ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Pregnant dies due to doctor's negligence: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಬಲಿ: ಚಿಂತಾಮಣಿಯಲ್ಲಿ ತಡರಾತ್ರಿ ಹೈಡ್ರಾಮಾ!

ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಗ್ರಾಮದ ಓಬಳೇಶ್ ಎಂಬುವವರ ಪತ್ನಿ ನರ್ಮದಾ (24)ಮೃತಪಟ್ಟ ದುರ್ದೈವಿ. ಎರಡು ತಿಂಗಳ ಹಿಂದೆಯಷ್ಟೇ ಗಂಡು ಮಗುವಿಗೆ ಜನ್ಮ ನೀಡಿದ್ದ ನರ್ಮದಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ಕುಟುಂಬ ನಿಯಂತ್ರಣ ಶಸ್ತ್ರಚಿಕಿತ್ಸೆಗೆ (ಮಕ್ಕಳಾಗದಂತೆ ಆಪರೇಷನ್)ಒಳಗಾಗಿದ್ದ ಅವರು, ಎರಡು ದಿನಗಳ ಹಿಂದೆಯಷ್ಟೇ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದರು.

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಬಲಿ: ಚಿಂತಾಮಣಿಯಲ್ಲಿ ಹೈಡ್ರಾಮಾ!

ವೈದ್ಯರ ಎಡವಟ್ಟಿನಿಂದಾಗಿ ಎರಡು ತಿಂಗಳ ಹಿಂದೆಯಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ನಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. -

Profile
Ashok Nayak May 11, 2026 10:13 PM

ಚಿಂತಾಮಣಿ: ವೈದ್ಯರ ಎಡವಟ್ಟಿನಿಂದಾಗಿ ಎರಡು ತಿಂಗಳ ಹಿಂದೆಯಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ನಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.

ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಗ್ರಾಮದ ಓಬಳೇಶ್ ಎಂಬುವವರ ಪತ್ನಿ ನರ್ಮದಾ (24)ಮೃತಪಟ್ಟ ದುರ್ದೈವಿ. ಎರಡು ತಿಂಗಳ ಹಿಂದೆಯಷ್ಟೇ ಗಂಡು ಮಗುವಿಗೆ ಜನ್ಮ ನೀಡಿದ್ದ ನರ್ಮದಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ಕುಟುಂಬ ನಿಯಂತ್ರಣ ಶಸ್ತ್ರಚಿಕಿತ್ಸೆಗೆ (ಮಕ್ಕಳಾಗದಂತೆ ಆಪರೇಷನ್)ಒಳಗಾಗಿದ್ದ ಅವರು, ಎರಡು ದಿನಗಳ ಹಿಂದೆ ಯಷ್ಟೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

ಇದನ್ನೂ ಓದಿ: Shidlaghatt Crime: ಪೊಲೀಸರ ಚುರುಕಿನ ಕಾರ್ಯಾಚರಣೆಗೆ ಸಿಕ್ಕಿಬಿದ್ದ ವಾಹನ ಕಳ್ಳ ಕಳುವಾಗಿದ್ದ 5 ವಾಹನಗಳ ಜಪ್ತಿ

ಆದರೆ, ಶಸ್ತ್ರಚಿಕಿತ್ಸೆಯಾದ ಜಾಗದಲ್ಲಿ ಅತಿಯಾದ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಈ ಸಾವಿಗೆ ನೇರ ಕಾರಣ ಎಂದು ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ.

ವೈದ್ಯರ ಬೇಜವಾಬ್ದಾರಿತನದಿಂದಲೇ ನರ್ಮದಾ ಮೃತಪಟ್ಟಿದ್ದಾರೆ ಎಂದು ಆಕ್ರೋಶ ಗೊಂಡ ಪೋಷಕರು ಮತ್ತು ಗ್ರಾಮಸ್ಥರು,ಮೃತದೇಹವನ್ನು ಆಸ್ಪತ್ರೆಯ ಮುಂದಿಟ್ಟು ತಡರಾತ್ರಿಯಿಡೀ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸಿದರೂ ಸಂಬಂಧಪಟ್ಟ ವೈದ್ಯರು ಸ್ಥಳಕ್ಕೆ ಬಾರದೆ ಇರುವುದು ಆಕ್ರೋಶಕ್ಕೆ ಮತ್ತಷ್ಟು ತುಪ್ಪ ಸುರಿದಂತಾಗಿದೆ.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ತವರು ಕ್ಷೇತ್ರದಲ್ಲೇ ಇಂತಹ ಘಟನೆ ನಡೆದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಇಬ್ಬರು ಹಸುಗೂಸುಗಳನ್ನು ಬಿಟ್ಟು ತಾಯಿ ಸಾವನ್ನಪ್ಪಿರುವುದು ಗ್ರಾಮದಲ್ಲಿ ಶೋಕ ಸಾಗರ ಮೂಡಿಸಿದೆ. ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಸುವುದಾಗಿ ಮೃತರ ಕುಟುಂಬಸ್ಥರು ಎಚ್ಚರಿಸಿದ್ದಾರೆ.