ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

2nd PUC Exam-2: ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

Second puc exam 2 registration: ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸಲು ಈ ಮೊದಲು ಏಪ್ರಿಲ್ 17 ಕೊನೆಯ ದಿನವಾಗಿತ್ತು. ಆದರೆ, ಇದೀಗ ಅಭ್ಯರ್ಥಿಗಳ ಅನುಕೂಲವಾಗಲು ಅರ್ಜಿ ಸಲ್ಲಿಕೆ ಅವಧಿಯನ್ನು ಮತ್ತೊಂದು ದಿನವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವಿಸ್ತರಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಸಾಂದರ್ಭಿಕ ಚಿತ್ರ -

Prabhakara R
Prabhakara R Apr 16, 2026 10:26 PM

ಬೆಂಗಳೂರು: 2026ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ (2nd PUC Exam-2) ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಗುಡ್‌ನ್ಯೂಸ್‌ ನೀಡಿದೆ. ಪುನಾವರ್ತಿತ ಅಭ್ಯರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಏ.18ರವರೆಗೆ ವಿಸ್ತರಿಸಲಾಗಿದೆ.

ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪರಿಷ್ಕೃತ ಸುತ್ತೋಲೆ ಹೊರಡಿಸಿದೆ. 2026ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-2 ಕ್ಕೆ ಪುನಾವರ್ತಿತ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏ.9ರಿಂದ 17 ರವರೆಗೆ ಆನ್‌ಲೈನ್ ಮೂಲಕ ಅಂತರ್ಜಾಲದ ಲಿಂಕ್: https://dpue-exam.karnataka.gov.in/testrr22_01dpue/Login ಮೂಲಕ ಆನ್‌ಲೈನ್ ಹಾಗೂ ಆಫ್‌ಲೈನ್‌ ಮುಖಾಂತರ ಸಂಬಂಧಪಟ್ಟ ಕಾಲೇಜುಗಳಲ್ಲಿ ಭೌತಿಕವಾಗಿಯೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.

CBSE 10th result: ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ, ಹೀಗೆ ನೋಡಿ

ಈ ಸಂಬಂಧ ವಿದ್ಯಾರ್ಥಿ, ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ವಿಸ್ತರಿಸುವಂತೆ ಇ-ಮೇಲ್ ಮೂಲಕ ಹಾಗೂ ದೂರವಾಣಿ, ಸಹಾಯವಾಣಿ ಮೂಲಕ ಮನವಿಗಳು ಸಲ್ಲಿಕೆಯಾಗಿವೆ. ಈ ಹಿನ್ನೆಲೆಯಲ್ಲಿ ಸದರಿಯವರ ಮನವಿಗಳನ್ನು ಪರಿಗಣಿಸಿ, 2026ರ ದ್ವಿತೀಯ ಪಿಯುಸಿ ಪರೀಕ್ಷೆ-2 ಕ್ಕೆ ಪುನಾವರ್ತಿತ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳು ಆನ್‌ಲೈನ್/ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಅಂತಿಮ ದಿನಾಂಕವನ್ನು ಏ.18ರವರೆಗೆ ವಿಸ್ತರಿಸಲಾಗಿದೆ ಎಂದು ಪರೀಕ್ಷಾ ಮಂಡಳಿ ತಿಳಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-2 ವೇಳಾಪಟ್ಟಿ

30/04/2026- ಕನ್ನಡ, ಅರೇಬಿಕ್

02/05/2026- ಐಚ್ಛಿಕ ಕನ್ನಡ, ತರ್ಕಶಾಸ್ತ್ರ, ರಸಾಯನಿಕ ಶಾಸ್ತ್ರ

04/05/2026- ಇಂಗ್ಲಿಷ್

05/05/2026- ವ್ಯವಹಾರ ಅಧ್ಯಯನ, ಔತಶಾಸ್ತ್ರ, ಶಿಕ್ಷಣ ಶಾಸ್ತ್ರ.

06/05/2026- ಅರ್ಥಶಾಸ್ತ್ರ, ಜೀವಶಾಸ್ತ್ರ

07/05/2026- ಇತಿಹಾಸ, ಗಣಿತ, ಗೃಹವಿಜ್ಞಾನ

08/05/2026- ರಾಜ್ಯಶಾಸ್ತ್ರ, ವಿದ್ಯುನ್ಮಾನಶಾಸ್ತ್ರ. ಗಣಕ ವಿಜ್ಞಾನ

09/05/2026- ಹಿಂದಿ

11/05/2026- ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ

12/05/2026- ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೂಗರ್ಭ ಶಾಸ್ತ್ರ, ಮೂಲ ಗಣಿತ

13/05/2026- ತಮಿಳು, ತೆಲುಗು, ಮಲಯಾಳಂ,ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

13/05/2026- ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್‌ ಮತ್ತು ಯಂತ್ರಾಂಶ, ಉಡುಪುಗಳ ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು, ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೋಮೊಬೈಲ್‌, ಆರೋಗ್ಯ ರಕ್ಷಣೆ, ಬ್ಯೂಟಿ ಅಂಡ್‌ ವೆಲ್‌ನೆಸ್‌

(ಪರೀಕ್ಷೆ-2 ಬಹುತೇಕ ವಿಷಯಗಳ ಪರೀಕ್ಷೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿವೆ. ಕೆಲವು ವೃತ್ತಿಪರ ಹಾಗೂ ತಾಂತ್ರಿಕ ವಿಷಯಗಳ ಪರೀಕ್ಷೆಗಳು ಮಧ್ಯಾಹ್ನದ ಅವಧಿಯಲ್ಲಿ ನಿಗದಿಯಾಗಿವೆ)