ವನಾಥ್, ಮಲಿಕ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಪಿಎಸ್ಐ ವಿಶ್ವನಾಥ್, ಪಿಸಿಗಳಾದ ಕಲ್ಲನಗೌಡ, ಶರೀಫ್ ಎನ್ನುವವರಿಗೆ ಗಾಯಗಳಾಗಿವೆ. ಗಾಯಾಳು ಪೊಲೀಸರು ಮತ್ತು ಆರೋಪಿ ಮಲಿಕ್‌ಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: Self Harming: ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿ ಶವ, ಅಕ್ರಮ ಸಂಬಂಧ ಹೊಂದಿದ್ದ ಪತಿಯತ್ತ ಸಂಶಯ