ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

2nd PUC Exam-2: ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಏಪ್ರಿಲ್ 25 ರಿಂದ ಮೇ 08 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ಪರೀಕ್ಷೆ ನಡೆಯಲಿದೆ. ಯಾವ ದಿನ ಯಾವ ವಿಷಯದ ಪರೀಕ್ಷೆ ನಡೆಯಲಿದೆ ಎಂಬ ಕುರಿತ ಮಾಹಿತಿ ಇಲ್ಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಸಾಂದರ್ಭಿಕ ಚಿತ್ರ -

Prabhakara R
Prabhakara R Mar 17, 2026 10:07 PM

ಬೆಂಗಳೂರು: 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಬಿಡುಗಡೆ ಮಾಡಿದೆ. ಏಪ್ರಿಲ್ 25 ರಿಂದ ಮೇ 08 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ಪರೀಕ್ಷೆ ನಡೆಯಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-2 ವೇಳಾಪಟ್ಟಿ

  • ಏಪ್ರಿಲ್‌ 25‌, ಶನಿವಾರ: ಕನ್ನಡ, ಅರೇಬಿಕ್
  • ಏಪ್ರಿಲ್‌ 27, ಸೋಮವಾರ: ಐಚ್ಛಿಕ ಕನ್ನಡ, ತರ್ಕಶಾಸ್ತ್ರ, ಲೆಕ್ಕಶಾಸ್ತ್ರ, ರಸಾಯನಶಾಸ್ತ್ರ
  • ಏಪ್ರಿಲ್‌ 28, ಮಂಗಳವಾರ: ಇಂಗ್ಲಿಷ್
  • ಏಪ್ರಿಲ್‌ 29, ಬುಧವಾರ: ವ್ಯವಹಾರ ಅಧ್ಯಯನ, ಭೌತಶಾಸ್ತ್ರ, ಶಿಕ್ಷಣಶಾಸ್ತ್ರ
  • ಏಪ್ರಿಲ್‌ 30, ಗುರುವಾರ: ಅರ್ಥಶಾಸ್ತ್ರ, ಜೀವಶಾಸ್ತ್ರ
  • ಮೇ 2, ಶನಿವಾರ: ಇತಿಹಾಸ, ಗಣಿತ, ಗೃಹವಿಜ್ಞಾನ
  • ಮೇ 4, ಸೋಮವಾರ: ರಾಜ್ಯಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
  • ಮೇ 5, ಮಂಗಳವಾರ: ಹಿಂದಿ
  • ಮೇ 6, ಬುಧವಾರ: ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ
  • ಮೇ 7, ಗುರುವಾರ: ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೂಗರ್ಭ ಶಾಸ್ತ್ರ, ಮೂಲ ಗಣಿತ
  • ಮೇ 8, ಶುಕ್ರವಾರ: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

(ಈ ಮೇಲ್ಕಂಡ ವಿಷಯಗಳ ಪರೀಕ್ಷೆ ಸಮಯ: ಬೆಳಗ್ಗೆ 10ರಿಂದ 1 ಗಂಟೆವರೆಗೆ)

  • ಮೇ 8, ಶುಕ್ರವಾರ: ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್‌ ಮತ್ತು ಯಂತ್ರಾಂಶ, ಉಡುಪುಗಳ ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು, ಮಾಹಿತಿ ತಂತ್ರಜ್ಞಾನ, ರೀಟೈಲ್‌, ಆಟೋಮೊಬೈಲ್‌, ಆರೋಗ್ಯ ರಕ್ಷಣೆ, ಬ್ಯೂಟಿ ಅಂಡ್‌ ವೆಲ್‌ನೆಸ್‌ (ಮಧ್ಯಾಹ್ನ 2ರಿಂದ ಸಂಜೆ 4ಗಂಟೆ)

ಬಹುತೇಕ ವಿಷಯಗಳ ಪರೀಕ್ಷೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿವೆ. ಕೆಲವು ವೃತ್ತಿಪರ ಹಾಗೂ ತಾಂತ್ರಿಕ ವಿಷಯಗಳ ಪರೀಕ್ಷೆಗಳು ಮಧ್ಯಾಹ್ನದ ಅವಧಿಯಲ್ಲಿ ನಿಗದಿಯಾಗಿವೆ.

Secon puc Exam 2

Secon puc Exam 2 new