About Us Advertise with us Be a Reporter E-Paper

Breaking Newsದೇಶ

ಕೆಮಿಕಲ್ ಕಾರ್ಖಾನೆಯಲ್ಲಿ ಸಿಲಿಂಡರ್ ಸ್ಫೋಟ, ಆರು ಮಂದಿ ದುರ್ಮರಣ

ಲಖನೌ: ಕೆಮಿಕಲ್ ಕಾರ್ಖಾನೆಯೊಂದರಲ್ಲಿ ಅನಿಲ ಟ್ಯಾಂಕರ್ ಸ್ಫೋಟಗೊಂಡ ಆದ ಪರಿಣಾಮ ಆರು ಮಂದಿ ಮೃತಪಟ್ಟಿದ್ದು ಎಂಟು ಮಂದಿ ಗಂಭೀರ ಗಾಯಗೊಂಡಿರುವ ದುರ್ಘಟನೆ ಉತ್ತರ ಪ್ರದೇಶದ ಬಿಜ್ನರ್ ಜಿಲ್ಲೆಯಲ್ಲಿ ನಡೆದಿದೆ.

ಇನ್ನು ಘಟನೆ ಬಳಿಕ ಮೂವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರ್ಮಿಕರು ಮಿಥೇನ್ ಅನಿಲ ಟ್ಯಾಂಕ್ ದುರಸ್ತಿಗೊಳಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ಬಿಜ್ನರ್ ಎಸ್ಪಿ ಉಮೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಕಳೆದ ವರ್ಷ ನವೆಂಬರ್ ನಲ್ಲಿ ರಾಯ್‍ಬರೇಲಿಯಲ್ಲಿ ಎನ್‍ಟಿಪಿಸಿ ಸ್ಫೋಟಗೊಂಡ ಪರಿಣಾಮ 29 ಮಂದಿ ದಾರುಣವಾಗಿ ಮೃತಪಟ್ಟಿದ್ದರು. ಹಲವಾರು ಮಂದಿ ಗಾಯಗೊಂಡಿದ್ದರು.

Tags

Related Articles

Leave a Reply

Your email address will not be published. Required fields are marked *

Language
Close