ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಚುನಾವಣೆ

DK Shivakumar: ಶೃಂಗೇರಿ ಮರು ಎಣಿಕೆ ಫಲಿತಾಂಶ ಇಡೀ ದೇಶಕ್ಕೇ ಮಾರಕ: ಡಿ.ಕೆ. ಶಿವಕುಮಾರ್

ಶೃಂಗೇರಿ ಮರು ಎಣಿಕೆ ಫಲಿತಾಂಶ ಇಡೀ ದೇಶಕ್ಕೇ ಮಾರಕ: ಡಿ.ಕೆ. ಶಿವಕುಮಾರ್

DK Shivakumar: ಶೃಂಗೇರಿ ಮರು ಎಣಿಕೆ ಫಲಿತಾಂಶವು ಇಡೀ ದೇಶಕ್ಕೇ ಮಾರಕ. ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್‌ಗಳಿದ್ದಾರೆ ಎಂದು ನಾನು ಎಣಿಸಿರಲಿಲ್ಲ ಎಂದು ಆರೋಪಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಆದರೆ ಇಲ್ಲಿ ನಡೆದಿರುವುದು ಷಡ್ಯಂತ್ರ ಎಂದು ಹೇಳಿದ್ದಾರೆ.

Election results 2026: ಕರ್ನಾಟಕದಲ್ಲಿ ಗ್ಯಾರಂಟಿಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ: ಡಿಕೆಶಿ

DK Shivakumar: ರಾಜ್ಯದ ಉಪಚುನಾವಣೆ, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಕರ್ನಾಟಕ ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಬೇರೆ ರಾಜ್ಯಗಳ ಪೈಕಿ ಕೇರಳದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎನ್ನುವ ವಿಶ್ವಾಸವಿತ್ತು ಎಂದು ಅವರು ಹೇಳಿದ್ದಾರೆ.

ಅಸ್ಸಾಂನಲ್ಲಿ 100 ಸ್ಥಾನಗಳ ಗಡಿ ದಾಟಿದ ಎನ್‌ಡಿಎ ಮೈತ್ರಿಕೂಟ

ಅಸ್ಸಾಂನಲ್ಲಿ ಗೆಲುವಿನತ್ತ ಬಿಜೆಪಿ ದಾಪುಗಾಲು

ವಿಧಾನ ಸಭಾ ಚುನಾವಣೆ ಮತ ಎಣಿಕೆಯ ಆರಂಭದಿಂದಲೇ ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಆರಂಭದಿಂದಲೇ ಮುನ್ನಡೆ ಸಾಧಿಸಿದೆ. 100 ಸ್ಥಾನಗಳ ಗಡಿ ದಾಟಿದ್ದು, ಈವರೆಗೆ ಅತ್ಯುತ್ತಮ ಪ್ರದರ್ಶನವನ್ನು ಕೂಡ ನೀಡಿದೆ. ವಿರೋಧ ಪಕ್ಷಗಳು ಪ್ರಮುಖ ಕ್ಷೇತ್ರಗಳಲ್ಲಿ ವೇಗವನ್ನು ಕಾಯ್ದುಕೊಳ್ಳಲು ಹೆಣಗಾಡುತ್ತಿವೆ.

Election results 2026: ಮೋದಿ ಅವರ ನಾಯಕತ್ವಕ್ಕೆ ಶಕ್ತಿ ತುಂಬುವ ಫಲಿತಾಂಶ: ಬಿ.ವೈ.ವಿಜಯೇಂದ್ರ ವಿಶ್ಲೇಷಣೆ

ಮೋದಿ ನಾಯಕತ್ವಕ್ಕೆ ಶಕ್ತಿ ತುಂಬುವ ಫಲಿತಾಂಶ: ಬಿ.ವೈ.ವಿಜಯೇಂದ್ರ

ಪಶ್ಚಿಮ ಬಂಗಾಲದ ಗೆಲುವಿಗಾಗಿ ಅಲ್ಲಿನ ಕಾರ್ಯಕರ್ತರಿಗೆ ನಾವು ದೊಡ್ಡ ಸಲಾಂ ಹೇಳಬೇಕಿದೆ. ಅಲ್ಲಿ ಹಲವು ದಶಕಗಳಿಂದ ನಮ್ಮ ಕಾರ್ಯಕರ್ತರ ಮೇಲೆ ನಿರಂತರ ದಬ್ಬಾಳಿಕೆ ಆಗುತ್ತಿತ್ತು. ಇದೆಲ್ಲದಕ್ಕೂ ಇತಿಶ್ರೀ ಹಾಕುವ ಕೆಲಸವನ್ನು ನಮ್ಮ ಕಾರ್ಯಕರ್ತರು ಮಾಡಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

Davanagere South By-Election Results: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು

ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಗೆಲುವು

Karnataka Bypoll Results 2026: ದಾವಣಗೆರೆಯಲ್ಲಿ ಹಿರಿಯ ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪ ಚುನಾವಣೆ ನಡೆದಿತ್ತು. ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಪಕ್ಷದಲ್ಲಿ ಉಂಟಾದ ಭಿನ್ನಮತದ ನಡುವೆಯೂ ಕೈ ಅಭ್ಯರ್ಥಿ ಗೆದ್ದು ಬೀಗಿದ್ದಾರೆ.

