About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

 ದಲಿತ ಮಹಿಳೆಯ ಮೇಲೆ ದೌರ್ಜನ್ಯ: ಆರೋಪಿಗಳ ಗಡಿಪಾರಿಗೆ ಆಗ್ರಹ..!

ಬೆಂಗಳೂರು: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಬೆಕ್ಕಳಲೆ ಗ್ರಾಮದ ಜಾನಕಿ ಎಂಬ ದಲಿತ ಮಹಿಳೆಯ ಮೇಲೆ ದೌರ್ಜನ್ಯವೆಸಗಿದವರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಇಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪೊರಕೆ ಪ್ರತಿಭಟನೆ ಮಾಡಿದರು.

ಪ್ರತಿಭಟನೆಯ ನಂತರ ಡಾ. ಸಿ.ಎಸ್.ರಘು ಮಾತನಾಡಿ, ಸೆಪ್ಟೆಂಬರ್ 20 ರಂದು ಮದ್ದೂರು ಎಪಿಎಂಸಿ ಮಾಜಿ ಅಧ್ಯಕ್ಷ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡ ನಾಗೇಶ್ ಮತ್ತು ಅವರ ಸಹಚರರು ದಲಿತ ಮಹಿಳೆಯ ಮೇಲೆ ದೌರ್ಜನ್ಯ ನಡೆಸಿ ಅಪರಹರಿಸಿದ್ದಾರೆ.

ಈ ಘಟನೆಗೆ ಅಲ್ಲಿನ ಜಿಲ್ಲಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕಾಗಿರುತ್ತದೆ. ರಾಜ್ಯದಲ್ಲಿ ಒಬ್ಬ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಅಸಡ್ಡೆ ಮನೋಭಾವವೇ ಕಾರಣವಾಗಿರುತ್ತದೆ. ಇಂತಹ ದುರುಳರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ನೂರಾರು ದಲಿತರು ಭಾಗವಹಿಸಿದ್ದರು.

Tags

Related Articles

Leave a Reply

Your email address will not be published. Required fields are marked *

Language
Close