Tragedy at stone quarry: ಕಲ್ಲು ಕ್ವಾರಿಯಲ್ಲಿ ದುರಂತ: 30 ಅಡಿ ಆಳಕ್ಕೆ ಬಿದ್ದು ಕಾರ್ಮಿಕ ಸಾವು
ಕಳೆದ ಮಂಗಳವಾರ ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಂಪ್ರೆಸ್ಸರ್ ಟ್ರ್ಯಾಕ್ಟರ್ ಆಯತಪ್ಪಿ ಸುಮಾರು 30 ಅಡಿ ಆಳಕ್ಕೆ ಬಿದ್ದ ಪರಿಣಾಮ ನಾಗೇಂದ್ರ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ನಾಗೇಂದ್ರ ಮೃತಪಟ್ಟಿದ್ದಾರೆ.
ಮೃತ ನಾಗೇಂದ್ರನ ಪೋಟೋ -
ಚಿಕ್ಕಬಳ್ಳಾಪುರ: ಬೆಂಗಳೂರಿನಲ್ಲಿ ನಡೆದ ಕಲ್ಲು ಕ್ವಾರಿ ದುರಂತಕ್ಕೂ ಮುನ್ನಾ ಚಿಕ್ಕಬಳ್ಳಾಪುರ ದಲ್ಲೂ ಕಲ್ಲು ಕ್ವಾರಿಯಲ್ಲಿ ದುರಂತ ಸಂಭವಿಸಿ ಕಾರ್ಮಿಕನೊರ್ವ ಸಾವನ್ನಪ್ಪಿದ್ದಾನೆ.
ಮೃತಪಟ್ಟ ಕಾರ್ಮಿಕನನ್ನು ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ ಮೂಲದ ನಾಗೇಂದ್ರ (38) ಎಂದು ಗುರ್ತಿಸಲಾಗಿದೆ. ತಾಲೂಕಿನ ಪೆರೇಸಂದ್ರ ಸಮೀಪದ ಯಲಗಲಹಳ್ಳಿ ಕ್ರಶರ್ ವಲಯದಲ್ಲಿರುವ ಎಕೋ ಸ್ಯಾಂಡ್ ಕ್ರಶರ್‌ಗೆ ಸೇರಿದ ಕ್ವಾರಿಯಲ್ಲಿ ಈ ದುರ್ಘಟನೆ ನಡೆದಿದೆ.
ಕಳೆದ ಮಂಗಳವಾರ ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಂಪ್ರೆಸ್ಸರ್ ಟ್ರ್ಯಾಕ್ಟರ್ ಆಯತಪ್ಪಿ ಸುಮಾರು 30 ಅಡಿ ಆಳಕ್ಕೆ ಬಿದ್ದ ಪರಿಣಾಮ ನಾಗೇಂದ್ರ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ನಾಗೇಂದ್ರ ಮೃತಪಟ್ಟಿದ್ದಾರೆ.
ಇದನ್ನೂ ಓದಿ: illegal mining case: ಅಕ್ರಮ ಅದಿರು ಸಾಗಾಟ; ಎರಡು ಪ್ರಮುಖ ಪ್ರಕರಣಗಳಲ್ಲಿ ಜನಾರ್ದನ ರೆಡ್ಡಿ ಖುಲಾಸೆ
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಈ ಕುರಿತು ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಾಗರೀಕರೂ ಕೂಡ ಈ ಘಟನೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಘಟನೆ ನಡೆದ ದಿನವೇ ಯಾಕೆ ಎಫ್ ಐ ಆರ್ ದಾಖಲು ಮಾಡಿಲ್ಲ, ಹೋಗಲಿ ಎರಡನೇ ದಿನವೂ ಕೂಡ ಆಗಿಲ್ಲ. ಆಸ್ಪತ್ರೆಯಲ್ಲಿ ಮೃತನಾದ ಎಂದು ತಿಳಿದುಕೊಳ್ಳಲೇ ಎಫ್ ಐ ಆರ್ ಮಾಡಲು ಕಾರಣವೇನು ಎಂಬುದರ ಬಗ್ಗೆ ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ಹೊರ ಬೀಳಬೇಕಿದೆ.
ಅಷ್ಟಕ್ಕೂ ಮೃತ ನಾಗೇಂದ್ರ ಕಳೆದ ಎಂಟು ವರ್ಷಗಳಿಂದ ಹಿರೇನಾಗವಲ್ಲಿ ಗ್ರಾಮದ ಮುನಿರಾಜು ಎಂಬುವವರ ಬಳಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು,ಆತನ ಕುಟುಂಬ ಕಣ್ಣೀರಲ್ಲಿ ಕೈ ತೊಳೆಯ ವಂತಾಗಿದೆ.