ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜಿಲ್ಲೆ

ಕಸಾಪ ಅಧ್ಯಕ್ಷ ಸ್ಥಾನಕ್ಕೆ ನಿವೃತ್ತ ಅಧಿಕಾರಿಗಳು ಸ್ಪರ್ಧಿಸಬಾರದೆಂಬ ವಾದದಲ್ಲಿ ಹುರುಳಿಲ್ಲ: ಡಾ.ಸಿ. ಸೋಮಶೇಖರ್

ನಿವೃತ್ತ ಅಧಿಕಾರಿಗಳು ಕಸಾಪಕ್ಕೆ ಸ್ಪರ್ಧಿಸಬಾರದೆಂಬ ವಾದದಲ್ಲಿ ಹುರುಳಿಲ್ಲ

ಕಸಾಪವನ್ನು ಕನ್ನಡಿಗರ ಸ್ವಾಭಿಮಾನದ ಸಂಸ್ಥೆಯಾಗಿ ರೂಪಿಸುವುದು ಮತ್ತು ನಿಂತು ಹೋಗಿರುವ ಚಟುವಟಿಕೆಗಳನ್ನು ಮರುಆರಂಭಿಸುವುದು ತಮ್ಮ ಮುಖ್ಯ ಗುರಿಯಾಗಿದ್ದು, ಕಸಾಪ ಆಜೀವ ಸದಸ್ಯರು ತಮಗೆ ಮತ ನೀಡಿ ಬೆಂಬಲಿಸುವಂತೆ ಕಸಾಪ ಕೇಂದ್ರ ಮಂಡಳಿಯ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಡಾ. ಸಿ. ಸೋಮಶೇಖರ್ ಮನವಿ ಮಾಡಿದ್ದಾರೆ.

ಒಂದೇ ಮಳೆಗೆ ಜಲಾವೃತಗೊಂಡ ಕೋಟ್ಯಂತರ ರೂಪಾಯಿ ವೆಚ್ಚದ ತುಮಕೂರು ಸ್ಮಾರ್ಟ್ ಸಿಟಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ; ಅವೈಜ್ಞಾನಿಕ ಕಾಮಗಾರಿಗೆ ಆಕ್ರೋಶ

ಮಳೆಗೆ ತುಮಕೂರು ಸ್ಮಾರ್ಟ್‌ಸಿಟಿ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣ ಜಲಾವೃತ

Tumkur News: ತುಮಕೂರಿನಲ್ಲಿ ಮಂಗಳವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ನಗರದ ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣವು ಸಂಪೂರ್ಣವಾಗಿ ಜಲಾವೃತಗೊಂಡಿದೆ. ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಡ್ಡರಹಳ್ಳಿಯ ಫಲಾನುಭವಿಗೆ ವಾತ್ಸಲ್ಯ ಮನೆ ಹಸ್ತಾಂತರ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Tumkur News: ತುಮಕೂರು ತಾಲೂಕಿನ ಹೊನ್ನಡಿಕೆ ಹ್ಯಾಂಡ್ ಪೋಸ್ಟ್ ಸಮೀಪದ ವಡ್ಡರಹಳ್ಳಿಯ ಬಡ ಕುಟುಂಬಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಯೋಜನೆಯಡಿ ಮನೆ ನಿರ್ಮಿಸಿ ಫಲಾನುಭವಿ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಸಂಸ್ಥೆಯ ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ, ನೂತನ ಮನೆ ಹಸ್ತಾಂತರಿಸಿದರು.

ಕಾಂಗ್ರೆಸ್ ಪಕ್ಷದಿಂದ ಮಾತ್ರ ಅಹಿಂದ ಸಮುದಾಯಕ್ಕೆ ರಾಜಕೀಯ ಅಧಿಕಾರ: ಎಂಎಲ್‌ಸಿ ಶ್ರೀನಿವಾಸ್

ಕಾಂಗ್ರೆಸ್‌ನಿಂದ ಮಾತ್ರ ಅಹಿಂದ ಸಮುದಾಯಕ್ಕೆ ಅಧಿಕಾರ: ಶ್ರೀನಿವಾಸ್

Tumkur News: ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಸಂದರ್ಭದಲ್ಲೆಲ್ಲಾ ತಳ ಸಮುದಾಯಗಳ ಸಬಲೀಕರಣಕ್ಕೆ ಯೋಜನೆಗಳನ್ನು ರೂಪಿಸುತ್ತಾ ಬಂದಿದೆ ಎಂದು ಹೇಳಿದ್ದಾರೆ.

