ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Suhas Shetty Murder: ಸುಹಾಸ್‌ ಶೆಟ್ಟಿ ಕೊಲೆ: ಇಂದು ಮಂಗಳೂರು ಬಂದ್‌

ಇಂದು (ಮೇ 2) ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್‌ಗೆ ಕರೆ ನೀಡಲಾಗಿದೆ ಎಂದು ವಿಹಿಂಪ ಮುಖಂಡ ಶರಣ್ ಪಂಪ್‌ವೆಲ್ ತಿಳಿಸಿದ್ದಾರೆ.

ಸುಹಾಸ್‌ ಶೆಟ್ಟಿ ಕೊಲೆ: ಇಂದು ಮಂಗಳೂರು ಬಂದ್‌

ಸುಹಾಸ್‌ ಶೆಟ್ಟಿ

ಹರೀಶ್‌ ಕೇರ ಹರೀಶ್‌ ಕೇರ May 2, 2025 6:32 AM

ಮಂಗಳೂರು: ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು(Suhas Shetty murder case) ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಹತ್ಯೆ ಖಂಡಿಸಿ ಇಂದು (ಮೇ 2) ದಕ್ಷಿಣ ಕನ್ನಡ ಜಿಲ್ಲೆ ಬಂದ್ ಮಾಡಲು ವಿಶ್ವ ಹಿಂದೂ ಪರಿಷತ್ (Vishwa Hindu Parishat) ಕರೆ ನೀಡಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್‌ಗೆ ಕರೆ ನೀಡಲಾಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್‌ಗೆ ಕರೆ ನೀಡಲಾಗಿದೆ ಎಂದು ವಿಹಿಂಪ ಮುಖಂಡ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.

ಎಲ್ಲಾ ವ್ಯಾಪಾರ, ವಹಿವಾಟು, ವಾಹನ ಸಂಚಾರ ಬಂದ್ ಮಾಡಲು ಕರೆ ನೀಡಲಾಗಿದೆ. ಸುಹಾಸ್ ಶೆಟ್ಟಿ ಮತ್ತು ಐವರು ಸಹಚರರು ಕಾರಿನಲ್ಲಿ ಹೋಗುತ್ತಿದ್ದರು. ಜಿಹಾದ್ ಇಸ್ಲಾಮಿಕ್ ಉಗ್ರ ಮುಸಲ್ಮಾನರು ಹತ್ಯೆ ಮಾಡಿದ್ದಾರೆ. ಇದು ಪೂರ್ವ ನಿಯೋಜಿತ ಕೃತ್ಯ ಎಂದು ಶರಣ್ ಪಂಪ್‌ವೆಲ್ ತಿಳಿಸಿದ್ದಾರೆ.

ಮಂಗಳೂರಿನ ಬಜ್ಪೆ ಬಳಿಯಲ್ಲಿ ಜುಲೈ 22, 2022ರಂದು ಸುರತ್ಕಲ್‌ನ ಫಾಜಿಲ್ ಕೊಲೆಯಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಸುಹಾನ್ ಶೆಟ್ಟಿ ಆಗಿದ್ದರು. ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಯ ಪ್ರತೀಕಾರವಾಗಿ ಫಾಜಿಲ್ ಕೊಲೆ ನಡೆದಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಸುಹಾನ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಸಂಬಂಧ ಬಜ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಗರದಲ್ಲಿ ನಾಕಾಬಂದಿ

ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮಂಗಳೂರು ಹಲವೆಡೆ ನಾಕಾಬಂದಿ ಹಾಕಿದ್ದಾರೆ. ಅಲ್ಲದೇ ಸೂಕ್ಷ್ಮ ಪ್ರದೇಶದಲ್ಲಿ ರಾತ್ರಿ ಇಡೀ ಗಸ್ತು ತಿರುಗಲು ಹಿರಿಯ ಅಧಿಕಾರಿಗಳು ಸೂಚನೆ ನೀಡಿದ್ದು, ಮಂಗಳೂರು ನಗರಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಯಾಕಂದ್ರೆ ಕೊಲೆಯಾದ ಸುಹಾಸ್ ಸ್ಥಳೀಯವಾಗಿ ಸಾಕಷ್ಟು ಕಾರ್ಯಕರ್ತರ ಪಡೆಯನ್ನು ಹೊಂದಿದ್ದ. ಹೀಗಾಗಿ ಪೊಲೀಸರು ಮುನ್ನೆಚ್ಚರಿಕೆ ಕ್ರಮಕೈಗೊಂಡಿದ್ದಾರೆ.

ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಭೀಕರ ದೃಶ್ಯ ವೈರಲ್‌; ಇಲ್ಲಿದೆ ಎದೆ ನಡುಗಿಸುವ ವಿಡಿಯೊ