ಮಾಹಿತಿ ತಂತ್ರಜ್ಞಾನ ಉನ್ನತೀಕರಣ: 2 ದಿನ ಎಸ್ಕಾಂಗಳ ಆನ್‌ಲೈನ್ ಸೇವೆ ಅಲಭ್ಯ
BESCOM: ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್‌ಲೈನ್ ಸೇವೆಗಳಾದ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್‌ಲೈನ್ ಆಧಾರಿತ ಸೇವೆಗಳು ಜುಲೈ 25ರಂದು ರಾತ್ರಿ 8.30 ಗಂಟೆಯಿಂದ ಜುಲೈ 27ರ ರಾತ್ರಿ 10 ಗಂಟೆಯವರೆಗೆ ಲಭ್ಯವಿರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.