ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Puneeth Kerehalli: ಬನ್ನೇರುಘಟ್ಟದಲ್ಲಿ ಪುನೀತ್‌ ಕೆರೆಹಳ್ಳಿ ಆರೆಸ್ಟ್‌, ಯಾವ ಪ್ರಕರಣ?

ಬೆಂಗಳೂರು ಗ್ರಾಮಾಂತರ ಎಸ್ಪಿ ಅವರ ಮಾರ್ಗದರ್ಶನದಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪುನೀತ್ ಕೆರೆಹಳ್ಳಿಯ ಬಂಧನ ಸುದ್ದಿ ತಿಳಿದ ಬಳಿಕ, ಅವರ ಬೆಂಬಲಿಗರು ಠಾಣೆಯ ಬಳಿ ಜಮಾಯಿಸಲು ಯತ್ನಿಸಿದರೂ, ಪೊಲೀಸರು ಅವರನ್ನು ಒಳಗೆ ಬಿಡದೆ ನಿಯಂತ್ರಿಸಿದರು.

ಬನ್ನೇರುಘಟ್ಟದಲ್ಲಿ ಪುನೀತ್‌ ಕೆರೆಹಳ್ಳಿ ಆರೆಸ್ಟ್‌, ಯಾವ ಪ್ರಕರಣ?

ಪುನೀತ್‌ ಕೆರೆಹಳ್ಳಿ -

ಹರೀಶ್‌ ಕೇರ
ಹರೀಶ್‌ ಕೇರ Jan 17, 2026 10:34 AM

ಬೆಂಗಳೂರು, ಜ.17 : ವಲಸೆ ಕಾರ್ಮಿಕರು (migrant workers) ಇರುವ ಮನೆಗೆ ತೆರಳಿ ಅಕ್ರಮವಾಗಿ ನುಗ್ಗಿ ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಕೇಳಿ ಬೆದರಿಕೆ ಹಾಗೂ ಭೀತಿಯನ್ನುಂಟು ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಹಿಂದುತ್ವ ಸಂಘಟನೆ ನಾಯಕ ಪುನೀತ್ ಕೆರೆಹಳ್ಳಿಯನ್ನು (puneeth kerehalli) ಬನ್ನೇರುಘಟ್ಟ (Bannerughatta) ಪೊಲೀಸ್‌ ಠಾಣಾ ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಎಸ್ಪಿ ಅವರ ಮಾರ್ಗದರ್ಶನದಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು ಎನ್ನಲಾಗಿದೆ. ಪುನೀತ್ ಕೆರೆಹಳ್ಳಿಯ ಬಂಧನ ಸುದ್ದಿ ತಿಳಿದ ಬಳಿಕ, ಅವರ ಬೆಂಬಲಿಗರು ಠಾಣೆಯ ಬಳಿ ಜಮಾಯಿಸಲು ಯತ್ನಿಸಿದರೂ, ಪೊಲೀಸರು ಅವರನ್ನು ಒಳಗೆ ಬಿಡದೆ ನಿಯಂತ್ರಿಸಿದರು. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.

ಹುಡುಗರಂತೆ ಡ್ರೆಸ್‌ ಮಾಡಿ ಕದಿಯುತ್ತಿದ್ದ ಕಳ್ಳಿಯರ ಬಂಧನ

ಬೆಂಗಳೂರು: ನಗರದಲ್ಲಿ (Bengaluru) ಹುಡುಗರ (boys) ರೀತಿ ಡ್ರೆಸ್ ಮಾಡಿಕೊಂಡು ಮನೆಗಳ್ಳತನ (Theft Case) ಮಾಡುತ್ತಿದ್ದ ಇಬ್ಬರು ಹುಡುಗಿಯರನ್ನು ಪೊಲೀಸರು ಬಂಧಿಸಿದ್ದಾರೆ. ಹುಡುಗರೆಂದು ಭಾವಿಸಿ ಬಂಧಿಸಿ ಕರೆದೊಯ್ಯುವಾಗ ಇವರು ಖತರ್‌ನಾಕ್‌ ಕಳ್ಳಿಯರು ಎಂದು ಗೊತ್ತಾಗಿ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.

Fake Milk: ರಾಸಾಯನಿಕ ಬಳಸಿ ನಂದಿನಿ ಸೇರಿ ಹಲವು ಕಂಪನಿಗಳ ನಕಲಿ ಹಾಲು ತಯಾರಿಕೆ, 8 ಮಂದಿ ಬಂಧನ

ಜ.13 ರಂದು ಸಂಪಿಗೇಹಳ್ಳಿಯ ಸಂಗಮೇಶ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದಾಗ ಪೊಲೀಸರು ಸಿಸಿಟಿವಿ ಪರಿಶೀಲಿಸಿದಾಗ ಇಬ್ಬರು ಹುಡುಗರು ನಡೆದುಕೊಂಡು ಹೋಗುವುದು ಪತ್ತೆಯಾಗಿತ್ತು. ಸಿಸಿಟಿವಿ ಬೆನ್ನತ್ತಿ ಆರೋಪಿಗಳನ್ನು ವಶಕ್ಕೆ ಪಡೆದ ವೇಳೆ ಅದು ಹುಡುಗರಲ್ಲ, ಹುಡುಗಿಯರು ಎನ್ನುವುದು ಪತ್ತೆಯಾಗಿದೆ. ಕಳ್ಳತನ ಎಸಗಿದ ಶಾಲು ಮತ್ತು ನೀಲು ಅವರನ್ನು ಬಂಧಿಸಿದ್ದಾರೆ.