ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಾವಣಗೆರೆ

MLC Abdul Jabbar: ರಾಜ್ಯ ಕಾಂಗ್ರೆಸ್‌ನಲ್ಲಿ ಕ್ಷಿಪ್ರ ಬೆಳವಣಿಗೆ; ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್‌ ಜಬ್ಬಾರ್‌ ದಿಢೀರ್‌ ರಾಜೀನಾಮೆ!

ಕೆಪಿಸಿಸಿ ಅಲ್ಪಸಂಖ್ಯಾತ ಘಟಕಕ್ಕೆ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ!

Karnataka Congress: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡದ ಹಿನ್ನೆಲೆಯಲ್ಲಿ ಮುಸ್ಲಿಂ ಮುಖಂಡರು ಅಸಮಾಧಾನ ಹೊರಹಾಕಿದ್ದರು. ಅಲ್ಲದೇ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ಅವರು ಪ್ರಚಾರದಲ್ಲಿ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ಅವರ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಲಾಗಿತ್ತು. ಹೈಕಮಾಂಡ್‌ ಸೂಚನೆ ಹಿನ್ನೆಲೆ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Karnataka Bypolls: ಉಪಚುನಾವಣೆ; ಬಾಗಲಕೋಟೆಯಲ್ಲಿ ಶೇ.68.66, ದಾವಣಗೆರೆ ದಕ್ಷಿಣದಲ್ಲಿ ಶೇ.68.43 ಮತದಾನ ದಾಖಲು

ಬಾಗಲಕೋಟೆಯಲ್ಲಿ ಶೇ.68.66, ದಾವಣಗೆರೆ ದಕ್ಷಿಣದಲ್ಲಿ ಶೇ.68.43 ಮತದಾನ

Voter Turnout: ಬಾಗಲಕೋಟೆಯಲ್ಲಿ ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್ ವೈ ಮೇಟಿ ನಿಧನ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಸ್ಥಾನಗಳಿಗೆ ಗುರುವಾರ ಉಪಚುನಾವಣೆ ನಡೆದಿದೆ. ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ ನಡೆದಿದೆ ಎಂಬ ಮಾಹಿತಿ ಇಲ್ಲಿದೆ.

Karnataka By Elections: ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಉಪಚುನಾವಣೆ ಮತದಾನ ಆರಂಭ

ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಉಪಚುನಾವಣೆ ಮತದಾನ ಆರಂಭ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮುಂಜಾನೆ ಮತದಾನ ಆರಂಭವಾಗಿದೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಗಳಿಗೆ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರು ಯಾರ ಕೈ ಹಿಡಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಗೆ ಕ್ಷಣಗಣನೆ; ಸಿದ್ಧತೆ ಹೇಗಿದೆ?

ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಗೆ ಕ್ಷಣಗಣನೆ; ಸಿದ್ಧತೆ ಹೇಗಿದೆ?

Davangere And Bagalkot by-elections: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ ಏಪ್ರಿಲ್ 9 ಕ್ಕೆ ನಡೆಯಲಿದ್ದು, ಎಲ್ಲಾ ರೀತಿಯ ಸಿದ್ದತೆಗಳನ್ನು ನಡೆಸಲಾಗುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್​ ಭದ್ರತೆ ಕೈಗೊಳ್ಳಲಾಗಿದೆ. ಕಳೆದ ಕೆಲವು ದಿನಗಳ ಭರ್ಜರಿ ಪ್ರಚಾರದ ಬಳಿಕ ಮಂಗಳವಾರ ಸಂಜೆ 5.30 ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿತ್ತು.

Road Accident: ಪ್ರವಾಸಕ್ಕೆ ಬಂದವರ ಮೇಲೆ ಹರಿದ ಇನ್ನೋವಾ, ಹಾರಿಹೋಯ್ತು ಯುವಕನ ಪ್ರಾಣ

ಪ್ರವಾಸಕ್ಕೆ ಬಂದವರ ಮೇಲೆ ಹರಿದ ಇನ್ನೋವಾ, ಹಾರಿಹೋಯ್ತು ಯುವಕನ ಪ್ರಾಣ

ದಾವಣೆಗೆರೆಯ ಮೂಲದ 10 ಮಂದಿ ಸ್ನೇಹಿತರು ರಾತ್ರಿ 2 ಗಂಟೆಗೆ ಟಿಟಿ ವಾಹನ ಮೂಲಕ ಕಾರವಾರದ ದಾಂಡೇಲಿಗೆ ಪ್ರವಾಸ ಹೊರಟಿದ್ದರು. ಬೆಳಗಿನ ಜಾವ 6 ಗಂಟೆಗೆ ಹಾವೇರಿಯ ತಡಸ್ ಬಳಿ ಟೀ ಶಾಪ್ ಬಳಿ ವಾಹನ ನಿಲ್ಲಿಸಿದ್ದಾರೆ. ಚಹಾ ಕುಡಿಯುತ್ತಾ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಅತೀ ವೇಗವಾಗಿ ಬಂದ ಇನ್ನೋವಾ ಕಾರು ಟಿಟಿ ವಾಹನಕ್ಕೆ ಡಿಕ್ಕಿಯಾಗಿದೆ.

Karnataka bypolls: ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ; ಏಪ್ರಿಲ್‌ 9ಕ್ಕೆ ಸರ್ಕಾರಿ ನೌಕರರಿಗೆ ರಜೆ ಘೋಷಣೆ

ಏಪ್ರಿಲ್‌ 9ಕ್ಕೆ ಉಪಚುನಾವಣೆ; ಸರ್ಕಾರಿ ನೌಕರರಿಗೆ ರಜೆ ಘೋಷಣೆ

ಏಪ್ರಿಲ್‌ 9ರ ಗುರುವಾರದಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಈ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ ನೌಕರರಿಗೆ ಒಂದು ದಿನದ ವೇತನ ಸಹಿತ ರಜೆ ಮಂಜೂರು ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಲೋಕಸಭೆ ಕ್ಷೇತ್ರ ಪುನರ್‌ ವಿಂಗಡಣೆ ಎಲ್ಲ ರಾಜ್ಯಗಳಲ್ಲೂ ಶೇಕಡಾವಾರು ಜನಸಂಖ್ಯೆ ಆಧಾರಿತ: ಪ್ರಲ್ಹಾದ್‌ ಜೋಶಿ

ಲೋಕಸಭೆ ಕ್ಷೇತ್ರ ಪುನರ್‌ ವಿಂಗಡಣೆ ಜನಸಂಖ್ಯೆ ಆಧಾರಿತ: ಜೋಶಿ

Pralhad Joshi: ದೇಶದಲ್ಲಿ ಚುನಾವಣೆಗಳಿದ್ದಾಗ ರಾಹುಲ್ ಗಾಂಧಿ ವಿದೇಶಕ್ಕೆ ಓಡಿ ಹೋಗುತ್ತಾರೆ. ಕ್ಷೇತ್ರಗಳಲ್ಲಿ ಓಡಾಡಿ ಜನರ ವಿಶ್ವಾಸ ಗಳಿಸಬೇಕು ಎಂಬುದಿಲ್ಲ. ಪರಿಣಾಮ ದೇಶಾದ್ಯಂತ ಕಾಂಗ್ರೆಸ್ ನೆಲಕಚ್ಚುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಆರೋಪಿಸಿದ್ದಾರೆ.

