ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Road Accident: ಅವಲಗುರ್ಕಿ ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್ ಆಗಿದ್ದ ಪ್ರಕಾಶ್ ಸಾವು

ಆವಲಗುರ್ಕಿ ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್ ಪ್ರಕಾಶ್ ಮಧ್ಯಾಹ್ನ ಊಟದ ಸಮಯ ದಲ್ಲಿ ಚಿಕ್ಕಬಳ್ಳಾಪುರಕ್ಕೆ ಹೋಗುತ್ತಿದ್ದ ವೇಳೆ ಹರಿಹರಪುರ ಗ್ರಾಮದ ಗೇಟ್ ಸಮೀಪ ಎದುರುಗಡೆ ಯಿಂದ ಬಂದ ಹಾಸನ ಮೂಲದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿಗೂ ಭಾರೀ ಹಾನಿಯಾಗಿದೆ ಎನ್ನಲಾಗಿದೆ.

ಕಾರು ಬೈಕ್ ಢಿಕ್ಕಿ: ಬಿಲ್ ಕಲೆಕ್ಟರ್ ಆಗಿದ್ದ ಪ್ರಕಾಶ್ ಸಾವು

ಅಪಘಾತದಲ್ಲಿ ಮೃತರಾದ ಪ್ರಕಾಶ್ -

Profile
Ashok Nayak Jun 9, 2026 10:37 PM

ಚಿಕ್ಕಬಳ್ಳಾಪುರ: ತಾಲೂಕಿನ ಅವಲಗುರ್ಕಿ ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ 45 ವರ್ಷದ ಪ್ರಕಾಶ್ ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಮೃತ ಪಟ್ಟಿದ್ದಾರೆ.

ಆವಲಗುರ್ಕಿ ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್ ಪ್ರಕಾಶ್ ಮಧ್ಯಾಹ್ನ ಊಟದ ಸಮಯ ದಲ್ಲಿ ಚಿಕ್ಕಬಳ್ಳಾಪುರಕ್ಕೆ ಹೋಗುತ್ತಿದ್ದ ವೇಳೆ ಹರಿಹರಪುರ ಗ್ರಾಮದ ಗೇಟ್ ಸಮೀಪ ಎದುರುಗಡೆ ಯಿಂದ ಬಂದ ಹಾಸನ ಮೂಲದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿ ದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿಗೂ ಭಾರೀ ಹಾನಿಯಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Chinthamani Crime: ಮರೀನಾಯಕನಹಳ್ಳಿ ಗೇಟ್ ಬಳಿ ಅಕ್ರಮ ದಂಧೆಗೆ ಬ್ರೇಕ್: ಮೂವರ ವಿರುದ್ಧ ಪ್ರಕರಣ ದಾಖಲು!

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಪ್ರಕಾಶ್ ಅವರನ್ನು ಸ್ಥಳೀಯರು ತಕ್ಷಣ ಚಿಕ್ಕಬಳ್ಳಾ ಪುರ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲೇ ಪ್ರಕಾಶ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಅವಲಗುರ್ಕಿ ಗ್ರಾಮ ಪಂಚಾಯಿತಿಯಲ್ಲಿ ಸುಮಾರು 23 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಪ್ರಕಾಶ್ ತಮ್ಮ ಸರಳ ವ್ಯಕ್ತಿತ್ವ ಹಾಗೂ ಕರ್ತವ್ಯನಿಷ್ಠೆಯಿಂದ ಎಲ್ಲರ ಮೆಚ್ಚುಗೆ ಗಳಿಸಿದ್ದರು. ಅವರ ಆಕಸ್ಮಿಕ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಪಂಚಾಯಿತಿ ಸಿಬ್ಬಂದಿ, ಸ್ನೇಹಿತರು ಹಾಗೂ ಗ್ರಾಮಸ್ಥರು ಆಸ್ಪತ್ರೆಗೆ ಧಾವಿಸಿ ಅಂತಿಮ ದರ್ಶನ ಪಡೆದರು.

ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ಮಾಹಿತಿ ಬರಬೇಕಿದೆ.