ವಿನಯ್ ಕುಲಕರ್ಣಿಗೆ ಗುಡ್‌ನ್ಯೂಸ್; ಶಾಸಕ ಸ್ಥಾನ ಮರುಸ್ಥಾಪನೆ
ವಿನಯ್ ಕುಲಕರ್ಣಿ ಅವರು ಧಾರವಾಡ ಕ್ಷೇತ್ರದ ಶಾಸಕರಾಗಿ ತಮ್ಮ ಅಧಿಕೃತ ಕಾರ್ಯಚಟುವಟಿಕೆಗಳನ್ನು ಮುಂದುವರಿಸಲು ಹಸಿರು ನಿಶಾನೆ ಸಿಕ್ಕಿದೆ. ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಿ ವಿಧಾನಸಭೆ ಸಚಿವಾಲಯ ಆದೇಶ ಹೊರಡಿಸಿದೆ. ಈ ಪ್ರತಿಯನ್ನು ಭಾರತೀಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೂ ರವಾನಿಸಲಾಗಿದೆ.