Karnataka Bypolls: ಉಪಚುನಾವಣೆ; ಎರಡೂ ಕ್ಷೇತ್ರದಲ್ಲೂ ಗೆದ್ದು ತೋರಿಸ್ತೀವಿ ಎಂದ ಸಿಎಂ

ಉಪಚುನಾವಣೆ; ಎರಡೂ ಕ್ಷೇತ್ರದಲ್ಲೂ ಗೆದ್ದು ತೋರಿಸ್ತೀವಿ ಎಂದ ಸಿಎಂ

ಕಾಂಗ್ರೆಸ್ ಎಲ್ಲಾ ಜಾತಿ, ಧರ್ಮದವರನ್ನೂ ಜೊತೆಗೆ ಕೊಂಡೊಯ್ಯುವ ಪಕ್ಷ. ಜಾತಿ ಜಾತಿಗಳ ನಡುವೆ, ಧರ್ಮ ಧರ್ಮಗಳ ನಡುವೆ ವಿಭಜನೆ ತಂದು ಓಟು ಕೇಳುವ ಕೆಟ್ಟ ರಾಜಕಾರಣವನ್ನು ನಾವು ಮಾಡುವುದಿಲ್ಲ. ಕೋಮುಗಲಭೆಗಳನ್ನು ಸಂಘಟಿಸಿ ರಾಜಕಾರಣ ಮಾಡುವುದು ಬಿಜೆಪಿಯ ಜಾಯಮಾನ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Davanagere South by-election: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಪರ ಸುನಾಮಿಯಂಥ ಅಲೆ: ವಿಜಯೇಂದ್ರ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಪರ ಸುನಾಮಿಯಂಥ ಅಲೆ: ವಿಜಯೇಂದ್ರ

BY Vijayendra: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಬೃಹತ್ ಶೋಭಾ ಯಾತ್ರೆಯ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈ ಬಾರಿ ಕೇವಲ ಬಿಜೆಪಿ ಅಲೆಯಲ್ಲ, ಒಂದು ರೀತಿಯ ಸುನಾಮಿಯಂಥ ಅಲೆಯ ವಾತಾವರಣ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

Davanagere South by-election: ಅಲ್ಲಿ ಗಾಂಧಿ ಕುಟುಂಬ, ಇಲ್ಲಿ ಶಾಮನೂರು ಕುಟುಂಬ; ಬೇರೆ ಯಾರೂ ಸಮರ್ಥರಿಲ್ಲವೇ?: ಜೋಶಿ ಪ್ರಶ್ನೆ

ಕುಟುಂಬ ರಾಜಕಾರಣ ಪೋಷಿಸಿಕೊಳ್ತಿದೆ ಕಾಂಗ್ರೆಸ್: ಜೋಶಿ

Pralhad Joshi: ಕಾಂಗ್ರೆಸ್ ಪಕ್ಷ ಹೈಕಮಾಂಡ್ ಗಾಂಧಿ ಕುಟುಂಬದ ಕೈಯಲ್ಲಿದ್ದರೆ, ದಾವಣಗೆರೆಯಲ್ಲಿ ಶಾಮನೂರು ಕುಟುಂಬದ ಕೈಯಲ್ಲಿದೆ. ಪಕ್ಷಕ್ಕಿಂತ ಕುಟುಂಬ ರಾಜಕಾರಣ ಹಾಸುಹೊಕ್ಕಾಗಿದೆ. ಭವಿಷ್ಯದಲ್ಲೂ ನಿಷ್ಠಾವಂತ ಕಾರ್ಯಕರ್ತರಿಗಿಂತ ಕುಟುಂಬದ ಕುಡಿಗಳನ್ನೇ ಮುನ್ನಲೆಗೆ ತರುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.

ʼʼಪಂಚ ಗ್ಯಾರಂಟಿಗೆ ಜನ ಮೆಚ್ಚುಗೆʼʼ; ದಾವಣಗೆರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದೇ ಗೆಲ್ಲುತ್ತೆ ಎಂದ ಅನ್ನಪೂರ್ಣ ತುಕಾರಾಮ್ Video

ಪಂಚ ಗ್ಯಾರಂಟಿಗೆ ಜನ ಮೆಚ್ಚುಗೆ:ಅನ್ನಪೂರ್ಣ ತುಕಾರಾಮ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಇದರಿಂದಾಗಿ ದಾವಣಗೆರೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಖಚಿತ ಎಂದು ವಿಶ್ವವಾಣಿ ಜೊತೆ ಮಾತನಾಡಿದ ಶಾಸಕಿ ಅನ್ನಪೂರ್ಣ ತುಕಾರಾಮ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಹಿಂದ ಹೆಸರಿನಲ್ಲಿ ನಿರಂತರ ಲೂಟಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕಿಡಿ

