About Us Advertise with us Be a Reporter E-Paper

Breaking Newsರಾಜ್ಯ
Trending

ವಾಜಪೇಯಿ, ವಿ.ಎಸ್.ಆಚಾರ್ಯರಿಗೆ ಈ ಗೆಲುವು ಸಮರ್ಪಣೆ: ರಘುಪತಿ ಭಟ್

ಉಡುಪಿ: ಜಿಲ್ಲೆಯಲ್ಲಿ ನಡೆದ ನಾಲ್ಕು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವನ್ನು ಅಟಲ್ ಬಿಹಾರಿ ವಾಜಪೇಯಿ, ಡಾ. ವಿ.ಎಸ್.ಆಚಾರ್ಯರಿಗೆ ಸಲ್ಲಿಸಲಾಗುವುದು ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಶಾಸಕ ರಘುಪತಿ ಭಟ್, ಉಡುಪಿ ನಗರಸಭೆ ಗೆಲುವು ಐತಿಹಾಸಿಕ ಕಾರಣಕ್ಕೂ ಸ್ಮರಿಸುವಂತಹ ಗೆಲುವು. ಐವತ್ತು ವರ್ಷ ಹಿಂದೆ ಇಡಿ ದೇಶದಲ್ಲೇ ಮೊದಲ ಬಾರಿಗೆ ಜನಸಂಘ ಉಡುಪಿ ನಗರಸಭೆಯನ್ನು ಗೆದ್ದುಕೊಂಡಿತ್ತು. ಈಗ ಬಿಜೆಪಿಗೆ ಭಾರಿ ಬಹುಮತ ಬಂದಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ನಡೆದ ನಾಲ್ಕು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಉಡುಪಿ ನಗರಸಭೆ, ಕಾರ್ಕಳ, ಕುಂದಾಪುರ ಪುರಸಭೆ ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್‍‍‍‍‍ಗಳಲ್ಲೂ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ.

Tags

Related Articles

Leave a Reply

Your email address will not be published. Required fields are marked *

Language
Close