ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Self Harming in Bus: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ತಾಲ್ಲೂಕಿನ ಹಾಲಗಾನಹಳ್ಳಿ ಗ್ರಾಮದ ನಿವಾಸಿಯಾಗಿರುವ ನಿರ್ಮಲಾ ದೇವನಹಳ್ಳಿ ಬಸ್ ನಿಲ್ದಾಣದಲ್ಲಿ ಬೆಂಗಳೂರಿನಿದ ಚಿಕ್ಕಬಳ್ಳಾಪುರಕ್ಕೆ ತೆರಳುವ ಬಸ್ ಹತ್ತಿದ್ದರು. ಬಸ್‌ನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ವಿಷ ಸೇವಿಸಿದ್ದಾರೆ. ಇದನ್ನು ಗಮನಿಸಿದ ಸಹ ಪ್ರಯಾಣಿಕರು ನಿರ್ವಾಹಕ ನಿಗೆ ವಿಷಯ ತಿಲಿಸಿದ್ದಾರೆ. ಈ ವೇಳೆ 48 ಮಂದಿ ಪ್ರಯಾಣಿಕರಿದ್ದ ಬಸ್ ಸಮೇತ ಚಾಲಕ ಹಾಗೂ ನಿರ್ವಾಹಕ ಖಾಸಗಿ ಆಸ್ಪತ್ರೆಗೆ ತೆರಳಿ ಸಮಯ ಪ್ರಜ್ಞೆ ಮೆರೆದಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

-

Profile
Ashok Nayak Jun 8, 2026 10:16 PM

ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ(KSRTC) ಬಸ್ಸಿನಲ್ಲಿ  ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ನಿರ್ಮಲಾ (24) ಎಂದು ಗುರ್ತಿಸಲಾಗಿದೆ.

ಇದನ್ನೂ ಓದಿ: Hindu girl Self Harming: ಮುಸ್ಲಿಂ ಯುವಕನ ಕಿರುಕುಳ: ಅಪ್ರಾಪ್ತ ಹಿಂದೂ ಬಾಲಕಿ ಆತ್ಮಹತ್ಯೆ

ತಾಲ್ಲೂಕಿನ ಹಾಲಗಾನಹಳ್ಳಿ ಗ್ರಾಮದ ನಿವಾಸಿಯಾಗಿರುವ ನಿರ್ಮಲಾ ದೇವನಹಳ್ಳಿ ಬಸ್ ನಿಲ್ದಾಣದಲ್ಲಿ ಬೆಂಗಳೂರಿನಿದ ಚಿಕ್ಕಬಳ್ಳಾಪುರಕ್ಕೆ ತೆರಳುವ ಬಸ್ ಹತ್ತಿದ್ದರು. ಬಸ್‌ನಲ್ಲಿ ಕುಳಿತು ಕೊಳ್ಳುತ್ತಿದ್ದಂತೆ ವಿಷ ಸೇವಿಸಿದ್ದಾರೆ. ಇದನ್ನು ಗಮನಿಸಿದ ಸಹ ಪ್ರಯಾಣಿಕರು ನಿರ್ವಾಹಕನಿಗೆ ವಿಷಯ ತಿಳಿಸಿದ್ದಾರೆ. ಈ ವೇಳೆ 48 ಮಂದಿ ಪ್ರಯಾಣಿಕರಿದ್ದ ಬಸ್ ಸಮೇತ ಚಾಲಕ ಹಾಗೂ ನಿರ್ವಾಹಕ ಖಾಸಗಿ ಆಸ್ಪತ್ರೆಗೆ ತೆರಳಿ ಸಮಯ ಪ್ರಜ್ಞೆ ಮೆರೆದಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಡಿಪೋಗೆ ಸೇರಿದ ಬಸ್ ಅನ್ನು ಆಸ್ಪತ್ರೆ ಬಳಿ ನಿಲ್ಲಿಸಿದ ಕೆಎಸ್‌ ಆರ್‌ಟಿಸಿ ಸಿಬ್ಬಂದಿ ಪ್ರಯಾಣಿಕರನ್ನು ಬೇರೆ ಬಸ್‌ನಲ್ಲಿ ಕಳುಹಿಸಿದ್ದಾರೆ. ಕಂಡಕ್ಟರ್ ಸುಧಾಕರ್, ಡ್ರೈವರ್ ನಾರಾಯಣಸ್ವಾಮಿಯ ಸಮಯ ಪ್ರಜ್ಞೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.