ಅಹಿಂದ ಹೆಸರಿನಲ್ಲಿ ನಿರಂತರ ಲೂಟಿ: ಸಿಎಂ ವಿರುದ್ಧ ಕುಮಾರಸ್ವಾಮಿ ಕಿಡಿ

ಉಪ ಚುನಾವಣೆಯನ್ನು ಹೇಗಾದರೂ ಗೆಲ್ಲಲೇಬೇಕು ಎಂದು ಇಡೀ ಸರ್ಕಾರ ಆಡಳಿತವನ್ನು ಗಾಳಿಗೆ ಬಿಟ್ಟು ದಾವಣಗೆರೆಯಲ್ಲಿ ಮೊಕ್ಕಂ ಹೂಡಿದೆ. ವಿಧಾನಸೌಧ ಸಂಪೂರ್ಣ ಖಾಲಿ ಆಗಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರ ಜತೆಗೆ ಎಐಸಿಸಿ ರಾಜ್ಯ ಉಸ್ತುವಾರಿ ಆಗಿರುವ ವ್ಯಕ್ತಿ ಕೂಡ ಇಲ್ಲಿಯೇ ತಳವೂರಿದ್ದಾರೆ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಉಪ ಚುನಾವಣೆ; 2 ಕ್ಷೇತ್ರ ಕೈಜಾರುವ ಭೀತಿಯಿಂದ ಸಿಎಂಗೆ ನಿದ್ರೆ ಬರುತ್ತಿಲ್ಲ ಎಂದ ವಿಜಯೇಂದ್ರ

2 ಕ್ಷೇತ್ರ ಕೈಜಾರುವ ಭೀತಿಯಿಂದ ಸಿಎಂಗೆ ನಿದ್ರೆ ಬರುತ್ತಿಲ್ಲ ಎಂದ ವಿಜಯೇಂದ್ರ

BY Vijayendra: ಎರಡೂ ಕಡೆಗಳಲ್ಲಿ ಬಿಜೆಪಿ ಗೆದ್ದೇ ಗೆಲ್ಲುವ ವಾತಾವರಣ ನಿರ್ಮಾಣವಾಗಿದೆ. ಯಾವ ಕ್ಷೇತ್ರದಲ್ಲಿ ಹೆಚ್ಚು ಪ್ರಚಾರದಲ್ಲಿ ತೊಡಗಿಸಿಕೊಳ್ಳಬೇಕೆಂಬ ಗೊಂದಲದಲ್ಲಿ ಮುಖ್ಯಮಂತ್ರಿಗಳು ಇದ್ದಾರೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಉಪ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಸೋಲುವ ಭೀತಿ ಎದುರಾಗಿದೆ: ಬಿ.ವೈ. ವಿಜಯೇಂದ್ರ

ಸೂಟ್‌ಕೇಸ್ ವಿಚಾರ; ಬಿಜೆಪಿಯವರು ಇನ್ನು ಯಾಕೆ ದೂರು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಡಿ.ಕೆ. ಶಿವಕುಮಾರ್

ಸೂಟ್‌ಕೇಸ್ ವಿಚಾರ; ಬಿಜೆಪಿಯವರು ಇನ್ನು ಯಾಕೆ ದೂರು ಕೊಟ್ಟಿಲ್ಲ ಎಂದ ಡಿಕೆಶಿ

DK Shivakumar: ದಾವಣಗೆರೆಯಲ್ಲಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ʼಸದಾನಂದ ಗೌಡರು ಪ್ರಚಾರಕ್ಕೆ ಬಂದಿದ್ದಾರಾ ಅವರು ಸೂಟ್‌ಕೇಸ್ ಎಷ್ಟು ದಪ್ಪ ಇದೆ, ಎಷ್ಟು ಅಗಲವಿದೆ ಎಂದು ಲೆಕ್ಕಾಚಾರ ಹಾಕಿದ್ದಾರಾ? ಅವರು ಈ ಬಗ್ಗೆ ದೂರು ನೀಡಲಿ ಎಂದು ತಿರುಗೇಟು ನೀಡಿದ್ದಾರೆ.

