ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಜತೆ ಚಾಟ್‌: ಮನೆಗೆ ಭೇಟಿ ನೀಡಿದಾಗ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ ಶಿಕ್ಷಕ

Crime News: ಶಿಕ್ಷಕನೊಬ್ಬ ಇನ್‌ಸ್ಟಾಗ್ರಾಮ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳೊಂದಿಗೆ ಸಂಪರ್ಕ ಸಾಧಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ. ಖಾಸಗಿ ಶಾಲೆಯಲ್ಲಿ ಪಾಠ ಮಾಡುವ ಶಿಕ್ಷಕ ಇನ್‌ಸ್ಟಾಗ್ರಾಮ್ ಮೂಲಕ ವಿದ್ಯಾರ್ಥಿನಿಯ ಸಂಪರ್ಕ ಬೆಳೆಸಿದ್ದಾನೆ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ಘಟನೆ ನಡೆದಿದೆ.

ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ

ಸಾಂದರ್ಭಿಕ ಚಿತ್ರ -

Priyanka P
Priyanka P Oct 8, 2026 6:12 PM

ಚೆನ್ನೈ, ಅ. 8: ಶಾಲಾ ಶಿಕ್ಷಕನೊಬ್ಬ ಇನ್‌ಸ್ಟಾಗ್ರಾಮ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳೊಂದಿಗೆ ಸಂಪರ್ಕ ಸಾಧಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ (Crime News). ಸದ್ಯ ಆತನನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ (Tamil Nadu) ಧರ್ಮಪುರಿ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಈ ಪ್ರಕರಣವು ಮಕ್ಕಳ ಸಾಮಾಜಿಕ ಮಾಧ್ಯಮ ಪ್ರವೇಶದ ಬಗ್ಗೆ ಮತ್ತೊಮ್ಮೆ ಕಳವಳವನ್ನು ಹುಟ್ಟುಹಾಕಿದೆ. ಖಾಸಗಿ ಶಾಲೆಯಲ್ಲಿ ಪಾಠ ಮಾಡುವ ಶಿಕ್ಷಕ, ಇನ್‌ಸ್ಟಾಗ್ರಾಮ್ ಮೂಲಕ ವಿದ್ಯಾರ್ಥಿನಿಯ ಸಂಪರ್ಕ ಬೆಳೆಸಿದ್ದಾನೆ.

ವಿದ್ಯಾರ್ಥಿನಿಗೆ ಆಮಿಷವೊಡ್ಡಿ ಮನೆಗೆ ಕರೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಶಿಕ್ಷಕನನ್ನು ಬಂಧಿಸಲಾಗಿದೆ. “ಈ ಘಟನೆ ಯಾವಾಗಿನಿಂದ ನಡೆಯುತ್ತಿತ್ತು ಎಂಬುದರ ಕುರಿತು ನಾವು ತನಿಖೆ ನಡೆಸುತ್ತಿದ್ದೇವೆ. ವಿದ್ಯಾರ್ಥಿನಿ ಅಪ್ರಾಪ್ತ ವಯಸ್ಕಳಾಗಿರುವುದರಿಂದ, ಇದು ಕಾನೂನು ಉಲ್ಲಂಘನೆಯ ಪ್ರಕರಣವಾಗಿದೆ. ಇಲ್ಲಿ ಸಮ್ಮತಿಯ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಪ್ರಕರಣದ ಬಳಿಕ, ಭಾರತದಲ್ಲಿನ ಮಕ್ಕಳ ಹಕ್ಕುಗಳ ಹೋರಾಟಗಾರರು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸುವ ಮಕ್ಕಳಿಗೆ ವಯೋಮಿತಿ ಮತ್ತು ಪೋಷಕರ ನಿಯಂತ್ರಣ ಸೇರಿ ಮತ್ತಷ್ಟು ಬಲವಾದ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ ಫೇಕ್‌ ಐಡಿ ಮೂಲಕ ಹಿಂದೂ ಯುವತಿಯನ್ನು ಬಲೆಗೆ ಬೀಳಿಸಿ ಮದುವೆಯಾದ ಮುಸ್ಲಿಂ ವ್ಯಕ್ತಿ

