ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Assault Case: ಬೆಂಗಳೂರಿನಲ್ಲಿ ರೌಡಿಗಳ ದಾಂಧಲೆ, ಪಾನ್‌ ಶಾಪ್‌ ಚಿಂದಿ, ಮಾರಕಾಸ್ತ್ರಗಳಿಂದ ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಬಷೀರ್ ಎಂಬವರ ಮನೆಗೆ ನುಗ್ಗಿ 10ಕ್ಕೂ ಹೆಚ್ಚು ಪುಡಿ ರೌಡಿಗಳು ಹಲ್ಲೆ ನಡೆಸಿ ದಾಂಧಲೆ ಮಾಡಿದ್ದಾರೆ. ಪಾನ್ ಶಾಪ್‌ನಲ್ಲಿದ್ದ ಬಾಟಲ್‌ಗಳನ್ನ ಒಡೆದು ಹಾಕಿ ಎಸ್ಕೇಪ್ ಆಗಿದ್ದಾರೆ. ಇದರ ಜೊತೆಗೆ, ಕಾರೊಂದರ ಮೇಲೂ ರೌಡಿಗಳು ದಾಳಿ ಮಾಡಿದ್ದಾರೆ. ಕಾರಿನ ಒಳಗೆ ಇದ್ದ ಇಬ್ಬರು ಯುವಕರ ಮೇಲೆ ಪುಡಿ ರೌಡಿಗಳು ದಾಳಿ ಮಾಡಲು ಯತ್ನಿಸಿದ್ದಾರೆ. ಕಾರಿನೊಳಗಿದ್ದ ಯುವಕರು ಅದೃಷ್ಟವಶಾತ್ ಗ್ರೇಟ್ ಎಸ್ಕೇಪ್ ಆಗಿದ್ದಾರೆ.

ಬೆಂಗಳೂರಿನಲ್ಲಿ ರೌಡಿಗಳ ದಾಂಧಲೆ, ಮಾರಕಾಸ್ತ್ರಗಳಿಂದ ಹಲ್ಲೆ

ರೌಡಿಗಳಿಂದ ದಾಂಧಲೆ -

ಹರೀಶ್‌ ಕೇರ
ಹರೀಶ್‌ ಕೇರ Dec 29, 2025 7:53 AM

ಬೆಂಗಳೂರು, ಡಿ.29: ಕ್ಷುಲ್ಲಕ ಕಾರಣಕ್ಕೆ ಪುಡಿ ರೌಡಿಗಳ (Rowdy sheeter)ಗುಂಪೊಂದು ಪಾನ್ ಶಾಪ್ (Pan Shop) ಮೇಲೆ ದಾಳಿ ನಡೆಸಿ ಅಲ್ಲಿದ್ದ ಅಂಗಡಿ ಮಾಲಿಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ (Assault Case) ನಡೆಸಿರುವ ಘಟನೆ ಬೆಂಗಳೂರಿನ (Bengaluru crime news) ಕತ್ರಿಗುಪ್ಪೆಯಲ್ಲಿ (Kathriguppe) ನಡೆದಿದೆ.

ಕ್ಷುಲ್ಲಕ ಕಾರಣಕ್ಕೆ ಬಷೀರ್ ಎಂಬವರ ಮನೆಗೆ ನುಗ್ಗಿ 10ಕ್ಕೂ ಹೆಚ್ಚು ಪುಡಿ ರೌಡಿಗಳು ಹಲ್ಲೆ ನಡೆಸಿ ದಾಂಧಲೆ ಮಾಡಿದ್ದಾರೆ. ಪಾನ್ ಶಾಪ್‌ನಲ್ಲಿದ್ದ ಬಾಟಲ್‌ಗಳನ್ನ ಒಡೆದು ಹಾಕಿ ಎಸ್ಕೇಪ್ ಆಗಿದ್ದಾರೆ. ಇದರ ಜೊತೆಗೆ, ಕಾರೊಂದರ ಮೇಲೂ ರೌಡಿಗಳು ದಾಳಿ ಮಾಡಿದ್ದಾರೆ. ಕಾರಿನ ಒಳಗೆ ಇದ್ದ ಇಬ್ಬರು ಯುವಕರ ಮೇಲೆ ಪುಡಿ ರೌಡಿಗಳು ದಾಳಿ ಮಾಡಲು ಯತ್ನಿಸಿದ್ದಾರೆ. ಕಾರಿನೊಳಗಿದ್ದ ಯುವಕರು ಅದೃಷ್ಟವಶಾತ್ ಗ್ರೇಟ್ ಎಸ್ಕೇಪ್ ಆಗಿದ್ದಾರೆ.

ಸಿಸಿಟಿವಿಯಲ್ಲಿ ದಾಳಿಗಳ ದೃಶ್ಯ ಸೆರೆಯಾಗಿದೆ. ಬನಶಂಕರಿ ಮೂರನೇ ಹಂತ ಕತ್ರಿಗುಪ್ಪೆ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಮಚ್ಚು, ಲಾಂಗು ಹಿಡಿದು ಹಲ್ಲೆ ನಡೆಸಿದ್ದು ಕಂಡುಬಂದಿದೆ. ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಮತ್ತೆ ರೌಡಿಗಳ ಅಟ್ಟಹಾಸ ತೀವ್ರತೆ ಪಡೆದುಕೊಂಡಿರುವುದಕ್ಕೆ ಇದು ಸಾಕ್ಷಿಯಾಗಿದೆ.

ರಜೆ ಕೇಳಿದ್ದಕ್ಕೆ ಕರ್ತವ್ಯ ನಿರತ ಪೊಲೀಸ್‌ ಮೇಲೆ ಹಲ್ಲೆ ನಡೆಸಿದ ಹುಮಾಯೂನ್‌ ಕಬೀರ್‌ ಪುತ್ರ