Self Harming: ಸಾಲಕ್ಕೆ ಬೇಸತ್ತು ತಾಯಿ- ಮಗಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ
Self Harming: ಫೈನಾನ್ಸ್ ಸಾಲ ಕಟ್ಟಲಾಗದೆ ರೈಲಿಗೆ ತಲೆ ಕೊಟ್ಟು ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕೆಲವು ವರ್ಷಗಳ ಹಿಂದೆ ಸುವರ್ಣಮ್ಮ ಅವರ ಪತಿ ನಿಧನರಾಗಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಸಾಂದರ್ಭಿಕ ಚಿತ್ರ

ದಾವಣಗೆರೆ: ದಾವಣಗೆರೆಯಲ್ಲಿ (Davanagere news) ಘೋರವಾದ ದುರಂತ ಸಂಭವಿಸಿದೆ. ಹರಿಹರ (Harihara) ಬಳಿ ಇರುವ ತುಂಗಭದ್ರಾ ನದಿಗೆ (Tungabhadra River) ಅಡ್ಡಲಾಗಿ ನಿರ್ಮಿಸಿದ ರೈಲ್ವೇ ಸೇತುವೆ ಬಳಿ ತಾಯಿ- ಮಗಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ತಾಯಿ ಮಗಳನ್ನ ಗಂಗನರಸಿ ಗ್ರಾಮದ ಸುವರ್ಣಮ್ಮ (65) ಮತ್ತು ಗೌರಮ್ಮ (45) ಎಂದು ಗುರುತಿಸಲಾಗಿದೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆಯರಿಬ್ಬರ ರುಂಡ, ಮುಂಡ ಪ್ರತ್ಯೇಕವಾಗಿದ್ದು, ಅಂಗಾಂಗಗಳು ರಕ್ತಸಿಕ್ತವಾಗಿ ಛಿದ್ರವಾಗಿವೆ.
ಫೈನಾನ್ಸ್ ಸಾಲ ಕಟ್ಟಲಾಗದೆ ರೈಲಿಗೆ ತಲೆ ಕೊಟ್ಟು ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕೆಲವು ವರ್ಷಗಳ ಹಿಂದೆ ಸುವರ್ಣಮ್ಮ ಅವರ ಪತಿ ನಿಧನರಾಗಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಿದ್ದು, ಮತ್ತೊಬ್ಬ ಪುತ್ರಿ ದಿವ್ಯಾಂಗರಾಗಿದ್ದರು. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಬೆಳಗಾವಿ: ಬೆಳಗಾವಿಯಲ್ಲಿ (Belagavi news) ಘೋರವಾದ ದುರಂತ ಸಂಭವಿಸಿದೆ. ವಿಷ (Poison) ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ (Self harming) ಯತ್ನಿಸಿದ್ದು, ಅವರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮತ್ತೊಬ್ಬಳ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿ ನಗರದ ಜೋಶಿಮಾಳ್‌ನಲ್ಲಿ ಈ ದುರ್ಘಟನೆ ನಡೆದಿದೆ. ಮೃತ (death) ದುರ್ದೈವಿಗಳನ್ನು ಸಂತೋಷ ಕುರುಡೇಕರ್ (44), ಸುವರ್ಣ ಹಾಗು ಮಂಗಳ ಎಂದು ಗುರುತಿಸಲಾಗಿದೆ. ವಿಷ ಸೇವಿಸಿದ ಸುನಂದ ಕುರುಡೇಕರ್ ಎಂಬವರ ಸ್ಥಿತಿ ಗಂಭೀರವಾಗಿದೆ.
ಸುನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆತ್ಮಹತ್ಯೆಗೆ ಕಾರಣ ಏನು ಎಂಬುದನ್ನು ಪರಿಶೀಲನೆ ಮಾಡುತ್ತಿದ್ದಾರೆ. ಸಾಲದ ಹೊರೆ ಸಾಮೂಹಿಕ ಆತ್ಮಹತ್ಯೆಗೆ ಕಾರಣ ಇರಬಹುದು ಎಂದು ಶಂಕಿಸಲಾಗಿದೆ.
ಇದನ್ನೂ ಓದಿ: Accid attack: ಮದುವೆಗೆ ನಿರಾಕರಿಸಿದ ಸೊಸೆ ಮೇಲೆ ಆ್ಯಸಿಡ್ ಎರಚಿ ತಾನೂ ಬೆಂಕಿ ಹಚ್ಚಿಕೊಂಡ ಸೋದರ ಮಾವ