ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ಮನೆಯಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಹಿರಿಯ ಐಪಿಎಸ್ ಅಧಿಕಾರಿ; ಕಾರಣ ನಿಗೂಢ

ಹರಿಯಾಣದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಚಂಡೀಗಢದ ಸೆಕ್ಟರ್ 11ರ ತಮ್ಮ ಮನೆಯಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಮಂಗಳವಾರ (ಅಕ್ಟೋಬರ್‌ 7) ಬೆಳಕಿಗೆ ಬಂದಿದೆ. ಮೃತ ಅಧಿಕಾರಿಯನ್ನು ಹರಿಯಾಣದ ಎಡಿಜಿಪಿ ವೈ. ಪೂರನ್‌ ಕುಮಾರ್‌ ಎಂದು ಗುರುತಿಸಲಾಗಿದೆ.

ಮನೆಯಲ್ಲೇ ಗುಂಡು ಹಾರಿಸಿಕೊಂಡು ಹಿರಿಯ ಐಪಿಎಸ್ ಅಧಿಕಾರಿ ಆತ್ಮಹತ್ಯೆ

-

Ramesh B Ramesh B Oct 7, 2025 5:55 PM

ಚಂಡೀಗಢ: ಹರಿಯಾಣದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಮನೆಯಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಮಂಗಳವಾರ (ಅಕ್ಟೋಬರ್‌ 7) ಬೆಳಕಿಗೆ ಬಂದಿದೆ (Self Harming). ಚಂಡೀಗಢದ ಸೆಕ್ಟರ್ 11ರಲ್ಲಿ ಈ ಘಟನೆ ನಡೆದಿದೆ. ಮೃತ ಅಧಿಕಾರಿಯನ್ನು ಹರಿಯಾಣದ ಎಡಿಜಿಪಿ (Additional Director General of Police) ವೈ. ಪೂರನ್‌ ಕುಮಾರ್‌ (Y Puran Kumar) ಎಂದು ಗುರುತಿಸಲಾಗಿದೆ. ಅವರು ತಮ್ಮ ಸೇವಾ ರಿವಾಲ್ವರ್ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅವರ ಸೌಂಡ್‌ಪ್ರೂಫ್‌ ರೂಮ್‌ನಲ್ಲಿ ಘಟನೆ ನಡೆದಿದೆ. ಹೀಗಾಗಿ ಘಟನೆ ತಕ್ಷಣ ಗಮನಕ್ಕೆ ಬರಲಿಲ್ಲ ಎನ್ನಲಾಗಿದ. ಸದ್ಯ ವಿಧಿ ವಿಜ್ಞಾನ ತಂಡದ ಸದಸ್ಯರು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ತನಿಖೆ ಕೈಗೆತ್ತಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಚಂಡೀಗಢದ ಎಸ್‌ಎಸ್‌ಪಿ (Senior Superintendent of Police) ಕನ್ವರ್‌ದೀಪ್‌ ಕೌರ್‌ ಘಟನೆ ಬಗ್ಗೆ ಮಾಹಿತಿ ನೀಡಿ, ʼʼಸೆಕ್ಟರ್‌ 11ರ ಪೊಲೀಸ್‌ ಠಾಣೆಗೆ ಮಂಗಳವಾರ ಮಧ್ಯಾಹ್ನ1.30ರ ವೇಳೆಗೆ ಕರೆಬಂದಿದ್ದು, ಪೂರನ್‌ ಕುಮಾರ್‌ ಆತ್ಮಹತ್ಯೆಯ ಬಗ್ಗೆ ಮಾಹಿತಿ ನೀಡಲಾಗಿತ್ತುʼʼ ಎಂದಿದ್ದಾರೆ.

ಪೂರನ್‌ ಕುಮಾರ್‌ ಆತ್ಮಹತ್ಯೆಯ ಬಗ್ಗೆ ಮಾಹಿತಿ ನೀಡಿದ ಎಸ್‌ಎಸ್‌ಪಿ ಕನ್ವರ್‌ದೀಪ್‌ ಕೌರ್‌:



ಈ ಸುದ್ದಿಯನ್ನೂ ಓದಿ: Murder Case: ತವರು ಮನೆಯಿಂದ ಬರಲು ಒಪ್ಪದ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

ಎಸ್‌ಎಸ್‌ಪಿ ಹೇಳಿದ್ದೇನು?

ʼʼಐಪಿಎಸ್‌ ಅಧಿಕಾರಿ ವೈ. ಪೂರನ್‌ ಕುಮಾರ್‌ ಮೃತದೇಹ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಸಿಎಫ್‌ಎಸ್‌ಎಲ್‌ ತಂಡ ಸ್ಥಳಕ್ಕೆ ಧಾವಿಸಿದ್ದು, ತನಿಖೆ ಕೈಗೆತ್ತಿಕೊಳ್ಳಲಾಗಿದೆ. ಪೋಸ್ಟ್‌ ಮಾರ್ಟಮ್‌ ಬಳಿಕವಷ್ಟೇ ಹೆಚ್ಚಿನ ಮಾಹಿತಿ ಹೊರ ಬೀಳಲಿದೆʼʼ ಎಂದು ಕನ್ವರ್‌ದೀಪ್‌ ಕೌರ್‌ ವಿವರಿಸಿದ್ದಾರೆ. ಪ್ರಸ್ತುತ ಪೂರನ್‌ ಕುಮಾರ್ ಅವರ ಪತ್ನಿ, ಹಿರಿಯ ಐಎಎಸ್ ಅಧಿಕಾರಿ ಅಮ್ನೀತ್ ಪಿ. ಕುಮಾರ್ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ನೇತೃತ್ವದ ನಿಯೋಗದ ಜತೆ ಜಪಾನ್‌ನಲ್ಲಿದ್ದು, ನಾಳೆ (ಅಕ್ಟೋಬರ್‌ 8) ಭಾರತಕ್ಕೆ ಹಿಂದಿರುಗಲಿದ್ದಾರೆ.

2001 ಬ್ಯಾಚ್‌ನ ಐಪಿಎಸ್ ಅಧಿಕಾರಿ ಪೂರನ್‌ ಕುಮಾರ್‌ ಅವರನ್ನು ಈ ಹಿಂದೆ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾಗಿ (ಎಡಿಜಿಪಿ, ರೋಕ್ಟಕ್ ಶ್ರೇಣಿ) ನೇಮಿಸಲಾಗಿತ್ತು. ಇದಾದ ಬಳಿಕ ರೋಕ್ಟಕ್‌ನ ಸುನಾರಿಯಾದಲ್ಲಿರುವ ಪೊಲೀಸ್ ತರಬೇತಿ ಕೇಂದ್ರದ ಇನ್ಸ್‌ಪೆಕ್ಟರ್ ಜನರಲ್ ಆಗಿ ವರ್ಗಾಯಿಸಲಾಯಿತು.