ಮಕ್ಕಳಿಗೆ ವಯಸ್ಸಿಗೆ ಅನುಗುಣವಾದ ನಿರ್ಬಂಧಗಳು ಮತ್ತು ಸಾಮಾಜಿಕ ಮಾಧ್ಯಮವನ್ನು ಸುರಕ್ಷಿತವಾಗಿ ಬಳಸುವ ನಿಯಮದ ಅಗತ್ಯವಿದೆ ಎಂದು ಹೇಳಿದ್ದಾರೆ. ಆದರೆ, ಬಾಲಕಿ ಇನ್‌ಸ್ಟಾಗ್ರಾಮ್‌ ಬಳಸುತ್ತಿದ್ದಳು ಎಂಬ ಒಂದೇ ವಿಷಯವನ್ನು ಈ ಘಟನೆಗೆ ಪ್ರಮುಖ ಕಾರಣ ಅಥವಾ ಸಮಸ್ಯೆ ಎಂದು ನೋಡಬಾರದೆಂದು ಮಕ್ಕಳ ಹಕ್ಕುಗಳ ಕಾರ್ಯಕರ್ತೆ ರಮ್ಯಾ ಶ್ರೀರಾಮ್ ಹೇಳಿದ್ದಾರೆ.

“ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯಲ್ಲಿ ಅವರ ವಯಸ್ಸಿಗೆ ಅನುಗುಣವಾಗಿ ಕೆಲವು ನಿರ್ಬಂಧ ಇರಬೇಕು. ಅವರು ಇನ್ನೂ ಬೆಳೆಯುತ್ತಿದ್ದಾರೆ, ನಂಬಿಕೆ ಮತ್ತು ವೈಯಕ್ತಿಕ ಮಿತಿಗಳ ಬಗ್ಗೆ ಕಲಿಯುತ್ತಿದ್ದಾರೆ. ಯಾರಾದರೂ ತಮ್ಮನ್ನು ದುರುಪಯೋಗಪಡಿಸಿಕೊಳ್ಳಲು ಅಥವಾ ತಮ್ಮ ಮುಗ್ಧತೆಯ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂಬುದನ್ನು ಅವರು ಯಾವಾಗಲೂ ಅರ್ಥ ಮಾಡಿಕೊಳ್ಳಲು ಸಾಧ್ಯವಾಗದೇ ಇರಬಹುದು” ಎಂದು ಅವರು ಹೇಳಿದ್ದಾರೆ.

ಇಂತಹ ನಿರ್ಬಂಧಗಳನ್ನು ಜಾರಿಗೊಳಿಸುವಾಗ ಘಟನೆಯಲ್ಲಿ ಸಂತ್ರಸ್ತರಾದ ಮಕ್ಕಳನ್ನೇ ತಪ್ಪಿತಸ್ಥರನ್ನಾಗಿ ನೋಡುವಂತಾಗಬಾರದು ಎಂದು ಅವರು ಒತ್ತಿ ಹೇಳಿದ್ದಾರೆ. ಪೋಷಕರ ಖಾತೆಯ ಮೂಲಕ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಗೆ ಅವಕಾಶ ನೀಡಿ, ಪೋಷಕರ ಮೇಲ್ವಿಚಾರಣೆಯಲ್ಲಿಯೇ ಬಳಸುವ ವ್ಯವಸ್ಥೆಯನ್ನೂ ಕಲ್ಪಿಸಬಹುದು ಎಂದು ಅವರು ತಿಳಿಸಿದ್ದಾರೆ. ಬಾಲಕಿ ನಂಬಿದ್ದ ವ್ಯಕ್ತಿಯೇ ಆ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎಂದು ರಮ್ಯಾ ಶ್ರೀರಾಮ್ ಹೇಳಿದ್ದಾರೆ.

ಹಲವು ದೇಶಗಳಲ್ಲಿ ಈಗಾಗಲೇ ಮಕ್ಕಳ ಸಾಮಾಜಿಕ ಮಾಧ್ಯಮ ಬಳಕೆಯ ಮೇಲೆ ನಿರ್ಬಂಧಗಳನ್ನು ವಿಧಿಸಲಾಗಿದೆ. ಆಸ್ಟ್ರೇಲಿಯಾ ಮತ್ತು ಇಂಡೋನೇಷ್ಯಾ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ನಿರ್ಬಂಧಿಸಿವೆ