Physical Harassment: ಬಾಲಕಿಯ ಎದೆಗೆ ಕೈ ಹಾಕಿದ ಕಿಡಿಗೇಡಿಯ ಕಾಲಿಗೆ ಗುಂಡೇಟು!
ಚಾಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಆರೋಪಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವ್ಯಕ್ತಿಯ ಕಾಲಿಗೆ ಗುಂಡೇಟು ತಗಲಿರುವುದರಿಂದ ಆತನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಯನ್ನು ಆದಿತ್ಯ ಗುಪ್ತ ಎಂದು ಗುರುತಿಸಲಾಗಿದೆ.


ಕಾನ್ಪುರ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪ್ರೌಢಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ (Physical Harassment) ನೀಡಿದ ವ್ಯಕ್ತಿಯ ಕಾಲಿಗೆ ಶೂಟ್ ಮಾಡಿ ಪೊಲೀಸರು ಬಂಧಿಸಿರುವ ಘಟನೆ ಕಾನ್ಪುರದಲ್ಲಿ (Kanpur) ನಡೆದಿದೆ. ನಗರದ ಚಾಕೇರಿ ಪೊಲೀಸ್ ಠಾಣಾ (Chakeri police station) ವ್ಯಾಪ್ತಿಯಲ್ಲಿ ಬುಧವಾರ ಸಂಜೆ ಮುಸುಕುಧಾರಿ ವ್ಯಕ್ತಿಯೊಬ್ಬ ಪ್ರೌಢಶಾಲಾ ವಿದ್ಯಾರ್ಥಿನಿ ಮೇಲೆ ಅಶ್ಲೀಲ ಕಾಮೆಂಟ್‌ಗಳನ್ನು ಮಾಡಿ ಸಾರ್ವಜನಿಕವಾಗಿ ಅವಳೊಂದಿಗೆ ಅನುಚಿತವಾಗಿ ವರ್ತಿಸಿದ್ದ. ಈ ಕುರಿತು ದೂರು ದಾಖಲಿಸಿರುವ ಪೊಲೀಸರು ಗುರುವಾರ ಆರೋಪಿಯ ಕಾಲಿಗೆ ಶೂಟ್ ಮಾಡಿ ಬಂಧಿಸಿದರು.
ನಗರದ ಚಾಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ಆರೋಪಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವ್ಯಕ್ತಿಯ ಕಾಲಿಗೆ ಗುಂಡೇಟು ತಗಲಿರುವುದರಿಂದ ಆತನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಯನ್ನು ಆದಿತ್ಯ ಗುಪ್ತ ಎಂದು ಗುರುತಿಸಲಾಗಿದೆ.
ವಿಶ್ವಕರ್ಮ ದೇವಸ್ಥಾನದ ಬಳಿಯಿರುವ ಸ್ನೇಹಿತನ ಮನೆಗೆ ಬುಧವಾರ ಸಂಜೆ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳು ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಬೈಕ್ ನಲ್ಲಿ ಬಂದ ಮುಸುಕುಧಾರಿ ವ್ಯಕ್ತಿಯೊಬ್ಬ ಅಶ್ಲೀಲ ಕಾಮೆಂಟ್‌ಗಳನ್ನು ಮಾಡಿ ಸಾರ್ವಜನಿಕವಾಗಿ ಅವಳೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಈ ಕುರಿತು ವಿದ್ಯಾರ್ಥಿನಿ ಮನೆಯಲ್ಲಿ ತಿಳಿಸಿದ್ದು, ಬಳಿಕ ಅವರು ಚಾಕೇರಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ.
ಘಟನಾ ಸ್ಥಳದ ಸಿಸಿಟಿವಿ ದಾಖಲೆಗಳನ್ನು ಪರಿಶೀಲಿಸಿದ ಪೊಲೀಸರು ಶಂಕಿತನನ್ನು ಗುರುತಿಸಿದ್ದಾರೆ. ಸಿಸಿಟಿವಿ ದೃಶ್ಯವಾಳಿಗಳು ಮತ್ತು ವಿದ್ಯಾರ್ಥಿನಿಯ ಹೇಳಿಕೆಯನ್ನು ಆಧರಿಸಿ ಪೊಲೀಸರು ಆರೋಪಿಯನ್ನು ಗುರುತಿಸಿದ್ದಾರೆ. ಗುರುವಾರ ಸಂಜೆ ಆತನನ್ನು ಬಂಧಿಸಲು ಪೊಲೀಸ್ ತಂಡ ದಾಳಿ ನಡೆಸಿತು. ಆದರೆ ಆತ ಸ್ಥಳದಲ್ಲಿ ಇರಲಿಲ್ಲ.
ಆರೋಪಿಯು ಸ್ಥಳೀಯ ಆಹಾರ ವಿತರಣಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಆತನ ಮೊಬೈಲ್ ಸಂಖ್ಯೆಯೂ ಸ್ವಿಚ್ ಆಫ್ ಆಗಿದ್ದರಿಂದ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದರು. ಅನಂತರ ಕೊರಿಯಾ ಪ್ರದೇಶದ ಸಾಂಗ್ವಾನ್‌ನ ರೈಲ್ವೆ ಮಾರ್ಗದ ಕಡೆಗೆ ಆ ವ್ಯಕ್ತಿ ಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳಿಂದ ನೋಡಿರುವ ವ್ಯಕ್ತಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಇದನ್ನೂ ಓದಿ: Apache choppers: ಸೇನೆಗೆ ಮತ್ತೊಂದು ಬಲ; ಇದೇ ಮೊದಲ ಬಾರಿ ಅಪಾಚೆ ಹೆಲಿಕಾಪ್ಟರ್‌ಗಳು ಸೇರ್ಪಡೆ
ಕೂಡಲೇ ಚಾಕೇರಿ ಪೊಲೀಸ್ ಠಾಣೆಯ ಉಸ್ತುವಾರಿ ಸಂತೋಷ್ ಶುಕ್ಲಾ ಅವರು ಔಟ್‌ಪೋಸ್ಟ್ ಇನ್‌ಚಾರ್ಜ್ ಅಂಕಿತ್ ಖತಾನಾ ಮತ್ತು ಪೊಲೀಸ್ ಪಡೆಯೊಂದಿಗೆ ಸ್ಥಳಕ್ಕೆ ಹೋಗಿದ್ದು, ಪೊಲೀಸರನ್ನು ನೋಡಿದ ಆರೋಪಿ ಆದಿತ್ಯ ಗುಪ್ತ ಅವರ ಮೇಲೆ ಗುಂಡು ಹಾರಿಸಿದ್ದಾನೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಗುಂಡು ಹಾರಿಸಿದರು. ಈ ವೇಳೆ ಆರೋಪಿ ಕಾಲಿಗೆ ಗಾಯವಾಗಿದ್ದು, ಪೊಲೀಸರು ಆತನನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಎಸಿಪಿ ಚಾಕೇರಿ ಅಭಿಷೇಕ್ ಪಾಂಡೆ ತಿಳಿಸಿದ್ದಾರೆ. ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.