KCET Results 2026: ನಾಳೆ ಮಧ್ಯಾಹ್ನ 2 ಗಂಟೆಗೆ ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ?
ಏ.23 ಮತ್ತು ಏ.24ರಂದು ರಾಜ್ಯದ 745 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಸಿಇಟಿ ಪರೀಕ್ಷೆಗೆ 3.1 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ರಾಜ್ಯದಲ್ಲಿ ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಈ ಪರೀಕ್ಷೆ ಬಹಳ ಮಹತ್ವದ್ದಾಗಿದ್ದು, ಇದರಲ್ಲಿ ಪಡೆದ ರ‍್ಯಾಂಕ್ ಆಧರಿಸಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು: ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (KCET Results 2026) ಫಲಿತಾಂಶವನ್ನು ಜೂನ್ 6ರಂದು (ಶನಿವಾರ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಲಿದೆ. ವೈದ್ಯಕೀಯ ಶಿಕ್ಷಣ ಸಚಿವರೂ ಅದ ಕೆಇಎ ಸಹ ಅಧ್ಯಕ್ಷ ಡಾ.ಶರಣ ಪ್ರಕಾಶ ಪಾಟೀಲ್ ಅವರು ನಾಳೆ ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ, ಫಲಿತಾಂಶದ ವಿವರಗಳನ್ನು ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಮಧ್ಯಾಹ್ನ 2 ಗಂಟೆ ನಂತರ ಕೆಇಎ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪಡೆಯಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಏ.23 ಮತ್ತು ಏ.24ರಂದು ರಾಜ್ಯದ 745 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಸಿಇಟಿ ಪರೀಕ್ಷೆಗೆ 3.1 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ರಾಜ್ಯದಲ್ಲಿ ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಈ ಪರೀಕ್ಷೆ ಬಹಳ ಮಹತ್ವದ್ದಾಗಿದ್ದು, ಎಂಜಿನಿಯರಿಂಗ್, ಫಾರ್ಮಸಿ, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟನರಿ ಸೈನ್ಸ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ಬರೆಯಬೇಕಿದೆ. ವಿದ್ಯಾರ್ಥಿಗಳು ಇಲ್ಲಿ ಪಡೆದ ರ‍್ಯಾಂಕ್ ಆಧರಿಸಿ ಕಾಲೇಜುಗಳ ಆಯ್ಕೆಗೆ ಅವಕಾಶ ಸಿಗಲಿದೆ.
ಸಿಇಟಿ ಫಲಿತಾಂಶ ನೋಡುವ ವಿಧಾನ
- ಅಧಿಕೃತ KEA ವೆಬ್‌ಸೈಟ್‌ಗೆ ಭೇಟಿ ನೀಡಿ. https://cetonline.karnataka.gov.in/kea/
- ಕರ್ನಾಟಕ UGCET 2026 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ.
- ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕದಂತಹ ಅಗತ್ಯ ಮಾಹಿತಿ ನಮೂದಿಸಿ,
- ನಂತರ ಪರದೆ ಮೇಲೆ ಫಲಿತಾಂಶ ಕಾಣುತ್ತದೆ
- ಕಾಲೇಜು ಪ್ರವೇಶ ಮತ್ತು ಕೌನ್ಸೆಲಿಂಗ್ ಪ್ರಕ್ರಿಯೆಗಳಿಗಾಗಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.
#UGCET-2026: ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಜೂನ್ 6ರಂದು (ಶನಿವಾರ) #KEA ಪ್ರಕಟಿಸಲಿದೆ.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) June 5, 2026
ವೈದ್ಯಕೀಯ ಶಿಕ್ಷಣ ಸಚಿವರೂ ಅದ #KEA ಸಹ ಅಧ್ಯಕ್ಷ ಡಾ.ಶರಣ ಪ್ರಕಾಶ ಪಾಟೀಲ ಅವರು ಅಂದು ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಟಿ ನಡೆಸಿ, ಫಲಿತಾಂಶದ ವಿವರಗಳನ್ನು ಪ್ರಕಟಿಸಲಿದ್ದಾರೆ.
ಸಾರ್ವಜನಿಕರು, ಮಧ್ಯಾಹ್ನ 2 ಗಂಟೆ ನಂತರ ಈ…
ಸಿಇಟಿ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ: https://keaonline.karnataka.gov.in/ugcet_2026_results/ ಅಥವಾ https://keaonline.karnataka.gov.in/ugcet_2026_result/