About Us Advertise with us Be a Reporter E-Paper

Breaking Newsದೇಶಪ್ರಚಲಿತ

ಯುವತಿಗೆ ಹಿಗ್ಗಾಮುಗ್ಗಾ ಥಳಿತ: ಜಾಲತಾಣಗಳಲ್ಲಿ ವಿಡಿಯೋ ವೈರಲ್

ಆರೋಪಿ, ಪೊಲೀಸ್‌ ಅಧಿಕಾರಿ ಮಗನ ಮೇಲೆ ಕ್ರಮ ಕೈಗೊಳ್ಳುವಂತೆ ರಾಜ್‌ನಾಥ್‌ ಸಿಂಗ್‌ ಆದೇಶ

ದೆಹಲಿ: ನಗರದ ಪೊಲೀಸ್ ಅಧಿಕಾರಿ ಅಶೋಕ್ ಸಿಂಗ್ ಅವರ ಮಗನೊಬ್ಬ ಹುಡುಗಿಗೆ ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೋಳ್ಳುವಂತೆ ಕೇಂದ್ರ ಗೃಹ ಸಚಿವ ರಾಜ್‌ನಾಥ್‌ ಸಿಂಗ್‌ ಪೊಲೀಸರಿಗೆ ಆದೇಶಿಸಿದ್ದಾರೆ.

ಆರೋಪಿಯನ್ನು ರೋಹಿತ್ ತೋಮರ್ ಎಂದು ತಿಳಿದು ಬಂದಿದೆ. ಈ ಘಟನೆಯು ದೆಹಲಿಯ ತಿಲಕ್ ನಗರದಲ್ಲಿ ನಡೆದಿದೆ. ಸೆ. 2ರಂದು ಮಧ್ಯಾಹ್ನ ಉತ್ತಮ್ ನಗರ ಪ್ರದೇಶದಲ್ಲಿದಲ್ಲಿರೋ ಬಿಪಿಒ ಆಫೀಸಿನಲ್ಲಿ ಈ ವಿಡಿಯೋ ರೆಕಾರ್ಡ್ ಆಗಿದೆ. ಈ ಆಫೀಸ್ ನ ಮಾಲೀಕ ರೋಹಿತ್ ಗೆಳೆಯನೇ ಆಗಿದ್ದಾನೆ. 21 ವರ್ಷದ ಆರೋಪಿ ರೋಹಿತ್ ನಿರುದ್ಯೋಗಿಯಾಗಿದ್ದು, ಇತ್ತೀಚೆಗಷ್ಟೇ ಬಿಪಿಓದಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದನು ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಥಳಿತಕ್ಕೊಳಗಾದ ಹುಡುಗಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಹೀಗಾಗಿ ಪೊಲೀಸರು ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 506 ಹಾಗೂ 354ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆಗಳನ್ನು ಪಕ್ಕದಲ್ಲೇ ಇದ್ದ ವ್ಯಕ್ತಿಯೊಬ್ಬ ತನ್ನ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾನೆ. ಒಟ್ಟಿನಲ್ಲಿ ಆರೋಪಿ ಆ ಹುಡುಗಿಗೆ ಥಳಿಸಲು ಕಾರಣವೇನೆಂದು ತಿಳಿದುಬಂದಿಲ್ಲ.

ಪೊಲೀಸರು ಘಟನೆಯ ಬಗ್ಗೆ ಮಾತುಕತೆ ನಡೆಸಲು ಆರೋಪಿ ತಂದೆ ಅಶೋಕ್ ತೋಮರ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಾರೆ. ಆದರೆ ಅಶೋಕ್ ಅವರು ತಮ್ಮ ಮೊಬೈಲ್ ಸ್ವಿಚ್ಚ್ ಆಫ್ ಮಾಡಿಕೊಂಡಿದ್ದಾರೆ. ಹೀಗಾಗಿ ಸದ್ಯ ಪೊಲೀಸರು ಪ್ರಕರಣವನ್ನು ಕೈಗೆತ್ತಿಕೊಂಡು ತನಿಖೆ ಆರಂಭಿಸಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close