ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bengaluru Accident: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿ; ಶಾಲಾ ಬಸ್‌ ಹರಿದು ಮಗಳ ಕಣ್ಣೆದುರೇ ತಾಯಿ ಸಾವು!

ಬೆಂಗಳೂರಿನಲ್ಲಿ ಮಾರತ್ತಹಳ್ಳಿಯಿಂದ ಸಿದ್ದಾಪುರ ಕಡೆಗೆ ತಾಯಿ ಹಾಗೂ ಮಗಳು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ರಸ್ತೆ ಗುಂಡಿಯಿಂದ ಸ್ಕೂಟರ್ ಸ್ಕಿಡ್ ಆಗಿದ್ದರಿಂದ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದೆ ಬಂದ ಶಾಲಾ ಬಸ್‌ ಹರಿದು ಮಹಿಳೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ವೈಟ್‌ಫೀಲ್ಡ್ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಶಾಲಾ ಬಸ್‌ ಹರಿದು ಮಹಿಳೆ ಸಾವು

ಬೆಂಗಳೂರು ಅಪಘಾತದಲ್ಲಿ ಮೃತಪಟ್ಟ ಮಹಿಳೆ ಕಾಂತಾ. -

Prabhakara R
Prabhakara R Jun 13, 2026 3:44 PM

ಬೆಂಗಳೂರು: ರಾಜಧಾನಿಯಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ. ಮಗಳನ್ನು ಕಾಲೇಜಿಗೆ ಬಿಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ರಸ್ತೆ ಅಪಘಾತದಲ್ಲಿ (Bengaluru Accident) ಮೃತಪಟ್ಟ ಘಟನೆ ವೈಟ್‌ಫೀಲ್ಡ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಾಂತಾ ಮೃತ ಮಹಿಳೆ. ಮಾರತ್ತಹಳ್ಳಿಯಿಂದ ಸಿದ್ದಾಪುರ ಕಡೆಗೆ ಕಾಂತಾ ಹಾಗೂ ಪುತ್ರಿ ನೇಹಾ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಮಳೆಯಿಂದ ರಸ್ತೆ ಗುಂಡಿಯಲ್ಲಿ ಸ್ಕೂಟರ್‌ ಸ್ಕಿಡ್ ಆಗಿ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಕಾಂತಾ ಅವರ ಮೇಲೆ ಹಿಂದಿನಿಂದ ಬಂದ ಶಾಲಾ ಬಸ್ ಹರಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತಾದರೂ, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ವೇಳೆ ಮಗಳು ನೇಹಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ವೈಟ್‌ಫೀಲ್ಡ್ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇಬ್ಬರು ಮಕ್ಕಳನ್ನು ಕೊಂದು, ತಾಯಿ‌ ಆತ್ಮಹತ್ಯೆ ಯತ್ನ

ಮೈಸೂರು: ಇಬ್ಬರು ಮಕ್ಕಳನ್ನು ನೇಣು ಹಾಕಿ ಕೊಂದ ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಸಾಲಿಗ್ರಾಮ ತಾಲೂಕಿನ ಜವರೇಗೌಡನ ಕೊಪ್ಪಲಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಜವರೇಗೌಡನ ಕೊಪ್ಪಲು ಗ್ರಾಮದ ಅನಿಲ್ ಕುಮಾರ್ ಎಂಬವರ ಪತ್ನಿ ಪ್ರಿಯಾಂಕಾ (26) ತಮ್ಮ 3 ಮತ್ತು ಒಂದೂವರೆ ವರ್ಷದ ಇಬ್ಬರು ಮಕ್ಕಳನ್ನು ಸುತ್ತಲಿದಾರದಿಂದ ಬಿಗಿದು ಸಾಯಿಸಿ, ನಂತರ ತಾವೂ ಆತ್ಮಹತ್ಯೆಗೆ ಪ್ರಯತ್ನಪಟ್ಟಿದ್ದಾರೆ. ಕೂಡಲೇ ಅವರನ್ನು ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಮಕ್ಕಳ ಮೃತದೇಹಗಳನ್ನು ಕೃಷ್ಣರಾಜ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಅನಿಲ್‌ ಕುಮಾ‌ರ್ ಮತ್ತು ಪ್ರಿಯಾಂಕ ಮದುವೆಯಾಗಿ ಆರು ವರ್ಷಗಳಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ನಿವೃತಿಯ ಅಂಚಿನಲ್ಲಿರುವ ವಿಶೇಷ ಚೇತನ ಶಿಕ್ಷಕನಿಂದ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ

ಈ ಸಂಬಂಧ ಸಾಲಿಗ್ರಾಮ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಮಕ್ಕಳ ಮೃತದೇಹವನ್ನು ಶನಿವಾರ ಮರಣೋತ್ತರ ಪರಿಕ್ಷೆ ನಡೆಸಿ ಕುಟುಂಬದವರಿಗೆ ನೀಡಲಾಗಿದೆ. ತಾಯಿ ಸ್ಥಿತಿ ಚಿಂತಾಜನಕವಾಗಿದೆ. ಈ ಸಂಬಂಧ ತನಿಖೆ ನಡೆಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಮಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ಸಾಲಿಗ್ರಾಮ ಪೊಲೀಸ್​ ಠಾಣೆಯ ಇನ್ಸ್​​ಪೆಕ್ಟರ್​ ಶಶಿಕುಮಾ‌ರ್ ತಿಳಿಸಿದ್ದಾರೆ.