ಭಾರತ-ಪಾಕ್ ಗಡಿಯ ಬಳಿ ಪಂಜಾಬ್ ಔಟ್‌ಪೋಸ್ಟ್‌ನಲ್ಲಿ ಇಬ್ಬರು ಪೊಲೀಸರ ಗುಂಡಿಕ್ಕಿ ಹತ್ಯೆ!
crime news: ಇಬ್ಬರು ಪೊಲೀಸರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಪಂಜಾಬ್‌ನ ಗುರುದಾಸ್ಪುರ ಜಿಲ್ಲೆಯ ಪೊಲೀಸ್ ಠಾಣೆಯೊಳಗೆ ನಡೆದಿದೆ. ಇಬ್ಬರೂ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯ ಸೂಕ್ಷ್ಮ ವಲಯದಲ್ಲಿರುವ ಡೊರಾಂಗ್ಲಾ ಹೊರಠಾಣೆಯಲ್ಲಿ ನಿಯೋಜನೆಗೊಂಡಿದ್ದರು. ಶನಿವಾರ ರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಪಂಜಾಬ್ ಔಟ್‌ಪೋಸ್ಟ್‌ನಲ್ಲಿ ಇಬ್ಬರು ಪೊಲೀಸರ ಗುಂಡಿಕ್ಕಿ ಹತ್ಯೆ -
ಅಮೃತಸರ, ಫೆ.23: ಇಬ್ಬರು ಪೊಲೀಸರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಪಂಜಾಬ್‌ನ (Punjab) ಗುರುದಾಸ್ಪುರ ಜಿಲ್ಲೆಯ ಪೊಲೀಸ್ ಠಾಣೆಯೊಳಗೆ ನಡೆದಿದೆ. ಭಾನುವಾರ (ಫೆ.22) ಮುಂಜಾನೆ ಈ ಘಟನೆ ನಡೆದಿದೆ. ಮೃತರನ್ನು ಸಹಾಯಕ ಸಬ್-ಇನ್ಸ್‌ಪೆಕ್ಟರ್ ಮತ್ತು ಸ್ಟೇಷನ್ ಹೌಸ್ ಆಫೀಸರ್ (SHO) ಗುರ್ನಾಮ್ ಸಿಂಗ್ ಮತ್ತು ಗೃಹರಕ್ಷಕ ದಳದ ಸಿಬ್ಬಂದಿ ಅಶೋಕ್ ಕುಮಾರ್ ಎಂದು ಗುರುತಿಸಲಾಗಿದೆ. ಇಬ್ಬರೂ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ (IB) ಯ ಸೂಕ್ಷ್ಮ ವಲಯದಲ್ಲಿರುವ ಡೊರಾಂಗ್ಲಾ ಹೊರಠಾಣೆಯಲ್ಲಿ ನಿಯೋಜನೆಗೊಂಡಿದ್ದರು ಶನಿವಾರ ರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಇಬ್ಬರು ಅಧಿಕಾರಿಗಳು ಹೊರಠಾಣೆಯಲ್ಲಿರುವ ಕೋಣೆಯೊಳಗೆ ಗುಂಡೇಟಿನ ಗಾಯಗಳೊಂದಿಗೆ ಪತ್ತೆಯಾಗಿದ್ದಾರೆ.
ದಾಳಿಕೋರನನ್ನು ಇನ್ನೂ ಗುರುತಿಸಲಾಗಿಲ್ಲ. ಗುರುದಾಸ್ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಆದಿತ್ಯ ಶರ್ಮಾ ಅವರು ಇಬ್ಬರು ಸಿಬ್ಬಂದಿಯನ್ನು ಗುಂಡೇಟಿನಿಂದ ಹತ್ಯೆ ಮಾಡಲಾಗಿದೆ ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎಂದು ಹೇಳಿದರು. ಈ ಸಂಬಂಧ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ದರೋಡೆಕೋರರು ಅಥವಾ ಭಯೋತ್ಪಾದಕದ ಪಾತ್ರದ ಬಗ್ಗೆ ಪರಿಶೀಲಿಸಲಾಗುತ್ತಿದೆ. ಗಡಿ ಪ್ರದೇಶಗಳಲ್ಲಿ ಎಚ್ಚರಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಬ್ಬರೂ ಪೊಲೀಸರಿಗೂ ವಾಗ್ವಾದ ನಡೆದಿರಬಹುದು ಈ ವೇಳೆ ಗುಂಡು ಹರಿಸಿರಬಹುದು ಎಂದ ವದಂತಿಗಳೂ ಹಬ್ಬಿವೆ. ಆದರೆ, ಈ ಬಗ್ಗೆ ಅಧಿಕಾರಿಗಳು ಯಾವುದೇ ಹೇಳಿಕೆ ನೀಡಿಲ್ಲ. ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದ್ದು, ಇಲ್ಲಿಯವರೆಗೆ ಯಾವುದೇ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಹೇಳಿದ್ದಾರೆ.
