ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಭೀಕರ ಅಪಘಾತ, ರಸ್ತೆ ತಡೆಗೋಡೆಗೆ ಪಿಕಪ್‌ ಡಿಕ್ಕಿಯಾಗಿ ನಾಲ್ವರು ಸಾವು

ಮೃತಪಟ್ಟ ನಾಲ್ವರು ತೆಲಂಗಾಣದ ಹಿಂದೂಪುರ ನಿವಾಸಿಗಳು ಎಂದು ತಿಳಿದು ಬಂದಿದೆ. ಗೂಡ್ಸ್ ಪಿಕಪ್ ವಾಹನ ಚಾಲಕ ಆನಂದ್‌ಗೆ ಗಂಭೀರವಾದ ಗಾಯಗಳಾಗಿವೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕುರಿ ಖರೀದಿಸಲು ಯಾದಗಿರಿ ಜಿಲ್ಲೆಯ ಶಹಾಪುರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ಕುರಿತು ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ಅಪಘಾತ, ರಸ್ತೆ ತಡೆಗೋಡೆಗೆ ಪಿಕಪ್‌ ಡಿಕ್ಕಿಯಾಗಿ ನಾಲ್ವರು ಸಾವು

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Apr 18, 2025 7:45 AM

ರಾಯಚೂರು : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ (Road Accident) ಸಂಭವಿಸಿದ್ದು, ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು (Raichuru news) ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಗ್ರಾಮದ ಬಳಿ ನಡೆದಿದೆ. ಗೂಡ್ಸ್ ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲೇ (Four death) ಸಾವನ್ನಪ್ಪಿದ್ದಾರೆ. ಮೃತರನ್ನು ನಾಗರಾಜ್ (28) ಸೋಮು (38) ನಾಗಭೂಷಣ್ (36) ಹಾಗೂ ಮುರಳಿ (38) ಎಂದು ಗುರುತಿಸಲಾಗಿದೆ.

ಮೃತಪಟ್ಟ ನಾಲ್ವರು ತೆಲಂಗಾಣದ ಹಿಂದೂಪುರ ನಿವಾಸಿಗಳು ಎಂದು ತಿಳಿದು ಬಂದಿದೆ. ಗೂಡ್ಸ್ ಪಿಕಪ್ ವಾಹನ ಚಾಲಕ ಆನಂದ್‌ಗೆ ಗಂಭೀರವಾದ ಗಾಯಗಳಾಗಿವೆ. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕುರಿ ಖರೀದಿಸಲು ಯಾದಗಿರಿ ಜಿಲ್ಲೆಯ ಶಹಾಪುರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ಕುರಿತು ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿರ್ಮಾಣ ಹಂತದ ಕಟ್ಟಡದಲ್ಲಿ ದಂಪತಿ ಶವ ಪತ್ತೆ

ಬೆಂಗಳೂರು: ಬೆಂಗಳೂರಿನಲ್ಲಿ (Bengaluru news) ನಿರ್ಮಾಣ ಹಂತದ ಕಟ್ಟಡ ಒಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ದಂಪತಿಗಳ ಶವ (body found) ಪತ್ತೆಯಾಗಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ (crime news) ಈ ಘಟನೆ ನಡೆದಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿ ಪರ್ವೀನ್ ಮತ್ತು ಮೆಹಬೂಬ್ ಎನ್ನುವ ದಂಪತಿಗಳ ಶವ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ (Self harming) ಮೆಹಬೂಬ್ ಪತ್ನಿ ಪರ್ವೀನ್ ಶವ ಪತ್ತೆಯಾದರೆ, ಇನ್ನು ನೆಲದ ಮೇಲೆ ಬಿದ್ದಿರುವ ಸ್ಥಿತಿಯಲ್ಲಿ ಪತಿ ಮೆಹಬೂಬ್ ಶವ ಪತ್ತೆಯಾಗಿದೆ.

ಇಬ್ಬರೂ ಕಟ್ಟಡ ನಿರ್ಮಾಣದ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಸಂಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಾಣುತ್ತಿದೆ. ನಿನ್ನೆ ನಿರ್ಮಾಣ ಕೆಲಸ ಮುಗಿಸಿ ಕಾರ್ಮಿಕರೆಲ್ಲ ತೆರಳಿದ ಬಳಿಕ ಈ ಘಟನೆ ನಡೆದಿರಬಹುದು ಎನ್ನಲಾಗಿದೆ. ಇತರ ಕಾರ್ಮಿಕರನ್ನು ವಿಚಾರಿಸಲಾಗುತ್ತಿದ್ದು, ದಂಪತಿಗಳ ವಿವರ ಶೀಘ್ರದಲ್ಲೇ ದೊರೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: Accident news: ಮೆಟ್ರೋ ವಯಾಡಕ್ಟ್‌ ಬಿದ್ದು ಆಟೋ ಚಾಲಕ ಸಾವು ಪ್ರಕರಣ: ಮೂವರ ಮೇಲೆ ಎಫ್‌ಐಆರ್