Couple Self Harming: ನಿರ್ಮಾಣ ಹಂತದ ಕಟ್ಟಡದಲ್ಲಿ ಸಂಶಯಾಸ್ಪದ ರೀತಿಯಲ್ಲಿ ದಂಪತಿ ಶವ ಪತ್ತೆ
ಇಬ್ಬರೂ ಕಟ್ಟಡ ನಿರ್ಮಾಣದ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಸಂಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಾಣುತ್ತಿದೆ. ನಿನ್ನೆ ನಿರ್ಮಾಣ ಕೆಲಸ ಮುಗಿಸಿ ಕಾರ್ಮಿಕರೆಲ್ಲ ತೆರಳಿದ ಬಳಿಕ ಈ ಘಟನೆ ನಡೆದಿರಬಹುದು ಎನ್ನಲಾಗಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರಿನಲ್ಲಿ (Bengaluru news) ನಿರ್ಮಾಣ ಹಂತದ ಕಟ್ಟಡ ಒಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ದಂಪತಿಗಳ ಶವ (body found) ಪತ್ತೆಯಾಗಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ (crime news) ಈ ಘಟನೆ ನಡೆದಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿ ಪರ್ವೀನ್ ಮತ್ತು ಮೆಹಬೂಬ್ ಎನ್ನುವ ದಂಪತಿಗಳ ಶವ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ (Self harming) ಮೆಹಬೂಬ್ ಪತ್ನಿ ಪರ್ವೀನ್ ಶವ ಪತ್ತೆಯಾದರೆ, ಇನ್ನು ನೆಲದ ಮೇಲೆ ಬಿದ್ದಿರುವ ಸ್ಥಿತಿಯಲ್ಲಿ ಪತಿ ಮೆಹಬೂಬ್ ಶವ ಪತ್ತೆಯಾಗಿದೆ.
ಇಬ್ಬರೂ ಕಟ್ಟಡ ನಿರ್ಮಾಣದ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಸಂಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಾಣುತ್ತಿದೆ. ನಿನ್ನೆ ನಿರ್ಮಾಣ ಕೆಲಸ ಮುಗಿಸಿ ಕಾರ್ಮಿಕರೆಲ್ಲ ತೆರಳಿದ ಬಳಿಕ ಈ ಘಟನೆ ನಡೆದಿರಬಹುದು ಎನ್ನಲಾಗಿದೆ. ಇತರ ಕಾರ್ಮಿಕರನ್ನು ವಿಚಾರಿಸಲಾಗುತ್ತಿದ್ದು, ದಂಪತಿಗಳ ವಿವರ ಶೀಘ್ರದಲ್ಲೇ ದೊರೆಯುವ ಸಾಧ್ಯತೆ ಇದೆ.
ಸಚಿವೆ ಕಾರು ಅಪಘಾತಕ್ಕೆ ಕಾರಣವಾದ ಲಾರಿ ಚಾಲಕ ಬಂಧನ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ (Laxmi Hebbalkar) ಕಾರು ಅಪಘಾತಕ್ಕೆ ಕಾರಣವಾಗಿದ್ದ ಲಾರಿ ಚಾಲಕನ್ನು ಬಂಧಿಸಿ, ವಾಹನವನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜನವರಿ 14 ರಂದು ಕಿತ್ತೂರು ಬಳಿ ಅಂಬಡಗಟ್ಟಿ ಕ್ರಾಸ್‌ನಲ್ಲಿ ಸಂಭವಿಸಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕ ಮಧುಕರ ಕೊಂಡಿರಾಮ ಸೋಮವಂಶಿ ಎಂಬಾತನ್ನು ಪೊಲೀಸರು ಬಂಧಿಸಿ, ತನಿಖೆ ಮುಂದುವರಿಸಿದ್ದಾರೆ.
ಪ್ರಕರಣದ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಚಾಲಕ ಕಿತ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಫೋನ್ ಕರೆ ಹಾಗೂ ಸಿಸಿಟಿವಿಯಲ್ಲಿ ದಾಖಲಾದ ದೃಶ್ಯ ಸೇರಿ ಹಲವು ಸಾಕ್ಷ್ಯಗಳ ಆಧಾರದ ಮೇಲೆ ಮಹಾರಾಷ್ಟ್ರದ ತಕ್ರಾರವಾಡಿ ಗ್ರಾಮದ ಚಾಲಕ ಹಾಗೂ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೆದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.14ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಗಂಭೀರ ಗಾಯಗಳಾಗಿದ್ದರಿಂದ ಸಚಿವೆ ಆಸ್ಪತ್ರೆಗೆ ದಾಖಲಾಗಿದ್ದರು. ಸುಮಾರು 13 ದಿನ ಚಿಕಿತ್ಸೆ ಪಡೆದ ಬಳಿಕ ಹೆಬ್ಬಾಳ್ಕರ್ ಅವರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು.
ಇದನ್ನೂ ಓದಿ: Self Harming: ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿ ಶವ, ಅಕ್ರಮ ಸಂಬಂಧ ಹೊಂದಿದ್ದ ಪತಿಯತ್ತ ಸಂಶಯ