ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Body found: ರುಂಡವಿಲ್ಲದ ಮಹಿಳೆಯ ನಗ್ನ ಮೃತದೇಹ ಅರಣ್ಯದಲ್ಲಿ ಪತ್ತೆ

ರುಂಡವಿಲ್ಲದ ಕಾರಣ ಮಹಿಳೆಯ ಗುರುತು ಪತ್ತೆಯಾಗಿಲ್ಲ. ರುಂಡವನ್ನು ಮೃತದೇಹದ ಸುತ್ತಮುತ್ತ ಬಿಸಾಡಿರಬಹುದುದೆಂದು ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸುತ್ತಮುತ್ತಲಿನ ಪೊಲೀಸ್‌ ಠಾಣೆಗಳಲ್ಲಿ ನಾಪತ್ತೆಯಾಗಿರುವ ಮಹಿಳೆಯರ ಕಡತಗಳನ್ನು ಪರಿಶೀಲಿಸಲಾಗುತ್ತಿದೆ. ಈ ಅರಣ್ಯ ಪ್ರದೇಶಕ್ಕೆ ಬರುವ ದಾರಿಗಳಲ್ಲಿರುವ ಮನೆಗಳ ಸಿಸಿಟಿವಿ ಕ್ಯಾಮೆರಾ ಫೂಟೇಜ್‌ಗಳನ್ನು ಸಂಗ್ರಹಿಸಿ ತನಿಖೆ ನಡೆಸಲಾಗುತ್ತಿದೆ.

ರುಂಡವಿಲ್ಲದ ಮಹಿಳೆಯ ನಗ್ನ ಮೃತದೇಹ ಅರಣ್ಯದಲ್ಲಿ ಪತ್ತೆ

ಸಾಂದರ್ಭಿಕ ಚಿತ್ರ -

ಹರೀಶ್‌ ಕೇರ
ಹರೀಶ್‌ ಕೇರ Feb 21, 2026 7:35 AM

ಕಾರವಾರ, ಫೆ. 21: ಉತ್ತರ ಕನ್ನಡ (Uttara Kannada) ಜಿಲ್ಲೆಯ ಮುಂಡಗೋಡು ತಾಲೂಕಿನ ಕೊಳಗಿ ಅರಣ್ಯದಲ್ಲಿ (forest) ರುಂಡವಿಲ್ಲದ ಮಹಿಳೆಯ ಬೆತ್ತಲೆ ಮೃತದೇಹ (woman body found) ಪತ್ತೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ನಿನ್ನೆ (ಫೆಬ್ರವರಿ 20) ಸಂಜೆ ವೇಳೆ ರುಂಡವಿಲ್ಲದ ಮಹಿಳೆಯ ಮೃತದೇಹ ಪತ್ತೆ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮುಂಡಗೋಡು ಪೊಲೀಸರು ದೌಡಾಯಿಸಿದ್ದಾರೆ. ಎರಡು ದಿನದ ಹಿಂದೆ ಅತ್ಯಾಚಾರ ಮಾಡಿ ಬಳಿಕ ಹತ್ಯೆ ಮಾಡಿ ಮೃತದೇಹವನ್ನು ಅರಣ್ಯದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ.

ರುಂಡವಿಲ್ಲದ ಕಾರಣ ಮಹಿಳೆಯ ಗುರುತು ಪತ್ತೆಯಾಗಿಲ್ಲ. ರುಂಡವನ್ನು ಮೃತದೇಹದ ಸುತ್ತಮುತ್ತ ಬಿಸಾಡಿರಬಹುದುದೆಂದು ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸುತ್ತಮುತ್ತಲಿನ ಪೊಲೀಸ್‌ ಠಾಣೆಗಳಲ್ಲಿ ನಾಪತ್ತೆಯಾಗಿರುವ ಮಹಿಳೆಯರ ಕಡತಗಳನ್ನು ಪರಿಶೀಲಿಸಲಾಗುತ್ತಿದೆ. ಈ ಅರಣ್ಯ ಪ್ರದೇಶಕ್ಕೆ ಬರುವ ದಾರಿಗಳಲ್ಲಿರುವ ಮನೆಗಳ ಸಿಸಿಟಿವಿ ಕ್ಯಾಮೆರಾ ಫೂಟೇಜ್‌ಗಳನ್ನು ಸಂಗ್ರಹಿಸಿ ತನಿಖೆ ನಡೆಸಲಾಗುತ್ತಿದೆ.

ಕಲ್ಲುಎತ್ತಿ ಹಾಕಿ ಪತ್ನಿಯನ್ನು ಹತ್ಯೆಗೈದ ಪತಿ

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯ ತಲೆ ಮೇಲೆ ಪತಿ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಕುಳ್ಳೇಗೌಡನಪಾಳ್ಯ ಗ್ರಾಮದಲ್ಲಿ ನಡೆದಿದೆ. ಸಿಂಚನಾ(21) ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದು ಬಳಿಕ ಪತಿ ರೇಣುಕಯ್ಯ ಪರಾರಿಯಾಗಿದ್ದಾನೆ. ಮನೆ ಮುಂದೆಯೇ ಈ ಕೃತ್ಯ ಎಸಗಿದ್ದು, ಸ್ಥಳಕ್ಕೆ ಕಗ್ಗಲಿಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.