ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Rains: ವಿಜಯನಗರ, ರಾಯಚೂರಲ್ಲಿ ಮಳೆ ಆರ್ಭಟ; ಸಿಡಿಲಿಗೆ ಇಬ್ಬರು ವ್ಯಕ್ತಿಗಳು, ಹಸು ಬಲಿ

Karnataka Rains: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತೆಲಿಗಿ ಗ್ರಾಮದಲ್ಲಿ ಸಿಡಿಲು ಬಡಿದು ಕೂಲಿ ಕಾರ್ಮಿಕ ಹಾಗೂ ಆಕಳು ಮೃತಪಟ್ಟಿದೆ. ಅದೇ ರೀತಿ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೆಗುಡದಿನ್ನಿ ಗ್ರಾಮದಲ್ಲಿ ಸಿಡಿಲು ಬಡಿದು ಪತಿ ಮೃತಪಟ್ಟು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಜ್ಯದಲ್ಲಿ ಮಳೆ ಆರ್ಭಟ; ಸಿಡಿಲಿಗೆ ಇಬ್ಬರು ವ್ಯಕ್ತಿಗಳು, ಹಸು ಬಲಿ

Profile Prabhakara R Apr 27, 2025 9:38 PM

ವಿಜಯನಗರ/ರಾಯಚೂರು: ಉತ್ತರ ಕರ್ನಾಟಕ ಭಾಗದಲ್ಲಿ ಭಾನುವಾರ ಮಳೆ ಅಬ್ಬರಿಸಿದ್ದು, ಪ್ರತ್ಯೇಕ ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಹಾಗೂ ಹಸುವೊಂದು ಮೃತಪಟ್ಟಿರುವುದು ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತೆಲಿಗಿ ಗ್ರಾಮದಲ್ಲಿ ಸಿಡಿಲು ಬಡಿದು ಕೂಲಿ ಕಾರ್ಮಿಕ ಹಾಗೂ ಆಕಳು ಮೃತಪಟ್ಟಿದೆ. ಅದೇ ರೀತಿ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೆಗುಡದಿನ್ನಿ ಗ್ರಾಮದಲ್ಲಿ ಸಿಡಿಲು ಬಡಿದು ಪತಿ ಮೃತಪಟ್ಟು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತೆಲಿಗಿ ಗ್ರಾಮದಲ್ಲಿ ಸಿಡಿಲಿಗೆ ಕೂಲಿಕಾರ್ಮಿಕ ಬೆಂಡಿಗೇರಿ ಹಾಲೇಶಪ್ಪ (48) ಸಾವನ್ನಪ್ಪಿದ್ದಾರೆ.

ಇನ್ನು ರಾಯಚೂರಿನಲ್ಲಿ ದೇವಸ್ಥಾನಕ್ಕೆ ಕುಟುಂಬ ಸಮೇತ ಹೋಗಿದ್ದ ಸಾಯಣ್ಣ ಎಂಬುವರು ಸಿಡಿಲು ಬಡಿದು ಸಾವನ್ನಪ್ಪಿದ್ದು, ಅವರ ಪತ್ನಿಗೆ ಗಂಭೀರ ಗಾಯಗಳಾಗಿವೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೆ.ಗುಡದಿನ್ನಿ ಎಂಬಲ್ಲಿ ನಡೆದಿದೆ. ಸದ್ಯ ಮಾನ್ವಿ ಸರ್ಕಾರಿ ಆಸ್ಪತ್ರೆಯಲ್ಲಿ ಅವರ ಪತ್ನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ನಾಳೆ ಬೆಂಗಳೂರು ಸೇರಿ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ!

ಬೆಂಗಳೂರು: ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಏಪ್ರಿಲ್‌ 28ರಂದು ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಹಾವೇರಿ, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆ ಗುಡುಗು ಸಹಿತ ಮಳೆಯಾಗುವ (Karnataka weather) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿದೆ. ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 23°C ಇರುವ ಸಾಧ್ಯತೆ ಇದೆ.

ಏಪ್ರಿಲ್‌ 29ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಕೊಪ್ಪಳ, ಧಾರವಾಡ, ಹಾವೇರಿ, ಗದಗ, ರಾಯಚೂರು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Health Tips: ಕಲ್ಲಂಗಡಿಯೆಂಬ ರಸಭರಿತ ಹಣ್ಣಿನ ಸತ್ವಗಳು ಗೊತ್ತೇ?

ಏಪ್ರಿಲ್‌ 30ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಆಲಿಕಲ್ಲು ಮಳೆ ಬೀಳುವ ಸಾಧ್ಯತೆ ಇದೆ. ಬೀದರ್, ಬಾಗಲಕೋಟೆ, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.