About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ದಸರಾ ಆನೆಗಳ ಸ್ವಾಗತ ಕಾರ್ಯಕ್ರಮ ಸೆ.5ಕ್ಕೆ ಮುಂದೂಡಿಕೆ

ಮೈಸೂರು: ನಾಳೆ ಮೈಸೂರು ಅರಮನೆ ಆವರಣದಲ್ಲಿ ನಡೆಯಬೇಕಿದ್ದ ದಸರಾ ಆನೆಗಳ ಸ್ವಾಗತ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ನಾಳೆ ಮೈಸೂರು ಮಹಾನಗರ ಪಾಲಿಕೆಯ ಮತ ಎಣಿಕೆ ಹಿನ್ನೆಲೆಯಲ್ಲಿ ಗಜಪಡೆ ಸ್ವಾಗತವನ್ನು ಸೆ.5ಕ್ಕೆ ಮುಂದೂಡಲಾಗಿದೆ. ಆ ದಿನ ಸಂಜೆ 4.30ಕ್ಕೆ ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಚಿನ್ನದ ಅಂಬಾರಿ ಹೊರುವ ಅರ್ಜುನ್ ನೇತೃತ್ವದ ಗಜಪಡೆಯನ್ನು ಸ್ವಾಗತಿಸಲಾಗುವುದು ಎಂದು ಮೈಸೂರು ಅರಮನೆ ಮಂಡಳಿಯ ಉಪ ನಿರ್ದೇಶಕ ಸುಬ್ರಹ್ಮಣ್ಯ ತಿಳಿಸಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರ ನೇತೃತ್ವದಲ್ಲಿ ಗಜಪಡೆ ಸ್ವಾಗತ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯಲ್ಲಿ ಶಾಸಕ ರಾಮದಾಸ್ ವಹಿಸಲಿದ್ದಾರೆ ಹಾಗೂ ಇತರೆ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close