ಒಕ್ಕಲಿಗ ಯುವ ಬ್ರಿಗೇಡ್‌ ಸೇವೆ ಯುವಜನರಿಗೆ ದಾರಿ ದೀಪ: ಸುತ್ತೂರು ಮಠದ ಶ್ರೀ ಜಯರಾಜೇಂದ್ರ ಸ್ವಾಮೀಜಿ

ಒಕ್ಕಲಿಗ ಯುವ ಬ್ರಿಗೇಡ್‌ನ ಸೇವೆಗಳು ಯುವಜನರಿಗೆ ದಾರಿ ದೀಪ

ಪಿರಿಯಾಪಟ್ಟಣ ತಾಲೂಕಿನ ಮಾನಸ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಒಕ್ಕಲಿಗ ಯುವ ಬ್ರಿಗೇಡ್‌ನ ವತಿಯಿಂದ ರಾಜ್ಯ ಮಟ್ಟದ ಉದ್ಯೋಗ ಮೇಳ, ಪ್ರಗತಿಪರ ರೈತರಿಗೆ ಉಚಿತ ಮಲೆನಾಡು ಗಿಡ್ಡಗಳ ವಿತರಣೆ ಮತ್ತು ಕಾಯಕಯೋಗಿಗಳಿಗೆ “ನಮ್ಮೂರ ಹೆಮ್ಮೆ ಪ್ರಶಸ್ತಿ” ಪ್ರದಾನ ಕಾರ್ಯಕ್ರಮ ಜರುಗಿತು.

ಹಿರಿಯ ನಾಗರಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾಯಾಧೀಶ ಲೋಕೇಶ್ ಧನಪಾಲ್ ಹವಳೆ

ಹಿರಿಯ ನಾಗರಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿ

Tumkur News: ಮಕ್ಕಳು ತಮ್ಮ ವಯಸ್ಸಾದ ತಂದೆ-ತಾಯಿಯನ್ನು ಪ್ರೀತಿಯಿಂದ ಆರೈಕೆ ಮಾಡಬೇಕು. ಹಿರಿಯರನ್ನು ಗೌರವಿಸುವ ಸಂಸ್ಕಾರವನ್ನು ಬಾಲ್ಯದಿಂದಲೇ ಮಕ್ಕಳಿಗೆ ಕಲಿಸುವುದರ ಮೂಲಕ ನಮ್ಮ ದೇಶದ ಸಂಪ್ರದಾಯ, ಸಂಸ್ಕೃತಿ ಮತ್ತು ನೈತಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲೋಕೇಶ್ ಧನಪಾಲ್ ಹವಳೆ ತಿಳಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ತುಮಕೂರಿನಲ್ಲಿ ರೈತ ಸಂಘದಿಂದ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತುಮಕೂರಿನಲ್ಲಿ ರೈತ ಸಂಘ ಪ್ರತಿಭಟನೆ

Tumkur News: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ತುಮಕೂರು ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು. ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರಪ್ಪ ಮತ್ತು ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ನೇತೃತ್ವದಲ್ಲಿ ನಗರದ ಬಿಎಸ್‌ಜೆ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರೈತರು ಪಾದಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ವೈದ್ಯಕೀಯ ಶಿಕ್ಷಣದಲ್ಲಿ ಅಂಕ ಗಳಿಕೆಗಿಂತ ಸಮರ್ಪಣಾ ಭಾವ ಮುಖ್ಯ: ಡಾ. ಎಚ್.ಬಸವನಗೌಡಪ್ಪ

