ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Rickey Rai Case: ನನ್ನ ಮೇಲೆ ದಾಳಿ ಮಾಡಿದ್ದು ಇವರೇ ; ಪೊಲೀಸರಿಗೆ ಮಹತ್ವದ ಮಾಹಿತಿ ನೀಡಿ ರಿಕ್ಕಿ ರೈ

ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ಬಿಡದಿ ಬಳಿ ನಡೆದಿದೆ. ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ರಾತ್ರಿ 12:50ರ ಸುಮಾರಿಗೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ದಾಳಿ ವೇಳೆ ರಿಕಿ ರೈ ಮೂಗು, ಕೈಗೆ ಗುಂಡು ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾಳಿ ಮಾಡಿದವರ ಕುರಿತು ಪೊಲೀಸರಿಗೆ ಮಹತ್ವದ ಮಾಹಿತಿ ನೀಡಿ ರಿಕ್ಕಿ ರೈ

Profile Vishakha Bhat Apr 20, 2025 2:20 PM

ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ಬಿಡದಿ ಬಳಿ ನಡೆದಿದೆ. ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ರಾತ್ರಿ 12:50ರ ಸುಮಾರಿಗೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ದಾಳಿ ವೇಳೆ ರಿಕಿ ರೈ ಮೂಗು, ಕೈಗೆ ಗುಂಡು ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ರಿಕಿ ರೈಗೆ ಎಚ್ಚರವಾಗಿದ್ದು, ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ ಎಂದು ತಿಳಿದು ಬಂದಿದೆ. ರಿಕಿ ರೈ ತಮ್ಮ ಮೇಲೆ ನಡೆದ ದಾಳಿಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಡದಿ ಫಾರ್ಮ್‌ ಹೌಸ್‌ ಬಳಿ ಮೂವರು ದುಷ್ಕರ್ಮಿಗಳು ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿ ಎಸ್ಕೇಪ್ ಆಗಿದ್ದರು. ಪರಿಣಾಮ ರಿಕ್ಕಿ ರೈ ಅವರ ಮೂಗು ಹಾಗೂ ಬಲ ಬುಜಕ್ಕೆ ಗುಂಡು ತಗುಲಿತ್ತು. ಆ ಕೂಡಲೇ ಅವರನ್ನು ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ರಿಕಿ ರೈ ಆರೋಪಿಗಳ ಕುರಿತು ಮಾಹಿತಿ ನೀಡಿದ್ದಾರೆ. ಎಫ್​ಐಆರ್​ನಲ್ಲಿ ಉಲ್ಲೇಖಿಸಿರುವ ಆರೋಪಿಗಳಾದ ರಾಕೇಶ್ ಮಲ್ಲಿ, ಅನುರಾಧ, ನಿತೇಶ್ ಶೆಟ್ಟಿ, ವೈದ್ಯನಾಥನ್ ಇವರೇ ನನ್ನ ಮೇಲೆ ಅಟ್ಯಾಕ್ ಮಾಡಿಸಿದ್ದಾರೆ‌ ಎಂದು ರಿಕಿ ರೈ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಸ್ತಿ ವಿಚಾರವಾಗಿಯೇ ದಾಳಿ ನಡೆದಿದೆ ಎಂದು ಅವರು ಹೇಳಿದ್ದಾರೆ. ನಾನು ರಷ್ಯಾದಲ್ಲಿದ್ದೆ, ಜಾಮೀನು ವಿವಾದ ಸಂಬಂಧ ಕೋರ್ಟ್ ನಲ್ಲಿ ಕೇಸ್ ಇತ್ತು. ಹೀಗಾಗಿ, ಬೆಂಗಳೂರಿಗೆ ಬಂದಿದ್ದೆ. ನಾನು ಬೆಂಗಳೂರಿನ ಸದಾಶಿವನಗರ ಹಾಗೂ ಬಿಡದಿಯಲ್ಲಿರುವ ಮನೆಯಲ್ಲಿ ವಾಸವಿರುತ್ತಿದ್ದೆ. 12 ಗಂಟೆಗೆ ಎರಡು ಕಾಲ್ ಬಂದಿದ್ದು ಹಾಗಾಗಿ ಹೊರಟಿದೆ. ಸದಾಶಿವನಗರ ಮನೆಗೆ ಹೋಗುವಾಗ ಮನೆಯಿಂದ ಹೊರಗಿನ ರಸ್ತೆಗೆ ಬಂದಾಗ ಅಟ್ಯಾಕ್ ಮಾಡಲಾಗಿದೆ. ನನ್ನ ಕೈ ಹಾಗೂ ಮುಗಿಗೆ ಗುಂಡು ತಗಲಿದೆ. ನನ್ನ ಸ್ನೇಹಿತರು ಹಾಗೂ ಡ್ರೈವರ್ ಆಸ್ಪತ್ರೆಗೆ ಸೇರಿಸಿದ್ರು. ರಾಕೇಶ್ ಮಲ್ಲಿ ಹಾಗೂ ಅನುರಾಧರೇ ಅಟ್ಯಾಕ್ ಮಾಡಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: Ricky Rai Case: ಮುತ್ತಪ್ಪ ರೈ ಕೋಟೆ ಭೇದಿಸಿದ ಬುಲೆಟ್; ರಿಕ್ಕಿ ರೈ ಮೇಲೆ ಅಟ್ಯಾಕ್ ಯಾರ ಕೃತ್ಯ?

ಸದ್ಯ ಪೊಲೀಸರು ಹಂತಕರಿಗಾಗಿ ಬಲೆ ಬೀಸಿದ್ದು, ಕಾರು ಚಾಲಕ ರಾಜುನಿಂದ ಘಟ‌ನೆ ಬಗ್ಗೆ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಬಿಡದಿ ಇನ್ಸ್ಪೆಕ್ಟರ್ ಶಂಕರ್ ನಾಯಕ್ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ.