ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಟಿಪ್ಪರ್​ ಲಾರಿ ಡಿಕ್ಕಿ; ಕಾಲೇಜು ಗೇಟಿನ ಎದುರೇ MBBS ವಿದ್ಯಾರ್ಥಿನಿ ಸಾವು

ರಾಜರಾಜೇಶ್ವರಿ ನಗರದಲ್ಲಿ ನಡೆದ ಭಯಾನಕ ರಸ್ತೆ ಅಪಘಾತದಲ್ಲಿ ಎಂಬಿಬಿಎಸ್‌ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ. ಮತ್ತೊಬ್ಬ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ಘಟನೆ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಮುಂಭಾಗದಲ್ಲಿ ನಡೆದಿದೆ. ಕೃತಿಕಾ (21) ಆರ್‌ಆರ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದರು. ಸ್ನೇಹಿತೆ ಹಂಸ (21) ಸಹ ಇದೇ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿನಿ.

ಟಿಪ್ಪರ್​ ಲಾರಿ ಡಿಕ್ಕಿ; ಕಾಲೇಜಿನ ಎದುರೇ MBBS ವಿದ್ಯಾರ್ಥಿನಿ ಸಾವು

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Mar 12, 2026 12:19 PM

ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ನಡೆದ ಭಯಾನಕ ರಸ್ತೆ ಅಪಘಾತದಲ್ಲಿ ಎಂಬಿಬಿಎಸ್‌ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ. (Road accident) ಮತ್ತೊಬ್ಬ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ಘಟನೆ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಮುಂಭಾಗದಲ್ಲಿ ನಡೆದಿದೆ. ನಿನ್ನೆ ಸಂಜೆ ಕಾಲೇಜು ಮುಗಿಸಿ ತೆರಳುವಾಗ ಈ ಅಪಘಾತ ಸಂಭವಿಸಿದೆ. ಆಕ್ಟೀವಾ ಬೈಕ್​​ಗೆ ಟಿಪ್ಪರ್​ ಲಾರಿ ಡಿಕ್ಕಿಯಾಗಿದ್ದು, ಕೃತಿಕಾ ಸ್ಥಳದಲ್ಲೇ ಸಾವನಪ್ಪಿದ್ದು, ಮತ್ತೊಬ್ಬಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೃತಿಕಾ (21) ಆರ್‌ಆರ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದರು. ಸ್ನೇಹಿತೆ ಹಂಸ (21) ಸಹ ಇದೇ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿನಿ. ನಿನ್ನೆ ಸಂಜೆ ಕಾಲೇಜು ಮುಗಿಸಿ ಇಬ್ಬರೂ ಆಕ್ಟಿವಾ ಸ್ಕೂಟರ್‌ನಲ್ಲಿ ಮನೆಗೆ ಹೋಗುತ್ತಿದ್ದರು. ಕಾಲೇಜಿನ ಗೇಟ್‌ ಹೊರಗಡೆಯೇ ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿ ಅತಿವೇಗದಿಂದ ಬಂದು ಡಿಕ್ಕಿ ಹೊಡೆದಿದೆ. ಕೃತಿಕಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಂಸಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ಮತ್ತು ಇತರರು ತಕ್ಷಣವೇ ಹಂಸನನ್ನು ಆರ್‌ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆಕೆಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ಲಾರಿ ಚಾಲಕನನ್ನು ವಶಕ್ಕೆ ಪಡೆಯುವ ಪ್ರಯತ್ನ ನಡೆಯುತ್ತಿದೆ. ಘಟನೆ ಕುರಿತು ಮಾಹಿತಿ ನೀಡಿದ ಪಶ್ಚಿಮ ವಿಭಾಗ ಸಂಚಾರ ಡಿಸಿಪಿ ಅನೂಪ್ ಶೆಟ್ಟಿ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿ, ‘ಮೈಸೂರು ರಸ್ತೆಯ ಆರ್‌ಆರ್ ಆಸ್ಪತ್ರೆ ಎಕ್ಸಿಟ್ ಗೇಟ್ ಮುಂಭಾಗದಲ್ಲಿ ಈ ಅಪಘಾತ ನಡೆದಿದೆ. ಇಬ್ಬರು ವಿದ್ಯಾರ್ಥಿನಿಯರು ಬೈಕ್‌ನಲ್ಲಿ ಹೋಗುತ್ತಿದ್ದರು. ಲಾರಿ ಡಿಕ್ಕಿಯಿಂದ ಹಿಂಬದಿ ಕುಳಿತಿದ್ದ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಇನ್ನೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

Road Accident: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ-ಇಬ್ಬರು ಸ್ಥಳದಲ್ಲೇ ಸಾವು

ಬೈಕ್‌ ಟ್ಯಾಕ್ಸಿಯಿಂದ ಬಿದ್ದು ಯುವತಿ ಸಾವು

ಬೈಕ್‌ ಟ್ಯಾಕ್ಸಿಯಿಂದ ಕೆಳಗೆ ಬಿದ್ದಾಗ ಟಿಪ್ಪರ್‌ ಹರಿದು ಯುವತಿ ಮೃತಪಟ್ಟಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಮೃತ ಯುವತಿಯನ್ನು ನಾಗಾಲ್ಯಾಂಡ್‌ನ ಲಿಗಾ ಜಿಮೊ ಎಂದು ಗುರುತಿಸಲಾಗಿದ್ದು, ಜೈಪುರದ ಬ್ಯೂಟಿ ಪಾರ್ಲರ್‌ ಒಂದರದಲ್ಲಿ ಆಕೆ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.