ವೈದ್ಯಕೀಯ ಶಿಕ್ಷಣದಲ್ಲಿ ಅಂಕ ಗಳಿಕೆಗಿಂತ ಸಮರ್ಪಣಾ ಭಾವ ಮುಖ್ಯ

Tumkur News: ವೈದ್ಯಕೀಯ ಶಿಕ್ಷಣದಲ್ಲಿ ಕೇವಲ ಅಂಕ ಗಳಿಸುವುದಕ್ಕಿಂತ ಸಮರ್ಪಣಾ ಭಾವ, ಸಂವಹನ ಕೌಶಲ್ಯ ಹಾಗೂ ಕರುಣೆ ಅತ್ಯಂತ ಅಗತ್ಯ. ಶೇ. 99ರಷ್ಟು ಅಹಿತಕರ ಘಟನೆಗಳಿಗೆ ರೋಗಿಗಳೊಂದಿಗೆ ಸರಿಯಾದ ಸಂವಹನ ಕೊರತೆಯೇ ಕಾರಣವಾಗಿದ್ದು, ವಿದ್ಯಾರ್ಥಿಗಳು ತಾಳ್ಮೆಯಿಂದ ರೋಗಿಗಳ ಮಾತು ಆಲಿಸಬೇಕು ಎಂದು ಜೆಎಸ್‌ಎಸ್ ಅಕಾಡೆಮಿ ಕುಲಪತಿ ಡಾ. ಎಚ್. ಬಸವನಗೌಡಪ್ಪ ತಿಳಿಸಿದ್ದಾರೆ.

ಸಿದ್ಧಿವಿನಾಯಕ ಸೇವಾ ಸಮಿತಿಯ 50ನೇ ವರ್ಷದ ಗಣಪತಿ ಪೂಜೆ; ಮುತ್ತೈದೆಯರಿಗೆ ಬಾಗಿನ ನೀಡಿ ಗೌರವ

ಸಿದ್ಧಿವಿನಾಯಕ ಸೇವಾ ಸಮಿತಿಯ 50ನೇ ವರ್ಷದ ಗಣಪತಿ ಪೂಜೆ

Tumkur News: ತುಮಕೂರು ನಗರದಲ್ಲಿ ಸಿದ್ಧಿವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಿರುವ 50ನೇ ವರ್ಷದ ಗಣಪತಿ ಪೂಜಾ ಮಹೋತ್ಸವದಲ್ಲಿ, ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ ಹಾಲಪ್ಪ, ಮುತ್ತೈದೆಯರಿಗೆ ಬಾಗಿನ ನೀಡಿ ಗೌರವಿಸಿದರು. ಈ ಕುರಿತ ವಿವರ ಇಲ್ಲಿದೆ.

ಮದ್ಯವರ್ಜನ ಶಿಬಿರದಿಂದ ನೊಂದವರ ಸಂಸಾರದಲ್ಲಿ ನೆಮ್ಮದಿಯ ಬೆಳಕು: ಶ್ರದ್ಧಾ ಅಮಿತ್

ಮದ್ಯವರ್ಜನ ಶಿಬಿರದಿಂದ ನೊಂದವರ ಸಂಸಾರದಲ್ಲಿ ನೆಮ್ಮದಿಯ ಬೆಳಕು

Tumkur News: ವ್ಯಸನ ಮುಕ್ತರಾದ ವ್ಯಕ್ತಿಗಳು ಮುಂದೆ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡು, ಆರ್ಥಿಕ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಟ್ರಸ್ಟ್ ವತಿಯಿಂದ ನಿರಂತರ ಮಾರ್ಗದರ್ಶನ ನೀಡಲಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ನ ಟ್ರಸ್ಟಿ, ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಸಂಸ್ಥೆಯ (ಕ್ಷೇಮವನ) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾ ಅಮಿತ್ ತಿಳಿಸಿದ್ದಾರೆ.

ಎಸ್‌ಐಆರ್‌ ವಿರೋಧಿಸಿ ತುಮಕೂರಿನಲ್ಲಿ ಸೆ. 28ರಂದು ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ಎಸ್‌ಐಆರ್‌ ವಿರೋಧಿಸಿ ತುಮಕೂರಿನಲ್ಲಿ ಸೆ. 28ಕ್ಕೆ ಕಾಂಗ್ರೆಸ್‌ ಪ್ರತಿಭಟನೆ