ಆ ರೀತಿ ಮಾಡಿದ್ರೆ 1 ಪೈಸೆ ಸಾಲ ಮಾಡದೆ ರಾಜ್ಯದ ಆರ್ಥಿಕತೆ ನಿರ್ವಹಿಸುವೆ: ಬಿಜೆಪಿ ನಾಯಕರಿಗೆ ಸಿಎಂ ಸವಾಲು

ಆ ರೀತಿ ಮಾಡಿದ್ರೆ 1 ಪೈಸೆ ಸಾಲ ಮಾಡದೆ ಆರ್ಥಿಕತೆ ನಿರ್ವಹಿಸುವೆ: ಸಿಎಂ

Karnataka’s Tax Share: ರಾಜ್ಯದಲ್ಲಿ ಟ್ಯಾಕ್ಸ್ ಟೆರರಿಸಂ ಶುರುವಾಗಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಕೂಗಿಕೂಗಿ ಹೇಳಿದ್ದೇವೆ. ಆಗ ಬಾಯಿ ಮುಚ್ಚಿಕೊಂಡು ಏಳುಕೋಟಿ ಕನ್ನಡಿಗರಿಗೆ ದ್ರೋಹಬಗೆದಿರುವ ಬಿಜೆಪಿ ನಾಯಕರು ಈಗ ನಮ್ಮ ವಿರುದ್ಧ ಕೂಗು ಹಾಕುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ನಾವು ಒಳ್ಳೆ ಕೆಲಸ ಮಾಡಿದ್ದೀವಲ್ವಾ? ಜನ ಓಟ್‌ ಹಾಕ್ತಾರೆ ಅನ್ನೋ ನಂಬಿಕೆಯಿದೆ ಎಂದ ಸಿಎಂ Video

ಒಳ್ಳೆ ಕೆಲಸ ಮಾಡಿದ್ದೇವೆ, ಜನ ನಮಗೆ ಓಟ್‌ ಹಾಕ್ತಾರೆ: ಸಿಎಂ

CM Siddaramaiah: ಬಿಜೆಪಿಯವರ ಅಪಪ್ರಚಾರದ ನಡುವೆಯೂ ಹಿಂದೆ ನಡೆದ 3 ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದೇವೆ. ಮಾಜಿ ಮುಖ್ಯಮಂತ್ರಿಗಳ ಪುತ್ರರು ನಿಂತಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಈಗ ನಡೆಯುತ್ತಿರುವ ಎರಡು ಕ್ಷೇತ್ರಗಳ ಉಪಚುನಾವಣೆಗೆ ಪ್ರಚಾರ ಕಾರ್ಯ ಉತ್ತಮವಾಗಿ ನಡೆಯುತ್ತಿದೆ. ನಾವು ಒಳ್ಳೆಯ ಕೆಲಸಗಳನ್ನು ಮಾಡಿದ್ದೇವೆ ಹೀಗಾಗಿ ಜನರು ಮತ ಹಾಕುತ್ತಾರೆ ಎಂಬ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ: ಸಿಎಂ ಸಿದ್ದರಾಮಯ್ಯ

ನಮ್ಮ ಅಭ್ಯರ್ಥಿ ಸಮರ್ಥ್ ಶಾಮನೂರು ಗೆದ್ದರೆ ನನಗೆ ಶಕ್ತಿ ಬರುತ್ತದೆ: ಸಿಎಂ

CM Siddaramaiah: ಕಾಂಗ್ರೆಸ್‌ನಲ್ಲಿ ಕುಟುಂಬ ರಾಜಕಾರಣ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ, ದೇವೇಗೌಡ‌ ಅವರ ಮಕ್ಕಳು, ಮೊಮ್ಮಕ್ಕಳು ಚುನಾವಣೆಗೆ ಸ್ಪರ್ಧಿಸುತ್ತಿಲ್ಲವೇ? ಅದು ಕುಟುಂಬ ರಾಜಕಾರಣ ಅಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ದಾವಣಗೆರೆಯಲ್ಲಿ ಆರ್ಯವೈಶ್ಯ ಬಂಧುಗಳ ಸ್ನೇಹ ಮಿಲನ; ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಮತಯಾಚನೆ

ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಬಿಎಸ್‌ವೈ ಮತಯಾಚನೆ

Davanagere South byelection: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದ ಭಾಗವಾಗಿ ಆರ್ಯ ವೈಶ್ಯ ಸಂಘ ಸಂಸ್ಥೆಗಳ ಸಮೂಹವು ಆಯೋಜಿಸಿದ್ದ ʼಆರ್ಯವೈಶ್ಯ ಬಂಧುಗಳ ಸ್ನೇಹ ಮಿಲನʼ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ಪರ ಮತಯಾಚನೆ ಮಾಡಿದರು.

Basavaraj Bommai: ರಾಜ್ಯದಲ್ಲಿ ಟ್ಯಾಕ್ಸ್ ಟೆರರಿಸಂ ಶುರುವಾಗಿದೆ ಎಂದ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಟ್ಯಾಕ್ಸ್ ಟೆರರಿಸಂ ಶುರುವಾಗಿದೆ ಎಂದ ಬಸವರಾಜ ಬೊಮ್ಮಾಯಿ

Basavaraj Bommai: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದಲ್ಲಿ ಸುಮಾರು 5 ಲಕ್ಷ ಕೋಟಿ ಹೊಸ ಸಾಲ ಮಾಡಿ, ದಾಖಲೆ ಸಾಲಗಾರ ಸಿದ್ದರಾಮಯ್ಯ ಎಂದು ಹೆಸರು ಪಡೆದುಕೊಂಡಿದ್ದಾರೆ. ಎಲ್ಲ ಇಲಾಖೆಗಳಲ್ಲಿ ವ್ಯಾಪಕವಾಗಿ ಭ್ರಷ್ಟಾಚಾರ ನಡೆಯುತ್ತಿದ್ದು ಇಂತಹ ಭ್ರಷ್ಟ ಸರ್ಕಾರ ನೋಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

Karnataka Bypolls: ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆ; ಕಾಂಗ್ರೆಸ್‌ನಿಂದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ಉಪ ಚುನಾವಣೆ; ಕಾಂಗ್ರೆಸ್‌ನಿಂದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಯ ಮತದಾನ ಏಪ್ರಿಲ್‌ 9ರಂದು ನಡೆಯಲಿದೆ. ಮೇ 4 ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ. ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿ 40 ಮಂದಿ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ದಾವಣಗೆರೆ ಉಪಚುನಾವಣೆ; ಬಂಡಾಯ ಅಭ್ಯರ್ಥಿಗಳು ನಮ್ಮವರೇ ಎಂದ ಡಿ.ಕೆ. ಶಿವಕುಮಾರ್

ದಾವಣಗೆರೆ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಗಳು ನಮ್ಮವರೇ: ಡಿಕೆಶಿ

DK Shivakumar: ನಿನ್ನೆ ನಾನು ಹಾಗೂ ಸಿದ್ದರಾಮಯ್ಯ ಅವರು ದಾವಣಗೆರೆ ಹಾಗೂ ಬಾಗಲಕೋಟೆ ಪ್ರವಾಸ ಮಾಡಿ ಬಂದಿದ್ದೇವೆ. ದಾವಣಗೆರೆಯಲ್ಲಿ ಬಹಳಷ್ಟು ಜನ ನಾಮಪತ್ರ ಸಲ್ಲಿಸಿದ್ದು, ಅವರು ನಮ್ಮವರೇ. ನಮ್ಮ ನಾಯಕರೆಲ್ಲರೂ ಅವರ ಜತೆ ಮಾತನಾಡುತ್ತಾರೆ. ಎಲ್ಲವೂ ಸರಿ ಹೋಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Davanagere South Assembly Bypoll: ದಾವಣಗೆರೆಯಲ್ಲಿ ಮುಸ್ಲಿಮರ ಬಂಡಾಯ, ಕಾಂಗ್ರೆಸ್‌ಗೆ ಸಡ್ಡು ಹೊಡೆದು 23 ಮಂದಿ ನಾಮಪತ್ರ

