ಲಾರಿಯಿಂದ ಟ್ರ್ಯಾಕ್ಟರ್ ಇಳಿಸುವಾಗ ಮೈಮೇಲೆ ಬಿದ್ದು ಯುವಕ ಸಾವು
Dharwad News: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಮೇಳದ ಹಿನ್ನೆಲೆಯಲ್ಲಿ ತಂದಿದ್ದ ಟ್ರ್ಯಾಕ್ಟರ್ ಅನ್ನು ಲಾರಿಯಿಂದ ಇಳಿಸುವಾಗ ಮೈಮೇಲೆ ಬಿದ್ದು ಒಬ್ಬರು ಮೃತಪಟ್ಟಿದ್ದಾರೆ. ತುಮಕೂರು ಮೂಲದ ಪರಶುರಾಮ (32) ಮೃತರು. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಧಾರವಾಡ ಉಪನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.