15 ದಿನಗಳ ಒಳಗೆ ಟಿಸಿ ನೀಡಲೇಬೇಕು: ಶಿಕ್ಷಣ ಇಲಾಖೆ ಆದೇಶ
ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಗಳಿಗೆ ಹೋಗಲು ಬಯಸುವ ವಿದ್ಯಾರ್ಥಿಗಳಿಗೆ 15 ದಿನಗಳೊಳಗೆ ವರ್ಗಾವಣೆ ಪ್ರಮಾಣ ಪತ್ರ ನೀಡಲು ಶಿಕ್ಷಣ ಇಲಾಖೆ ಆದೇಶ ನೀಡಿದೆ. ಒಂದು ವೇಳೆ ಇದಕ್ಕೆ ತಪ್ಪಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿರ್ದೇಶನದ ಮೇರೆಗೆ ಶಿಕ್ಷಣ ಇಲಾಖೆಯು ಈ ಆದೇಶವನ್ನು ಹೊರಡಿಸಿದೆ.