BS Yediyurappa: ಪೋಕ್ಸೊ ಕೇಸ್‌ನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ತುಸು ರಿಲೀಫ್; ಜಾಮೀನು ಷರತ್ತು ಸಡಿಲಿಕೆ
BS Yediyurappa: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಆರೋಪದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕೇಸ್‌ಗೆ ಸಂಬಂಧಿಸಿ ಜಾಮೀನು ಷರತ್ತನ್ನು ಹೈಕೋರ್ಟ್ ಸಡಿಲಿಕೆ ಮಾಡಿದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ. -
ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೈಕೋರ್ಟ್ ತುಸು ರಿಲೀಫ್ ನೀಡಿದೆ. ಅನುಮತಿಯಿಲ್ಲದೇ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ತನ್ನು ಅನ್ನು ಸಡಿಲಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಇದರಿಂದ ಮಾಜಿ ಸಿಎಂ ಯಾವುದೇ ಕಾನೂನಾತ್ಮಕ ಅಡೆತಡೆ ಇಲ್ಲದೇ ದೇಶಾದ್ಯಂತ ಪ್ರವಾಸ ಕೈಗೊಳ್ಳಬಹುದಾಗಿದೆ.
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ದಾಖಲಾಗಿರುವ ಫೋಕ್ಸೊ ಪ್ರಕರಣ ಸಂಬಂಧ ಜಾಮೀನು ನೀಡುವ ಸಂದರ್ಭದಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ತು ಸಡಿಲಗೊಳಿಸಬೇಕೆಂದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನು ವಿಚಾರಣೆ ನಡೆಸಿದ ಕೋರ್ಟ್, ಷರತ್ತು ಸಡಿಲಿಕೆ ಮಾಡಿ ಆದೇಶಿಸಿದೆ.
ಏನಿದು ಪ್ರಕರಣ?
2024ರ ಫೆಬ್ರವರಿ 2ರಂದು ಬೆಂಗಳೂರಿನ ನಿವಾಸದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿಯ ತಾಯಿ ಮಾರ್ಚ್ 14, 2024ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಳೆಯ ಲೈಂಗಿಕ ದೌರ್ಜನ್ಯ ಪ್ರಕರಣವೊಂದಕ್ಕೆ ನ್ಯಾಯ ಒದಗಿಸುವಂತೆ ಕೋರಿ ಬಾಲಕಿ ಮತ್ತು ಆಕೆಯ ತಾಯಿ ಯಡಿಯೂರಪ್ಪ ಅವರನ್ನು ಭೇಟಿಯಾಗಲು ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ದೂರು ದಾಖಲಾದ ನಂತರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿತ್ತು. ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದ್ದು, ಈಗಾಗಲೇ ಕೋರ್ಟ್ ಸಹ ಜಾಮೀನು ನೀಡಿದೆ.
ಮಾಜಿ ಸಿಎಂ ಸಿದ್ದರಾಮಯ್ಯ, ಪತ್ನಿ ವಿರುದ್ಧ ಮುಡಾ ಕೇಸ್ : ವಿಚಾರಣೆ ಜುಲೈ 3ಕ್ಕೆ ಮುಂದೂಡಿಕೆ
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರ ವಿರುದ್ಧದ ತನಿಖೆಯ ‘ಬಿ’ ರಿಪೋರ್ಟ್ (ಅಂತಿಮ ವರದಿ) ಅಂಗೀಕಾರವನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಇಂದು ನಡೆಸಿದೆ.
ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್ ಪೀಠವು ಪ್ರಮುಖ ಆದೇಶವೊಂದನ್ನು ನೀಡಿದ್ದು, ಅರ್ಜಿದಾರರು ಎತ್ತಿರುವ ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ ತಮಗೇನಾದರೂ ಆಕ್ಷೇಪಣೆಗಳಿದ್ದರೆ ಅದನ್ನು ಲಿಖಿತ ರೂಪದಲ್ಲಿ ಸಲ್ಲಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಲೋಕಾಯುಕ್ತ ಪರ ವಕೀಲರಿಗೆ ಸೂಚನೆ ನೀಡಿದೆ. ಪ್ರತಿವಾದಿಗಳಿಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಲು ನ್ಯಾಯಾಲಯವು ಈ ಮೂಲಕ ಕಾಲಾವಕಾಶ ನೀಡಿದೆ.
ಅಪರಾಧಗಳಿಗೆ ಕಡಿವಾಣ ಹಾಕಲು ಹೊಸ ಹೆಜ್ಜೆ: ರಾಜ್ಯಾದ್ಯಂತ ಆ್ಯಂಟಿ-ರೌಡಿ ಸ್ಕ್ವಾಡ್‌ಗಳ ರಚನೆ
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮುಡಾ ಸೈಟುಗಳ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದ್ದರೂ ಲೋಕಾಯುಕ್ತ ಪೊಲೀಸರು ಸಮರ್ಪಕವಾಗಿ ತನಿಖೆ ನಡೆಸದೇ ಅವಸರದಲ್ಲಿ ‘ಬಿ’ ರಿಪೋರ್ಟ್ ಸಲ್ಲಿಸಿದ್ದಾರೆ. ಹೀಗಾಗಿ ಕೆಳ ನ್ಯಾಯಾಲಯವು ಈ ವರದಿಯನ್ನು ಅಂಗೀಕರಿಸಿರುವುದು ಕಾನೂನುಬಾಹಿರ ಎಂದು ವಾದಿಸಿದರು. ಪ್ರಕರಣದ ಆಳವಾದ ಮರುತನಿಖೆಯಾಗಬೇಕು ಎಂದು ಅವರು ನ್ಯಾಯಾಲಯವನ್ನು ಒತ್ತಾಯಿಸಿದರು.
ವಾದ-ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್, ಪ್ರತಿವಾದಿಗಳಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಅರ್ಜಿಯ ಮುಂದಿನ ವಿಚಾರಣೆಯನ್ನು ಜುಲೈ 3ಕ್ಕೆ ಮುಂದೂಡಿದೆ.