Tumkur News: ಬಿಜೆಪಿಯನ್ನು ಅಧಿಕಾರಕ್ಕೆ ತರಲು ಚುನಾವಣಾ ಆಯೋಗವು ಎಸ್.ಐ.ಆರ್. ಪ್ರಕ್ರಿಯೆ ಮೂಲಕ ಬಿಜೆಪಿಯೇತರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಅಳಿಸುತ್ತಿದೆ. ಬಬಲೇಶ್ವರ, ಬೆಳಗಾವಿ ಮತ್ತು ಧಾರವಾಡ ದಕ್ಷಿಣದಲ್ಲಿ ಇದರ ಅಕ್ರಮಗಳು ದಾಖಲೆಗಳ ಮೂಲಕ ಬಹಿರಂಗಗೊಂಡಿವೆ ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಆರೋಪಿಸಿದ್ದಾರೆ.

ಸರ್ಕಾರಿ ಶಾಲೆಯಲ್ಲಿ ಕಲಿತದ್ದು ನನ್ನ ಪಾಲಿಗೆ ಎಂದಿಗೂ ಹೆಮ್ಮೆಯ ವಿಷಯ: ನ್ಯಾಯಾಧೀಶ ಜಯಂತ್ ಕುಮಾರ್

ಸರ್ಕಾರಿ ಶಾಲೆಯಲ್ಲಿ ಕಲಿತದ್ದು ಹೆಮ್ಮೆಯ ವಿಷಯ: ನ್ಯಾ. ಜಯಂತ್ ಕುಮಾರ್

Tumkur News: ವೃಕ್ಷಗಳ ಮಾರಣಹೋಮದಿಂದ ಮಳೆ ಕಡಿಮೆಯಾಗಿ ಕುಡಿಯುವ ನೀರಿಗೂ ಅಭಾವ ಎದುರಾಗಿದೆ. ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ನೆಟ್ಟಿರುವ ಸಸಿಗಳನ್ನು ದೈನಂದಿನ ಪಾಲನೆ ಮಾಡುವ ಮೂಲಕ ಬೆಳೆಸಬೇಕು ಎಂದು ತುಮಕೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ. ಜಯಂತ್ ಕುಮಾರ್ ಕರೆ ನೀಡಿದ್ದಾರೆ.

ಕೋಡಿಯಾಲ ಹೊಸಪೇಟೆ ಯುವಕನ ಕೊಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಕೋಡಿಯಾಲ ಹೊಸಪೇಟೆ ಯುವಕನ ಕೊಲೆ ಪ್ರಕರಣ; ಇಬ್ಬರ ಬಂಧನ

Haveri News: ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕೋಡಿಯಾಲ ಹೊಸಪೇಟೆಯಲ್ಲಿ ನಡೆದಿದ್ದ ಯುವಕ ಪುನೀತಕುಮಾರ ಶಿಗ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಎಸ್ಪಿ ಯಶೋಧಾ ವಂಟಗೋಡಿ ಅವರು ತಿಳಿಸಿದ್ದಾರೆ.

ತಿಪಟೂರಿನಲ್ಲಿ ರೋಟರಿ ಗುಲ್ಮೊಹರ್‌ ಸಂಸ್ಥೆಯಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಾದರಿ ಪ್ರಶ್ನೆ ಪತ್ರಿಕೆ ವಿತರಣೆ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಮಾದರಿ ಪ್ರಶ್ನೆಪತ್ರಿಕೆ ವಿತರಣೆ

Tiptur News: ಹತ್ತನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರೋಟರಿ ಗುಲ್ಮೊಹರ್ ಬೆಂಗಳೂರು ಸಂಸ್ಥೆಯ ವತಿಯಿಂದ ಉಚಿತವಾಗಿ ಮಾದರಿ ಪ್ರಶ್ನೆ ಪತ್ರಿಕೆಯ ವಿತರಣೆ ಕಾರ್ಯಕ್ರಮ ತಿಪಟೂರು ತಾಲೂಕಿನ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಜರುಗಿತು.

ಕಿಡಿಗೇಡಿಗಳ ಅಟ್ಟಹಾಸ; ಹೊಳವನಹಳ್ಳಿ ಕರ್ನಾಟಕ ಪಬ್ಲಿಕ್ ಶಾಲೆಯ ಕಿಟಕಿ ಗಾಜುಗಳು ಪುಡಿಪುಡಿ!

ಕಿಡಿಗೇಡಿಗಳ ಅಟ್ಟಹಾಸ; ಹೊಳವನಹಳ್ಳಿ ಸರ್ಕಾರಿ ಶಾಲೆ ಕಿಟಕಿ ಗಾಜು ಪುಡಿಪುಡಿ

Koratagere News: ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿ ಕೇಂದ್ರದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯ ಕೊಠಡಿಯ ಕಿಟಕಿ ಗ್ಲಾಸ್‌ಗಳಿಗೆ ಯಾರೋ ದುಷ್ಕರ್ಮಿಗಳು ತಡರಾತ್ರಿ ಕಲ್ಲು ತೂರಾಟ ಮಾಡಿದ್ದು, ನಾಲ್ಕು ಸಿಸಿ ಕ್ಯಾಮೆರಾಗಳು ಹಾಗೂ ಕೊಠಡಿಯ ಕಿಟಕಿಯ ಗಾಜುಗಳು ಪುಡಿಪುಡಿಯಾಗಿರುವ ಘಟನೆ ಜರುಗಿದೆ.

ಅಹಿಂದ ಸಮುದಾಯದಲ್ಲಿ ಒಗ್ಗಟ್ಟಿನ ಕೊರತೆ: ಕಾಂಗ್ರೆಸ್ ಮುಖಂಡ ಎಸ್.ಟಿ. ಶ್ರೀನಿವಾಸ್

ಅಹಿಂದ ಸಮುದಾಯದಲ್ಲಿ ಒಗ್ಗಟ್ಟಿನ ಕೊರತೆ: ಎಸ್.ಟಿ. ಶ್ರೀನಿವಾಸ್

Tumkur News: ಇತ್ತೀಚಿನ ದಿನಗಳಲ್ಲಿ ದಲಿತ ಸಮುದಾಯದಲ್ಲಿ ಎಡ ಮತ್ತು ಬಲ ಪಂಗಡಗಳ ನಡುವಿನ ತಿಕ್ಕಾಟ ತೀವ್ರಗೊಳ್ಳುತ್ತಿರುವುದು ಶೋಚನೀಯ. ಇದರೊಂದಿಗೆ ಹಿಂದುಳಿದ ವರ್ಗಗಳಲ್ಲೂ ಒಗ್ಗಟ್ಟಿನ ಕೊರತೆ ಎದ್ದು ಕಾಣುತ್ತಿದ್ದು, ಸಣ್ಣಪುಟ್ಟ ವಿಚಾರಗಳಿಗೆ ಕಿತ್ತಾಡಿದರೆ ಸಾಮಾಜಿಕ ಹಾಗೂ ರಾಜಕೀಯ ಹಕ್ಕುಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಎಸ್.ಟಿ. ಶ್ರೀನಿವಾಸ್ ಎಚ್ಚರಿಸಿದ್ದಾರೆ.

ಕುಪ್ಪೂರು ಸಹಕಾರ ಸಂಘಕ್ಕೆ ಸುವರ್ಣ ಸಂಭ್ರಮ; ಸೆ.25ರಂದು ವಾರ್ಷಿಕ ಮಹಾಸಭೆ

ಕುಪ್ಪೂರು ಸಹಕಾರ ಸಂಘಕ್ಕೆ ಸುವರ್ಣ ಸಂಭ್ರಮ; ಸೆ.25ಕ್ಕೆ ವಾರ್ಷಿಕ ಮಹಾಸಭೆ

Chikkanayakanahalli News: 1976ರಲ್ಲಿ ಆರಂಭಗೊಂಡ ಚಿಕ್ಕನಾಯಕನಹಳ್ಳಿಯ ಕುಪ್ಪೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದೆ. ಸಂಘದ 50ನೇ ವರ್ಷದ ವಾರ್ಷಿಕ ಮಹಾಸಭೆ ಸೆ.25ರಂದು ನಡೆಯಲಿದೆ. ಈ ಕುರಿತ ವಿವರ ಇಲ್ಲಿದೆ.

ವೈ.ಎನ್.ಹೊಸಕೋಟೆಯಲ್ಲಿ ಮಳೆಗಾಗಿ ಮುಸ್ಲಿಂ ಸಮುದಾಯದವರಿಂದ ಸಾಮೂಹಿಕ ಪ್ರಾರ್ಥನೆ

ಮಳೆಗಾಗಿ ಮುಸ್ಲಿಂ ಸಮುದಾಯದವರಿಂದ ಸಾಮೂಹಿಕ ಪ್ರಾರ್ಥನೆ

Pavagada News: ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆ ಗ್ರಾಮದಲ್ಲಿ ಶುಕ್ರವಾರ ಮಳೆಗಾಗಿ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ವೈ.ಎನ್. ಹೊಸಕೋಟೆ ಗ್ರಾಮದ ಮುಸ್ಲಿಂ ಸಮುದಾಯದವರು ಶುಕ್ರವಾರದ ಸಾಮೂಹಿಕ ನಮಾಜ್‌ ಪೂರ್ಣಗೊಳಿಸಿದ ಬಳಿಕ ಈದ್ಗಾ ಮೈದಾನದಲ್ಲಿ ಒಂದೆಡೆ ಸೇರಿ ಮಳೆಗಾಗಿ ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.

ವಿಶ್ವಕರ್ಮ ಸಮುದಾಯದವರು ವೃತ್ತಿಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಿ: ಶಾಸಕ ಜಿ.ಬಿ. ಜ್ಯೋತಿಗಣೇಶ್

ವಿಶ್ವಕರ್ಮ ಸಮುದಾಯದವರು ವೃತ್ತಿಯಲ್ಲಿ ತಂತ್ರಜ್ಞಾನ ಬಳಸಿ: ಜ್ಯೋತಿಗಣೇಶ್

Tumkur News: ವಿಶ್ವಕರ್ಮ ಜಯಂತಿಯ ದಿನವೇ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವಿರುವುದು ವಿಶೇಷ. ಕರಕುಶಲ ಕರ್ಮಿಗಳಿಗೆ ಪ್ರೋತ್ಸಾಹ ನೀಡಲು ಪ್ರಧಾನಿ ಮೋದಿ ಅವರು ವಿಶೇಷ ‘ವಿಶ್ವಕರ್ಮ ಯೋಜನೆʼಯನ್ನು ಜಾರಿಗೆ ತಂದಿದ್ದು, ಸಮುದಾಯದವರು ಇದರ ಪ್ರಯೋಜನ ಪಡೆಯಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ತಿಳಿಸಿದ್ದಾರೆ.

ಪ್ರಗತಿ ಪಥದಲ್ಲಿ ತುಮಕೂರು ಪಟ್ಟಣ ಕ್ರೆಡಿಟ್ ಸೊಸೈಟಿ: ಪಿ.ಆರ್. ದೇವರಾಜು

ಪ್ರಗತಿ ಪಥದಲ್ಲಿ ತುಮಕೂರು ಪಟ್ಟಣ ಕ್ರೆಡಿಟ್ ಸೊಸೈಟಿ

Tumkur News: ತುಮಕೂರು ಪಟ್ಟಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 2026-27ನೇ ಸಾಲಿಗೆ ಸೊಸೈಟಿ 1000 ಲಕ್ಷ ರೂ. ಠೇವಣಿ ಸಂಗ್ರಹಿಸುವ ಗುರಿ ಹೊಂದಿದ್ದು, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಗ್ರಾಹಕರಿಗೆ ತ್ವರಿತ ಸೇವೆ ನೀಡುವ ಉದ್ದೇಶದಿಂದ ಸಂಘದ ವ್ಯವಹಾರವನ್ನು ಕಂಪ್ಯೂಟರೀಕರಣಗೊಳಿಸಲಾಗಿದೆ ಸೊಸೈಟಿಯ ಅಧ್ಯಕ್ಷ ಪಿ.ಆರ್. ದೇವರಾಜು ತಿಳಿಸಿದ್ದಾರೆ.

ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ಮಂಗಳೂರು ಕಾರಾಗೃಹದ ಬಳಿ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ

Priyank Kharge: ಕಾರಾಗೃಹದ ಭದ್ರತೆ ಅತ್ಯಂತ ಮುಖ್ಯವಾಗಿರುವಂತೆಯೇ, ಕಾರಾಗೃಹದ ಸುತ್ತಮುತ್ತ ವಾಸಿಸುವ ಸಾರ್ವಜನಿಕರಿಗೆ ಮತ್ತು ಇತರ ಬಳಕೆದಾರರಿಗೆ ಮೊಬೈಲ್ ಸಂಪರ್ಕ ಸೇವೆಯಲ್ಲಿ ಅನಗತ್ಯ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳುವುದೂ ಅಗತ್ಯ. ಈ ಎರಡೂ ಅಗತ್ಯಗಳ ನಡುವೆ ಸಮತೋಲನ ಸಾಧಿಸುವ ನಿಟ್ಟಿನಲ್ಲಿ ತಾಂತ್ರಿಕ ಪರಿಹಾರಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಹಾವೇರಿಯ ಸೈಬರ್ ಠಾಣೆಯಲ್ಲಿ ಭಾವೈಕ್ಯತೆಯ ಗಣೇಶ ಚತುರ್ಥಿ; ಗಣಪತಿ ಪ್ರತಿಷ್ಠಾಪಿಸಿ, ಪೂಜೆಯಲ್ಲಿ ಪಾಲ್ಗೊಂಡ ಡಿಎಸ್‌ಪಿ ಸಮೀವುಲ್ಲಾ

ಹಾವೇರಿಯ ಸೈಬರ್ ಠಾಣೆಯಲ್ಲಿ ಭಾವೈಕ್ಯತೆಯ ಗಣಪತಿ

Haveri News: ಹಾವೇರಿ ನಗರದ ಹಳೆ ಕೋರ್ಟ್ ಆವರಣದಲ್ಲಿರುವ ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಡಿಎಸ್‌ಪಿ ಕೆ. ಸಮೀವುಲ್ಲಾ, ಠಾಣೆಯಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿ, ತಾವೇ ಖುದ್ದಾಗಿ ಪೂಜಾ ಕಾರ್ಯದಲ್ಲಿ ಭಾಗವಹಿಸುವ ಮೂಲಕ ಸೌಹಾರ್ದತೆಯ ಸಂದೇಶ ಮೆರೆದಿದ್ದಾರೆ. ಗುರುವಾರ ವಿಶೇಷ ಸತ್ಯನಾರಾಯಣ ಪೂಜೆ ಹಮ್ಮಿಕೊಂಡು ಕುಟುಂಬ ಸಮೇತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಪೂಜಾ ಕಾರ್ಯ ನೆರವೇರಿಸಿದರು.

ಸಾಲದ ಶೂಲಕ್ಕೆ ಮತ್ತೊಂದು ಬಲಿ; ಬರದಿಂದ ಕೈಕೊಟ್ಟ ಬೆಳೆ: ಹಾವೇರಿಯಲ್ಲಿ ರೈತ ಆತ್ಮಹತ್ಯೆ

ಹಾವೇರಿಯಲ್ಲಿ ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Haveri News: ಸಾಲ ಬಾಧೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದಲ್ಲಿ ನಡೆದಿದೆ. ಒಂದು ವಾರದ ಹಿಂದೆ ಸಾಲ ಬಾಧೆಯಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡು ಮನೆಗೆ ಮರಳಿದ್ದರು. ಆದರೆ ಗುರುವಾರ ಮಧ್ಯಾಹ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ  ಸಂಸ್ಮರಣೋತ್ಸವ; ಪ್ರಶಸ್ತಿ ಪ್ರದಾನ, ಅಭಿನಂದನಾ ಸಮಾರಂಭ

ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಸಂಸ್ಮರಣೋತ್ಸವ

Chikkaballapur News: ಪರಮಪೂಜ್ಯ ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಸಂಸ್ಮರಣೋತ್ಸವದ ಅಂಗವಾಗಿ ಚಿಕ್ಕಬಳ್ಳಾಪುರದ ಎಸ್.ಜೆ.ಸಿ.ಐ.ಟಿ. ಕಾಲೇಜು ಸಭಾಂಗಣದಲ್ಲಿ ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಸಾಧಕರಿಗೆ ಸನ್ಮಾನ, ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಸಮಾರಂಭ ಜರುಗಿತು.

Loading...