ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪ್ರೀತಿ ನಿರಾಕರಣೆ; ಮೈಸೂರಿನಲ್ಲಿ ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿಕೊಂಡ ಪಾಗಲ್ ಪ್ರೇಮಿ

ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್‌ ಪ್ರೇಮಿಯೊಬ್ಬ ತನ್ನ ಮೇಲೆ ಪೆಟ್ರೋಲ್‌ ಸುರಿದುಕೊಂಡು ಆಕೆಯನ್ನು ತಬ್ಬಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಚಂದನ್ (27) ಈ ಕೃತ್ಯ ಎಸಗಿದ್ದಾನೆ.

ಮೈಸೂರಿನಲ್ಲಿ ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿಕೊಂಡ ಪಾಗಲ್ ಪ್ರೇಮಿ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Sep 30, 2026 11:36 AM

ಮೈಸೂರು: ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್‌ ಪ್ರೇಮಿಯೊಬ್ಬ ತನ್ನ ಮೇಲೆ ಪೆಟ್ರೋಲ್‌ ಸುರಿದುಕೊಂಡು ಆಕೆಯನ್ನು ತಬ್ಬಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರ (Mysuru News) ಬಡಾವಣೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ (Viral Video) ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಚಂದನ್ (27) ಈ ಕೃತ್ಯ ಎಸಗಿದ್ದು, ಈತನಿಗೆ ಶೇ. 80ರಷ್ಟು ಸುಟ್ಟ ಗಾಯಗಳಾಗಿದ್ದರೆ, ಈತನಿಂದ ತಪ್ಪಿಸಿಕೊಂಡ ಯುವತಿಗೂ ಶೇ. 20ರಷ್ಟು ಸುಟ್ಟ ಗಾಯಗಳಾಗಿವೆ.

ಆರೋಪಿ ಯುವಕನನ್ನು ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ನಿವಾಸಿ ಚಂದನ್‌ (27) ಎಂದು ಗುರುತಿಸಲಾಗಿದೆ. ಪಿಯುಸಿ ತನಕ ಓದಿದ್ದ ಚಂದನ್‌ ಊರಿನಲ್ಲಿ ವ್ಯವಸಾಯ ಮಾಡಿಕೊಂಡಿದ್ದ ಈ ಯುವಕ ಅದೇ ಗ್ರಾಮದ ಯುವತಿಯನ್ನು 3 ವರ್ಷದಿಂದ ಪ್ರೀತಿಸುತ್ತಿದ್ದ. ಈ ಕುರಿತಂತೆ ಆಕೆಗೆ ಪ್ರೇಮ ನಿವೇದನೆ ಮಾಡಿದ್ದಾನೆ. ಆದರೆ ಯುವತಿ ಒಪ್ಪಿರಲಿಲ್ಲ. ಇದೇ ವಿಷಯಕ್ಕೆ ಯುವತಿ ಮನೆಯವರು ಚಂದನ್‌ಗೆ ಎಚ್ಚರಿಕೆ ಸಹ ನೀಡಿದ್ದರು. ಕೆಲ ದಿನಗಳಿಂದ ಸುಮ್ಮನಿದ್ದ ಚಂದನ ಒಂದು ವಾರದಿಂದ ಮತ್ತೆ ಯುವತಿಗೆ ಪೀಡಿಸತೊಡಗಿದ್ದ ಎನ್ನಲಾಗಿದೆ.

ವಿಡಿಯೋ ನೋಡಿ



ಯುವತಿ ವಿದ್ಯಾಭ್ಯಾಸಕ್ಕಾಗಿ ವಿಜಯನಗರದ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದಳು. ಹಾಸ್ಟೆಲ್‌ನಿಂದ ಕಾಲೇಜಿಗೆ ಹೋಗುತ್ತಿದ್ದಾಗ ಚಂದನ್ ಆಕೆಯನ್ನು ಅಡ್ಡಗಟ್ಟಿದ್ದ ಎಂದು ತಿಳಿದುಬಂದಿದೆ. ಈ ಭಯಾನಕ ಘಟನೆಯು ವಿಡಿಯೋದಲ್ಲಿ ಸೆರೆಯಾಗಿದ್ದು, ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿ ನೀಡಿದ ದೂರನ್ನು ಆಧರಿಸಿ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ಕೋಡಿಯಾಲ ಹೊಸಪೇಟೆ ಯುವಕನ ಕೊಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಕಳೆದ ತಿಂಗಳು, ಯುವತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಯುವಕನ ಬೈಕ್​ಗೆ ಪಾಗಲ್ ಪ್ರೇಮಿಯೊಬ್ಬ ಬೆಂಕಿ ಹಚ್ಚಿದ ಘಟನೆ ಶಿವಮೊಗ್ಗದಲ್ಲಿ ನಡೆದಿತ್ತು. ಯುವತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ ಎಂಬ ಕೋಪದಲ್ಲಿ ಆರೋಪಿ ಈ ಕೃತ್ಯ ಎಸಗಿದ್ದ. ಆರೋಪಿ ಮಣಿಕಂಠ ಮೂಲತಃ ಮಂಡ್ಯ ಜಿಲ್ಲೆ ನಿವಾಸಿ. ಈತನಿಗೆ ಇನ್​ಸ್ಟಾಗ್ರಾಮ್​ನಲ್ಲಿ‌ ಶಿವಮೊಗ್ಗದ ಯುವತಿಯ ಪರಿಚಯವಾಗಿತ್ತು. ಇದರಿಂದ‌ ಮಣಿಕಂಠ ಶಿವಮೊಗ್ಗಕ್ಕೆ ಬಂದು ಇಲ್ಲಿಯೇ ನೆಲೆಸಿದ್ದ. ಆದರೆ, ಇತ್ತಿಚೇಗೆ ಯುವತಿಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಯವಾಗಿದ್ದು, ನಿಶ್ಚಿತಾರ್ಥ ಕೂಡ ನಡೆದಿತ್ತು. ಇದರಿಂದ‌ ಕೋಪಗೊಂಡ ಮಣಿಕಂಠ ಕುಡಿದು ಯುವತಿ ಮನೆ ಮುಂದೆ ಬಂದು ಅಲ್ಲಿ ನಿಲ್ಲಿಸಿದ್ದ ನಿಶ್ಚಿತಾರ್ಥ ಮಾಡಿಕೊಂಡ ಯುವಕನ ಬೈಕ್​ಗೆ ಬೆಂಕಿ ಹಚ್ಚಿದ್ದ.