About Us Advertise with us Be a Reporter E-Paper

Breaking Newsದೇಶಪ್ರಚಲಿತ

ವೈದ್ಯರ ಮುಷ್ಕರ; ಖಾಸಗಿ ಆಸ್ಪತ್ರೆಗಳು ಬಂದ್!

ಬೆಂಗಳೂರು: ಕೇಂದ್ರ ಸರ್ಕಾರ  ಮಂಡನೆ ಮಾಡಲು ಮುಂದಾಗಿರುವ  ವೈದ್ಯಕೀಯ ಪರಿಷತ್ ತಿದ್ದುಪಡಿ ವಿಧೇಯಕವನ್ನು ವಿರೋಧಿಸಿಖಾಸಗಿ ವೈದ್ಯರು ಶನಿವಾರ ದೇಶದಾದ್ಯಂತ ಹೊರರೋಗಿ ಸೇವೆ (ಒಪಿಡಿ) ಬಹಿಷ್ಕರಿಸಿ ಮುಷ್ಕರ ನಡೆಸುತ್ತಿದ್ದಾರೆ. ಹಾಗಾಗಿ ಇಂದು ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ಲಭ್ಯವಿರುವುದಿಲ್ಲ.

ಖಾಸಗಿ ಆಸ್ಪತ್ರೆಗಳು ಮುಷ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದ್ದು ರೋಗಿಗಳಿಗೆ ಸೂಕ್ತ ಆರೋಗ್ಯ ಸೇವೆ ನೀಡಲು ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳಿಗೆ ಆದೇಶ ನೀಡಿದೆ.
ಕೇಂದ್ರ ಸರ್ಕಾರವು ಭಾರತೀಯ ವೈದ್ಯಕೀಯ ಪರಿಷತ್ ಕಾಯ್ದೆಗೆ ಕೆಲ ತಿದ್ದುಪಡಿ ತರಲು 2016ರಲ್ಲಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿತ್ತು. ಈ ವೇಳೆ ಅವೈಜ್ಞಾನಿಕವಾಗಿ ತಿದ್ದುಪಡಿ ಮಾಡಲಾಗುತ್ತಿದ್ದು, ತಿದ್ದುಪಡಿಯಿಂದ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಮರೀಚಿಕೆಯಾಗಲಿದೆ ಎಂದು ವೈದ್ಯರ ಸಂಘ ಅರೋಪಿಸಿತ್ತು

ವೈದ್ಯಕೀಯ ಶಿಕ್ಷಣದಲ್ಲಿ ರಾಜ್ಯಗಳು ಅಧಿಕಾರ ಕಳೆದುಕೊಳ್ಳಲಿವೆ. ಹೀಗಾಗಿ ಮರುಪರಿಶೀಲಿಸುವಂತೆ ಭಾರತೀಯ ವೈದ್ಯಕೀಯ ಸಂಘ ಒತ್ತಾಯಿಸಿತ್ತು. ಆದರೂ, ಯಾವುದೇ ಪರಿಷ್ಕರಣೆ ಇಲ್ಲದೇ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ವಿಧೇಯಕ ಮಂಡನೆಗೆ ಸಿದ್ಧತೆ ನಡೆಸಿದೆ. ಹೀಗಾಗಿ ಐಎಂಎ ದೇಶದಾದ್ಯಂತ ಇಂದು ಒಂದು ದಿನ ಹೊರ ರೋಗಿಗಳ ಸೇವೆ ಬಂದ್ ಮಾಡುವಂತೆ ಕರೆ ನೀಡಿದೆ.

Tags

Related Articles

Leave a Reply

Your email address will not be published. Required fields are marked *

Language
Close