ಮತ್ತೊಂದು ಭೀಕರ ಅಪಘಾತ, ಬಸ್ಸಿಗೆ ಕಾರು ಡಿಕ್ಕಿಯಾಗಿ ಮೂವರು ಸಾವು
ಮೃತರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದೆ. ಚಾಲಕ ಸೇರಿದಂತೆ ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿ ಒಂದೇ ಕುಟುಂಬದ 6 ಜನ ಪ್ರಯಾಣ ಮಾಡುತ್ತಿದ್ದರು. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದ ಮದುವೆ ಸಮಾರಂಭಕ್ಕೆ ತೆರಳಿ, ಮದುವೆ ಮುಗಿಸಿಕೊಂಡು ಶೃಂಗೇರಿಗೆ ವಾಪಸ್ಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ.