ಬೆಂಗಳೂರಿನಲ್ಲಿ ಘೋರ ಘಟನೆ; ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು
Bengaluru fire accident: ಬೆಂಗಳೂರು ಹೊರವಲಯದ ಕೊತ್ತನೂರು ಬಳಿಯ ನಾರಾಯಣಪುರದಲ್ಲಿ ಅವಘಡ ನಡೆದಿದೆ. ಅಜ್ಜಿ ಶೆಡ್‌ನಿಂದ ಹೊರಗಡೆ ಹೋಗಿದ್ದಾಗ ಬೆಂಕಿ ಕಾಣಿಸಿಕೊಂಡಿದ್ದು, ಒಳಗಿದ್ದ ಮಕ್ಕಳು ಬೆಂಕಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಕೊತ್ತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ಅರ್ಜುನ್, ಆಶಾ. -
ಬೆಂಗಳೂರು: ನಗರದ ಹೊರವಲಯದ ಕೊತ್ತನೂರು ಬಳಿಯ ನಾರಾಯಣಪುರದಲ್ಲಿ ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಅರ್ಜುನ್ (5), ಆಶಾ (3) ಮೃತ ಮಕ್ಕಳು. ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಕ್ಕಳು ಮೂಲತಃ ರಾಯಚೂರು ಮೂಲದವರು. ಇವರ ತಂದೆ-ತಾಯಿ ಕೂಲಿ ಕೆಲಸಕ್ಕೆ ಬೆಂಗಳೂರಿಗೆ ಬಂದಿದ್ದರು. ಅಜ್ಜಿ ಶೆಡ್‌ನಿಂದ ಹೊರಗಡೆ ಹೋಗಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಮಕ್ಕಳು ಶೆಡ್‌ನಲ್ಲೇ ಸಿಲುಕಿಕೊಂಡು ಸಾವನ್ನಪ್ಪಿದ್ದಾರೆ. ಒಂದು ಮಗು ಸ್ಥಳದಲ್ಲೇ ಸಾವು ಕಂಡರೆ, ಇನ್ನೊಂದು ಮಗು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗದಲ್ಲಿ ಕೊನೆಯುಸಿರೆಳೆದಿದೆ.
ಜನ್ಮದಿನದಂದೇ ನೇಣಿಗೆ ಶರಣಾದ ಯುವತಿ
ಬೆಳಗಾವಿ: ಜನ್ಮದಿನದಂದೇ ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ಬೆಳಗಾವಿಯ ಅಜಂ ನಗರದ ಹಾಸ್ಟೆಲ್‌ನಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ್ ನಾಯಕ (21) ಮೃತ ಯುವತಿ ಎಂದು ಗುರುತಿಸಲಾಗಿದೆ.
ಯುವತಿ ಅಂತಿಮ ವರ್ಷದ ಬಿಎಸ್‌ಸಿ ಪದವಿ ಓದುತ್ತಿದ್ದ ಯುವತಿಗೆ ಕೆಲ ದಿನಗಳ ಹಿಂದಷ್ಟೇ ಕಾನ್ಸ್‌ಟೇಬಲ್ ಜತೆ ಎಂಗೇಜ್ಮೆಂಟ್ ಆಗಿತ್ತು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿದ್ದುಕೊಂಡು ಯುವತಿ ವ್ಯಾಸಾಂಗ ಮಾಡುತ್ತಿದ್ದಳು. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಸಿಪಿಐ ಉಸ್ಮಾನ್ ಆವಟಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.