Praveen Nettaru murder case: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಬಂಧನ
Praveen Nettaru murder case: ಪ್ರಕರಣದಲ್ಲಿ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ಆರೋಪಿ ಅಬ್ದುಲ್ ರಹಿಮಾನ್ ವಿದೇಶಕ್ಕೆ ಹಾರಿದ್ದ. ಹೀಗಾಗಿ, ಎನ್ಐಎ ಅಧಿಕಾರಿಗಳು ಅಬ್ದುಲ್ ರಹಿಮಾನ್ ಸೇರಿದಂತೆ ಆರು ಮಂದಿಯ ಸುಳಿವು ಕೊಟ್ಟರೆ ಬಹುಮಾನ ಕೊಡುವುದಾಗಿ ಘೋಷಿಸಿದ್ದರು.

ಆರೋಪಿ ಅಬ್ದುಲ್ ರಹಿಮಾನ್

ಮಂಗಳೂರು: ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು (Praveen Nettaru murder case) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ (NIA) ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಅಬ್ದುಲ್ ರಹಿಮಾನ್ನನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿ ಅಬ್ದುಲ್ ರಹಿಮಾನ್ ಕತಾರ್ನಲ್ಲಿ ತಲೆಮರೆಸಿಕೊಂಡಿದ್ದ. ಶುಕ್ರವಾರ (ಜು.4) ಕತಾರ್ನಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿದ್ದಂತೆ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಪ್ರಕರಣದಲ್ಲಿ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ಆರೋಪಿ ಅಬ್ದುಲ್ ರಹಿಮಾನ್ ವಿದೇಶಕ್ಕೆ ಹಾರಿದ್ದ. ಹೀಗಾಗಿ, ಎನ್ಐಎ ಅಧಿಕಾರಿಗಳು ಅಬ್ದುಲ್ ರಹಿಮಾನ್ ಸೇರಿದಂತೆ ಆರು ಮಂದಿಯ ಸುಳಿವು ಕೊಟ್ಟರೆ ಬಹುಮಾನ ಕೊಡುವುದಾಗಿ ಘೋಷಿಸಿದ್ದರು. ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ಆರೋಪಿ ಅಬ್ದುಲ್ ರಹಿಮಾನ್ ಸೇರಿದಂತೆ ಒಟ್ಟು 28 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪಿಎಫ್ಐ ಪ್ರಮುಖರ ಸೂಚನೆ ಮೇರೆಗೆ ಅಬ್ದುಲ್ ರಹಿಮಾನ್ ಸೇರಿದಂತೆ ಇತರರು ಸೇರಿಕೊಂಡು ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದರು ಎಂದು ಎನ್ಐಎ ಸಲ್ಲಿಸಿದ ಚಾರ್ಜ್ ಶೀಟ್ನಲ್ಲಿದೆ.
2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಎಂಬಾತನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಗಂಭೀರತೆ ಅರಿತ ಎನ್ಐಎ ಆಗಸ್ಟ್ 4ರಂದು ತನಿಖೆಯನ್ನು ಕೈಗೆತ್ತಿಕೊಂಡಿತ್ತು. ಈ ಪ್ರಕರಣದಲ್ಲಿ ಇದುವರೆಗೆ 23 ಜನ ಆರೋಪಿಗಳ ವಿರುದ್ಧ ಎನ್ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ನಾಪತ್ತೆಯಾಗಿರುವ 6 ಆರೋಪಿಗಳಿಗಾಗಿ ಎನ್ಐಎ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ.
ಇದನ್ನೂ ಓದಿ: Praveen Nettaru murder case: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್, ಪ್ರಮುಖ ಸಂಚುಕೋರ ಅತೀಕ್ ಅಹ್ಮದ್ ಅರೆಸ್ಟ್