ದಾವಣಗೆರೆಯಲ್ಲಿ ಕಾಂಗ್ರೆಸ್‌ಗೆ ಮುಸ್ಲಿಮರ ಸಡ್ಡು, 23 ಮಂದಿಯಿಂದ ನಾಮಪತ್ರ

ಶಾಮನೂರು ಶಿವಶಂಕರಪ್ಪ (Shamanuru Shivashankarappa) ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ (Davanagere South) ಕ್ಷೇತ್ರದ ಟಿಕೆಟ್‌ ನಮಗೆ ನಮ್ಮ ಸಮುದಾಯ ನಾಯಕರಿಗೆ ನೀಡಬೇಕೆಂದು ಮುಸ್ಲಿಮ್‌ ನಾಯಕರು ಪಟ್ಟು ಹಿಡಿದಿದ್ದರು. ಆದರೆ ಕಾಂಗ್ರೆಸ್‌ ಹೈಕಮಾಂಡ್‌ ಮುಸ್ಲಿಮರ ಬೇಡಿಕೆಗೆ ಸ್ಪಂದಿಸದೇ ಎಸ್‌ಎಸ್‌ ಮಲ್ಲಿಕಾರ್ಜುನ್‌ ಪುತ್ರ ಸಮರ್ಥ್‌ಗೆ ಟಿಕೆಟ್‌ ನೀಡಿತ್ತು.

Karnataka bypolls: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ, ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಿ: ಬಿ.ಎಸ್‌. ಯಡಿಯೂರಪ್ಪ ಕರೆ

ಬಿಜೆಪಿ ಗೆಲ್ಲಿಸಿ, ಕಾಂಗ್ರೆಸ್ಸಿಗೆ ತಕ್ಕ ಪಾಠ ಕಲಿಸಿ: ಬಿ.ಎಸ್‌. ಯಡಿಯೂರಪ್ಪ

ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿರುವ ಅವರು, ಬದಲಾವಣೆ ತರುವ ಕಾತುರತೆಯಲ್ಲಿ ಇರುವ ರಾಜ್ಯದ ಜನತೆ, ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ಬಿಜೆಪಿ ಗೆಲ್ಲಿಸಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕೆಂದು ಕೋರಿದ್ದಾರೆ.

Davanagere South by-election: ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌ ನೀಡಿದ್ದೇವೆ ಎಂದ ಡಿ.ಕೆ. ಶಿವಕುಮಾರ್

ಉಪಚುನಾವಣೆ ಟಿಕೆಟ್; ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಎಂದ ಡಿಕೆಶಿ

DK Shivakumar: ರಾಜಕೀಯದಲ್ಲಿ ಎಲ್ಲರಿಗೂ ತಮ್ಮ ಬೇಡಿಕೆ ಕೇಳುವ ಅಧಿಕಾರವಿದೆ. ಅವರು ಕೇಳುವುದರಲ್ಲಿ ತಪ್ಪಿಲ್ಲ. ಪಕ್ಷಕ್ಕೆ ದುಡಿದಿರುತ್ತಾರೆ, ಅವರಿಗೆ ಕೇಳುವ ಹಕ್ಕಿರುತ್ತದೆ. ಇರುವುದು ಒಂದು ಸೀಟು. ನಾವು ಮೊದಲಿನಿಂದಲೂ ಎಲ್ಲರಿಗೂ ಅಧಿಕಾರ ನೀಡುತ್ತಾ ಬಂದಿದ್ದು, ಎಲ್ಲಾ ವಿಚಾರವನ್ನು ಬಗೆಹರಿಸುತ್ತೇವೆ. ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

Loading...