10 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ; ಸಿಎಂ ವಿಜಯ್ ಹೇಳಿದ್ದೇನು?
Crime News: ನಾಪತ್ತೆಯಾಗಿದ್ದ 10 ವರ್ಷದ ಬಾಲಕಿಯೊಬ್ಬಳು ಗಾಯಗಳೊಂದಿಗೆ ಶವವಾಗಿ ಪತ್ತೆಯಾಗಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನ ಸುಲೂರು ಪ್ರದೇಶದ ಕಣ್ಣಂಪಾಳಯಂ ಸರೋವರದ ಬಳಿ ನಡೆದಿದೆ. ಬಾಲಕಿ ಸುಲೂರು ಪ್ರದೇಶದ ತನ್ನ ಮನೆಯ ಬಳಿ ದಿನಸಿ ಖರೀದಿಸಲು ಹೋದಾಗ ಆರೋಪಿಗಳು ಆಕೆಯನ್ನು ಅಪಹರಿಸಿ, ನಂತರ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸ್ಥಳೀಯರಿಂದ ಪ್ರತಿಭಟನೆ -
ಕೊಯಮತ್ತೂರು, ಮೇ 23: ನಾಪತ್ತೆಯಾಗಿದ್ದ 10 ವರ್ಷದ ಬಾಲಕಿಯೊಬ್ಬಳು ಗಾಯಗಳೊಂದಿಗೆ ಶವವಾಗಿ ಪತ್ತೆಯಾಗಿರುವ ಘಟನೆ ತಮಿಳುನಾಡಿನ (Tamil Nadu) ಕೊಯಮತ್ತೂರಿನ ಸುಲೂರು ಪ್ರದೇಶದ ಕಣ್ಣಂಪಾಳಯಂ ಸರೋವರದ ಬಳಿ ನಡೆದಿದೆ. (Crime News) ಬಾಲಕಿಯನ್ನು ಅಪಹರಿಸಿ ನಂತರ ಕೊಲೆ ಮಾಡಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕಿ ಸುಲೂರು ಪ್ರದೇಶದ ತನ್ನ ಮನೆಯ ಬಳಿ ದಿನಸಿ ಖರೀದಿಸಲು ಹೋದಾಗ ಆರೋಪಿಗಳು ಆಕೆಯನ್ನು ಅಪಹರಿಸಿ, ನಂತರ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಕಾರ್ತಿಕ್ ಮತ್ತು ಮೋಹನ್ ರಾಜ್ ಎಂದು ಗುರುತಿಸಲಾಗಿದೆ. ಘಟನೆಯ ನಂತರ, ಬಾಲಕಿಯ ಪೋಷಕರು ಮತ್ತು ಸಂಬಂಧಿಕರು ನ್ಯಾಯಕ್ಕಾಗಿ ಒತ್ತಾಯಿಸಿ ಸುಲೂರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು.
ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಜೋಸೆಫ್ ವಿಜಯ್ ಇಂತಹ ಘಟನೆಗಳನ್ನು ಸಹಿಸಲಾಗುವುದಿಲ್ಲ ಎಂದುಹೇಳಿದ್ದಾರೆ. ಕೊಯಮತ್ತೂರಿನಲ್ಲಿ 10 ವರ್ಷದ ಬಾಲಕಿಯನ್ನು ಹತ್ಯೆ ಮಾಡಿರುವ ಘಟನೆ ಭಯಾನಕವಾಗಿದೆ. ಈ ಘಟನೆ ಅಪಾರ ದುಃಖ ಮತ್ತು ಆಘಾತವನ್ನುಂಟುಮಾಡಿದೆ. ಇಂತಹ ಅಮಾನವೀಯ ಮತ್ತು ಕ್ಷಮಿಸಲಾಗದ ಅಪರಾಧ ಕೃತ್ಯಗಳನ್ನು ನಮ್ಮ ಸಮಾಜದಲ್ಲಿ ಎಂದಿಗೂ ಸಹಿಸಲಾಗುವುದಿಲ್ಲ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಬೈಕ್‌ಗೆ ಕಾರು ಡಿಕ್ಕಿ;ತಂದೆ-ಮಗನಿಗೆ ಗಾಯ, ಚಾಲಕ ಪರಾರಿ!
ಮುಖ್ಯಮಂತ್ರಿಯಿಂದ ಭರವಸೆ ಸಿಗುವವರೆಗೂ ಸಂತ್ರಸ್ತೆಯ ಕುಟುಂಬವು ಶವಾಗಾರದಿಂದ ಶವವನ್ನು ತೆಗೆದುಕೊಳ್ಳಲು ನಿರಾಕರಿಸಿದ ನಂತರ ವಿಜಯ್ ಅವರ ಪ್ರತಿಕ್ರಿಯೆ ಹೊರಬಿದ್ದಿದೆ. ಮುಖ್ಯಮಂತ್ರಿಗಳಿಂದ ಯಾವುದೇ ಹೇಳಿಕೆ ಬರುವವರೆಗೂ ನಾವು ಶವವನ್ನು ತೆಗೆದುಕೊಳ್ಳುವುದಿಲ್ಲ. ನಾವು ಬದಲಾವಣೆಗೆ ಮತ ಹಾಕಿದ್ದೇವೆ. ಈಗ, ಅವರು ಯಾವುದೇ ಹೇಳಿಕೆ ಅಥವಾ ಭರವಸೆಯನ್ನು ನೀಡುತ್ತಿಲ್ಲ. ಹೊಸ ಸರ್ಕಾರ ಬಂದ ನಂತರವೂ ಯಾವುದೇ ಬದಲಾವಣೆ ಇರುವುದಿಲ್ಲ ಎಂಬುದು ಇದರಿಂದ ತಿಳಿಯುತ್ತದೆ ಎಂದು ಅವರು ಹೇಳಿದ್ದರು.
ಘಟನೆ ಹೇಗೆ ನಡೆಯಿತು ಎಂಬುದರ ಬಗ್ಗೆ ಕುಟುಂಬಕ್ಕೆ ಇನ್ನೂ ತಿಳಿದಿಲ್ಲ ಎಂದು ಸಂತ್ರಸ್ತೆಯ ಸಂಬಂಧಿ ಸೆಂಥಿಲ್ ಕುಮಾರ್ ತಿಳಿಸಿದ್ದಾರೆ. ಶುಕ್ರವಾರ (ಮೇ 22) ಸಂಜೆ ತಡವಾಗಿ ನಮಗೆ ಮಾಹಿತಿ ಸಿಕ್ಕಿತು. ಮೊದಲು, ಬಾಲಕಿ ಕಾಣೆಯಾಗಿದ್ದಳು. ಆಕೆಯನ್ನು ಹುಡುಕಾಡಿದಾಗ ಸರೋವರದ ದಡದಲ್ಲಿ ಅವಳು ಶವವಾಗಿ ಪತ್ತೆಯಾಗಿದ್ದಾಳೆ. ನೂರಾರು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ನ್ಯಾಯಕ್ಕಾಗಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು ಎಂದು ಕುಮಾರ್ ಹೇಳಿದರು.
ತಮಿಳುನಾಡು ಪೊಲೀಸ್ ಮಹಾನಿರ್ದೇಶಕ ಸಂದೀಪ್ ರೈ ರಾಥೋಡ್ ಕೂಡ ಪ್ರಕರಣದ ತನಿಖೆಯನ್ನು ಪರಿಶೀಲಿಸಲು ಕೊಯಮತ್ತೂರಿಗೆ ಧಾವಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಕುರಿತು ಡಿಎಂಕೆ ಟಿವಿಕೆ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಈ ಘಟನೆ ರಾಜಕೀಯ ತಿರುವು ಪಡೆದಾಗ, ಟಿವಿಕೆ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ನ್ಯಾಯದ ಭರವಸೆ ನೀಡಿದರು.
ತಮಿಳುನಾಡು ಸಚಿವ ಎಂ.ಎಸ್. ಸಂಪತ್ ಅವರು ಇ.ಎಸ್.ಐ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತೆಯ ಕುಟುಂಬಕ್ಕೆ ಸಾಂತ್ವನ ಹೇಳಿದರು. ಕುಟುಂಬವನ್ನು ಭೇಟಿಯಾದ ನಂತರ ಸಂಪತ್ ಅವರು, ಪ್ರಕರಣದ ಕುರಿತು ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದೇನೆ ಮತ್ತು ತನಿಖೆ ನಡೆಯುತ್ತಿದೆ ಎಂದು ಹೇಳಿದರು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಭರವಸೆ ನೀಡಿದರು.