Self Harming: ಮಾಜಿ ಲವರ್‌ನಿಂದ ಬ್ಲ್ಯಾಕ್‌ಮೇಲ್, ಮದುವೆಯ ಹೊಸ್ತಿಲಲ್ಲಿ ಯುವತಿ ಆತ್ಮಹತ್ಯೆ
5 ವರ್ಷಗಳ ಹಿಂದೆ ಮೈಲಾರಿ ಎಂಬ ಯುವಕನ ಜೊತೆ ಈಕೆಗೆ ಲವ್ ಆಗಿ ಬ್ರೇಕಪ್ ಆಗಿತ್ತು. ನಂತರ ಮೈಲಾರಿ ತನ್ನನ್ನು ಮದುವೆ ಆಗಲು ಕಿರುಕುಳ ನೀಡುತ್ತಿದ್ದ. ನನ್ನನ್ನು ಮದುವೆ ಆಗದೇ ಇದ್ದರೆ ನನ್ನ ಜೊತೆ ಇರುವ ನಿನ್ನ ಫೋಟೋ, ವೀಡಿಯೋ ವೈರಲ್ ಮಾಡುತ್ತೇನೆ ಎಂದು ಈತ ಬೆದರಿಕೆ ಹಾಕಿದ್ದ.

ಮೃತ ಸಾಯಿರಾಬಾನು

ಗದಗ: ಮಾಜಿ ಪ್ರಿಯಕರನ (Ex lover) ಕಿರುಕುಳದ (Blackmail) ಹಿನ್ನೆಲೆಯಲ್ಲಿ, ಮದುವೆ ನಿಶ್ಚಯವಾಗಿದ್ದ ಯುವತಿಯೊಬ್ಬಳು ಡೆತ್ ನೋಟ್ (Death note) ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ (Self harming) ಮಾಡಿಕೊಂಡ ಘಟನೆ ಗದಗದಲ್ಲಿ (Gadag news) ನಡೆದಿದೆ. ಗದಗ ತಾಲೂಕಿನ ಅಸುಂಡಿಯಲ್ಲಿ ಸಾಯಿರಾಬಾನು ನದಾಫ್ (29) ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ಬರೆದಿಟ್ಟು ಸಾಯಿರಾಬಾನು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮೇ 8ರಂದು ಸಾಯಿರಾಬಾನು ಮದುವೆ ನಿಗದಿಯಾಗಿತ್ತು.
ಮೈಲಾರಿ ಎಂಬ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 5 ವರ್ಷಗಳ ಹಿಂದೆ ಮೈಲಾರಿ ಎಂಬ ಯುವಕನ ಜೊತೆ ಈಕೆಗೆ ಲವ್ ಆಗಿ ಬ್ರೇಕಪ್ ಆಗಿತ್ತು. ನಂತರ ಮೈಲಾರಿ ತನ್ನನ್ನು ಮದುವೆ ಆಗಲು ಕಿರುಕುಳ ನೀಡುತ್ತಿದ್ದ. ನನ್ನನ್ನು ಮದುವೆ ಆಗದೇ ಇದ್ದರೆ ನನ್ನ ಜೊತೆ ಇರುವ ನಿನ್ನ ಫೋಟೋ, ವೀಡಿಯೋ ವೈರಲ್ ಮಾಡುತ್ತೇನೆ ಎಂದು ಈತ ಬೆದರಿಕೆ ಹಾಕಿದ್ದ.
ಲಿವಿಂಗ್ ಟುಗೆದರ್ ಬೇಡವೆಂದು ಬುದ್ಧಿ ಹೇಳಿದ ಪೋಷಕರು, ರೈಲಿಗೆ ತಲೆಕೊಟ್ಟ ಯುವಕ
ಕಲಬುರಗಿ: ಮಹಿಳೆಯೊಬ್ಬರ ಜೊತೆ ತಮ್ಮ ಮಗ ಲಿವಿಂಗ್ ಟುಗೆದರ್ (living together) ನಲ್ಲಿರುವ ವಿಚಾರದ ತಿಳಿದ ಪೋಷಕರು ತಮ್ಮ ಮಗನಿಗೆ ಬುದ್ಧಿವಾದ ಹೇಳಿದ್ದಾರೆ. ಇದರಿಂದ ಮನನೊಂದ ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ (Self Harming) ಶರಣಾಗಿರುವ ಘಟನೆ ಕಲಬುರಗಿ (Kalaburagi news) ಜಿಲ್ಲೆಯ ನಾಗನಹಳ್ಳಿ ಬಳಿ ನಡೆದಿದೆ. ಮೃತ ಯುವಕನನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಶಿವಕುಮಾರ್ ಲಿವಿಂಗ್ ಟುಗೆದರ್‌ನಲ್ಲಿದ್ದ ಮಹಿಳೆಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾನೆ.
ಇದರಿಂದ ಆತಂಕಗೊಂಡ ಮಹಿಳೆ ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದು ಯುವಕನ ಮನವೊಲಿಸಲು ಯತ್ನಿಸಿದ್ದಾಳೆ. ಆದರೆ ಇದಕ್ಕೆ ಕಿವಿಗೊಡದ ಶಿವಕುಮಾರ್ ರೈಲಿಗೆ ರೈಲಿನ ಮುಂದೆ ಬಿದ್ದಿದ್ದಾನೆ. ಈ ವೇಳೆ ಮಹಿಳೆ ಆತನ ರಕ್ಷಣೆಗೆ ಮುಂದಾಗಿದ್ದು ರಕ್ಷಿಸಲು ಸಾಧ್ಯವಾಗಿಲ್ಲ. ರಕ್ಷಿಸಲು ಹೋಗಿದ್ದ ಮಹಿಳೆಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Self Harming: 8 ವರ್ಷದಿಂದ ಪ್ರೀತಿಸಿ, ಕೈಕೊಟ್ಟ ವಿವಾಹಿತ ಶಿಕ್ಷಕಿ; ಮನನೊಂದು ಶಿಕ್ಷಕ ಆತ್ಮಹತ್ಯೆ