Breaking Newsಪ್ರಚಲಿತರಾಜ್ಯ
ದೇಶಪಾಂಡೆ ಸಿಎಂ ಅಭ್ಯರ್ಥಿ ಎಂಬುದು ಹಳೆಯ ವಿಚಾರ: ದೇವೇಗೌಡ

ಬೆಂಗಳೂರು: ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ಮುಖ್ಯಮಂತ್ರಿಯಾಗಲು ಅರ್ಹರು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿರುವುದರಲ್ಲಿ ವಿಶೇಷತೆ ಏನೂ ಇಲ್ಲ , ದೇಶಪಾಂಡೆ ಅವರು ಕೂಡ ಮುಖ್ಯಮಂತ್ರಿ ಅಭ್ಯರ್ಥಿ ಎಂಬುದು ಹಳೆಯ ವಿಚಾರ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾಗಿದ್ದಾಗ ಅವರ ಸಂಪುಟದಲ್ಲಿ ನಾನೂ ಮತ್ತು ದೇಶಪಾಂಡೆ ಅವರು ಒಟ್ಟಿಗೆ ಕೆಲಸ ಮಾಡಿದ್ದೇವೆ. ದೇಶಪಾಂಡೆ ರಾಜಕೀಯದಲ್ಲಿ ಅನುಭವ ಹೊಂದಿದ್ದಾರೆ. ಕೈಗಾರಿಕಾ ಸಚಿವರಾಗಿ ಸಾಕಷ್ಟು ಅನುಭವ ಪಡೆದಿದ್ದಾರೆ. ಹಾಗಾಗಿ ಅವರ ಹೆಸರು ಈಗ ಮತ್ತೆ ಮುಂಚೂಣಿಗೆ ಬಂದಿದೆ. ಅದರಲ್ಲಿ ತಪ್ಪೇನಿಲ್ಲ ಎಂದರು.
ಧರ್ಮಸಿಂಗ್ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗಲೇ ದೇಶಪಾಂಡೆ ಮುಖ್ಯಮಂತ್ರಿ ಎಂಬ ವಿಷಯ ಪ್ರಸ್ತಾಪ ಬಂದಿತ್ತು. ಈಗ ಕುಮಾರಸ್ವಾಮಿ ಹೇಳಿರುವುದರಲ್ಲಿ ವಿಶೇಷತೆ ಇಲ್ಲ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು.