About Us Advertise with us Be a Reporter E-Paper

Breaking Newsದೇಶಪ್ರಚಲಿತ
Trending

ಕ್ರಿಮಿನಲ್ ಆರೋಪ ಹೊಂದಿರುವ ರಾಜಕಾರಣಿಗಳ ಚುನಾವಣೆ ಸ್ಪರ್ಧೆ ನಿರ್ಬಂಧಿಸಲು ಸಾಧ್ಯವಿಲ್ಲ: ಸುಪ್ರೀಂ

ದೆಹಲಿ: ಚುನಾವಣೆಗಳಲ್ಲಿ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿರುವ ರಾಜಕಾರಣಿಗಳ ಸ್ಪರ್ಧೆಯನ್ನು ನಿರ್ಬಂಧಿಸಲು ಸಾಧ್ಯವಿಲ್ಲ  ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

ಅಪರಾಧ ಪ್ರಕರಣಗಳನ್ನು ಎದುರಿಸುತ್ತಿರುವವರ ಸ್ಪರ್ಧೆಗೆ ನಿರ್ಬಂಧ ಹೇರಬೇಕು  ಮತ್ತು ಅಂತಹ ಅಭ್ಯರ್ಥಿಗಳನ್ನು ಅನರ್ಹಗೊಳಿಸಬೇಕೆಂಬಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,  ಅಪರಾಧ ಪ್ರಕರಣಗಳಲ್ಲಿ ಆರೋಪ ಹೊತ್ತ ಶಾಸಕರು ಅಥವಾ ಸಂಸದರನ್ನು ಆರೋಪ ಸಾಬೀತಾಗುವ ಮೊದಲೇ ಅವರನ್ನು ಆ ಸಾಂವಿಧಾನಿಕ ಹುದ್ದೆಗಳಿಂದ ಅನರ್ಹಗೊಳಿಸಬಾರದು ಎಂದು ಮಹತ್ವದ ತೀರ್ಪು ನೀಡಿದೆ.

ಕ್ರಿಮಿನಲ್‌ ಆರೋಪ ಹೊಂದಿದಾಕ್ಷಣ ಸ್ಪರ್ಧಿಸಲು ನಿರ್ಬಂಧ ಹೇರಲು ಸಾಧ್ಯವಿಲ್ಲ . ಆರೋಪ ಸಾಬೀತಾದರೆ ಮಾತ್ರ ಸ್ಪರ್ಧಿಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ತೀರ್ಪು ನೀಡಲಾಗಿದೆ. ಈ ಕುರಿತು ಕಾನೂನು ರಚಿಸಲು ಕೇಂದ್ರ ಸರ್ಕಾರ ಮತ್ತು ಸಂಸತ್‌ಗೆ ಕೋರ್ಟ್‌ ಆದೇಶಿಸಿದೆ.

ಕಳಂಕಿತ ರಾಜಕಾರಣಿಗಳ ಸ್ಪರ್ಧೆ ಕುರಿತಂತೆ ಸಂಸತ್ ನಲ್ಲಿ ನಿರ್ಧಾರ ಕೈಗೊಳ್ಳಬೇಕು. ಈ ಕುರಿತು ಕಾನೂನು ರೂಪಿಸಬೇಕು. ಇನ್ನು ಜನರೇ ರಾಜಕಾರಣಿಗಳ ಹಣೆಬರಹ ನಿರ್ಧರಿಸಬೇಕು. ಕಳಂಕ ರಹಿತ ಅಭ್ಯರ್ಥಿಗಳನ್ನು ಚುನಾಯಿಸುವ ಅಧಿಕಾರ ಮತದಾರರಿಗಿರುವುದರಿಂದ ಅವರೇ ಉತ್ತಮ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಇನ್ನು ಕಳಂಕಿತ ರಾಜಕೀಯ ನಾಯಕರು ಚುನಾವಣೆಯಲ್ಲಿ ಸ್ಪರ್ಧಿಸುವ ಮುನ್ನ ತಮ್ಮ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಬೇಕು. ಮತದಾರರಿಗೆ ಅಭ್ಯರ್ಥಿಗಳು ತಮ್ಮ ಮೇಲಿನ ಕ್ರಿಮಿನಲ್ ಕೇಸ್ ಗಳ ಕುರಿತು ಮಾಧ್ಯಮ, ಸಾಮಾಜಿಕ ಜಾಲಾತಣಗಳ ಮೂಲಕ ಮಾಹಿತಿ ನೀಡಬೇಕು ಎಂದು ಕೋರ್ಟ್ ಹೇಳಿದೆ.

Tags

Related Articles

Leave a Reply

Your email address will not be published. Required fields are marked *

Language
Close