ಘಟನೆ ಬಗ್ಗೆ ಮಾಹಿತಿ ದೊರಕುತ್ತಿದ್ದಂತೆಯೇ ಬಿಎಸ್‌ಎಫ್ ಡಿಐಜಿ ಹಾಗೂ ಶರ್ಮಾ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದರು. ಫಾರೆನ್ಸಿಕ್ ಮತ್ತು ತಾಂತ್ರಿಕ ತಂಡಗಳು ಅಪರಾಧ ಸ್ಥಳವನ್ನು ಪರಿಶೀಲಿಸಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ಅವಿವಾಹಿತೆ ತಾಯಿಯಾಗಿದ್ದಕ್ಕೆ ತಂದೆಯಿಂದಲೇ ಹತ್ಯೆ
ಬಿಹಾರದ ಮಾಧೇಪುರ ಜಿಲ್ಲೆಯ ಉದಕಿಶುಂಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪಿಪ್ರಾ ಕರೌತಿಯಲ್ಲಿ 10 ದಿನಗಳಿಂದ ವಿಚಾರಣೆ ನಡೆಯುತ್ತಿದ್ದ 20 ವರ್ಷದ ಯುವತಿಯ ಸಾವಿನ ನಿಗೂಢತೆಯನ್ನು ಪೊಲೀಸರು ಭೇದಿಸಿದ್ದಾರೆ.
ಯುವತಿಯ ತಂದೆ ಮತ್ತು ಚಿಕ್ಕಪ್ಪ ಆಕೆಯನ್ನು ಕತ್ತು ಹಿಸುಕಿ ಕೊಂದಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಯುವತಿಯ ತಂದೆ, ಚಿಕ್ಕಪ್ಪ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಿದ್ದಾರೆ. ಮಾಹಿತಿಯ ಪ್ರಕಾರ, ಫೆಬ್ರವರಿ 13 ರಂದು ಬೆಳಗಿನ ಜಾವ 3 ಗಂಟೆಗೆ ಯುವತಿಯನ್ನು ಉದಕಿಶುಂಗಂಜ್ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಆಕೆ ಆರೋಗ್ಯವಂತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು.
Terrorist Arrest: ಜಾಮೀನು ಪಡೆದು ಪರಾರಿಯಾಗಿದ್ದ ಶಂಕಿತ ಉಗ್ರ ಬೆಂಗಳೂರಿನಲ್ಲಿ ಸೆರೆ
ಹೆರಿಗೆಯ ನಂತರ ಅತಿಯಾದ ರಕ್ತಸ್ರಾವವಾದ ಕಾರಣ, ವೈದ್ಯರು ಆಕೆಯನ್ನು ಉನ್ನತ ಆಸ್ಪತ್ರೆಗೆ ದಾಖಲಿಸುವಂತೆ ಹೇಳಿದರು. ಯುವತಿಯ ತಂದೆ ಮತ್ತು ಚಿಕ್ಕಪ್ಪ ಆಂಬ್ಯುಲೆನ್ಸ್ ಬದಲಿಗೆ, ತಮ್ಮ ಖಾಸಗಿ ವಾಹನದಲ್ಲಿ ಮಾಧೇಪುರಕ್ಕೆ ಕರೆದೊಯ್ಯುವುದಾಗಿ ಹೇಳಿದರು. ಅವಳನ್ನು ಮಾಧೇಪುರಕ್ಕೆ ಕರೆದೊಯ್ಯುವ ಬದಲು, ಅವರು ಅವಳನ್ನು ಮನೆಗೆ ಕರೆದೊಯ್ದರು. ಅಲ್ಲಿ ಅವಳನ್ನು ಕತ್ತು ಹಿಸುಕಿ ಕೊಲ್ಲಲಾಯಿತು.
ನಂತರ, ಸಾಕ್ಷ್ಯವನ್ನು ಮರೆಮಾಚುವ ಉದ್ದೇಶದಿಂದ, ಅವರು ಶವವನ್ನು ಅಂತ್ಯಕ್ರಿಯೆಗಾಗಿ ಭಾಗಲ್ಪುರದ ಮಹಾದೇವಪುರ ಗಂಗಾ ಘಾಟ್‌ಗೆ ಕೊಂಡೊಯ್ಯುತ್ತಿದ್ದರು. ನಂತರ, ಸ್ಥಳೀಯ ಜನರ ಮಾಹಿತಿಯ ಮೇರೆಗೆ, ಪೊಲೀಸರು ನವಗಚ್ಚಿಯಾ ಬಳಿಯಿಂದ ಶವವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.