Election Results 2026:ಮ್ಯಾಜಿಕ್ ಸಂಖ್ಯೆ ದಾಟಲು ವಿಫಲವಾದರೆ ಏನು ಮಾಡುತ್ತಾರೆ ನಟ ವಿಜಯ್?

ತಮಿಳುನಾಡಿನಲ್ಲಿ ಟಿವಿಕೆ- ಎಐಎಡಿಎಂಕೆ ಜೊತೆಯಾಗುವುದೇ?

ದೇಶದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಇದೀಗ ತಮಿಳುನಾಡು ವಿಧಾನ ಸಭಾ ಕ್ಷೇತ್ರವು ಸಾಕಷ್ಟು ಕುತೂಹಲವನ್ನು ಮೂಡಿಸಿದೆ. ಮತ ಎಣಿಕೆಯ ಆರಂಭದಿಂದ ಮುನ್ನಡೆಯಲ್ಲಿರುವ ನಟ ವಿಜಯ್ ಅವರ ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಒಂದು ವೇಳೆ ಮ್ಯಾಜಿಕ್ ಸಂಖ್ಯೆ ದಾಟಲು ಸಾಧ್ಯವಾಗದಿದ್ದರೆ ಏನು ಮಾಡಬಹುದು ಎನ್ನುವ ಕುತೂಹಲವನ್ನು ಉಂಟು ಮಾಡಿದೆ.

Bagalkot By-Election Results 2026: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಜಯಭೇರಿ

ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಜಯಭೇರಿ

Karnataka Bypoll Results: ಬಾಗಲಕೋಟೆಯಲ್ಲಿ ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್ ವೈ ಮೇಟಿ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿದೆ. ಕ್ಷೇತ್ರದಲ್ಲಿ ಎಚ್ ವೈ ಮೇಟಿ ಅವರ ಪುತ್ರ ಉಮೇಶ್‌ ಮೇಟಿ ಅವರಿಗೆ ಟಿಕೆಟ್‌ ನೀಡಲಾಗಿತ್ತು. ಇದೀಗ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

Karnataka By-Election Results 2026: ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು, ಬಾಗಲಕೋಟೆಯಲ್ಲಿ ಉಮೇಶ್‌ ಮೇಟಿ ಮುನ್ನಡೆ

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಮುನ್ನಡೆ

Karnataka Bypoll Results: ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಸ್ಪರ್ಧಿಸಿದ್ದರೆ, ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ ದಾಸಕರಿಯಪ್ಪ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಮರ್ಥ ಶಾಮನೂರು ಸ್ಪರ್ಧಿಸಿದ್ದಾರೆ. ಇವರ ರಾಜಕೀಯ ಭವಿಷ್ಯ ಇಂದು ಹೊರಬೀಳಲಿದೆ.

Election Results 2026: ಮಮತಾ ಬ್ಯಾನರ್ಜಿ, ಪಿಣರಾಯಿ ವಿಜಯನ್, ದಳಪತಿ ವಿಜಯ್ ದಾಖಲೆ ನಿರ್ಮಿಸುವರೇ?

ಬಂಗಾಳ, ತಮಿಳುನಾಡು, ಕೇರಳದಲ್ಲಿ ದಾಖಲೆ ಬರೆಯುವುದೇ ಈ ಚುನಾವಣೆ ?

ಪಂಚ ರಾಜ್ಯಗಳ ಚುನಾವಣೆಯಲ್ಲಿ ಈ ಬಾರಿ ಎಲ್ಲರ ಗಮನ ಸೆಳೆದಿರುವುದು ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳ. ಇದಕ್ಕೆ ಮುಖ್ಯ ಕಾರಣ ಈ ಚುನಾವಣೆಯು ಮಮತಾ ಬ್ಯಾನರ್ಜಿ, ಪಿಣರಾಯಿ ವಿಜಯನ್ ಮತ್ತು ದಳಪತಿ ವಿಜಯ್ ಅವರಿಗೆ ದಾಖಲೆಗಳ ಚುನಾವಣೆಯಾಗಲಿದೆ. ಅದರಲ್ಲೂ ಮುಖ್ಯವಾಗಿ ಮೊದಲ ಬಾರಿಗೆ ಹೊಸ ಪಕ್ಷ ಸ್ಥಾಪಿಸಿ ಚುನಾವಣೆ ಸ್ಪರ್ಧಿಸುತ್ತಿರುವ ವಿಜಯ್ ಅವರಿಗೆ ಇದು ಪ್ರಮುಖ ಸ್ಪರ್ದೆಯಾಗಲಿದೆ.

Elections 2026: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ, ತಮಿಳುನಾಡಿನಲ್ಲಿ ಎಡಿಎಂಕೆಗೆ ಪೈಪೋಟಿ ನೀಡುತ್ತಿರುವ ಟಿವಿಕೆ

ಪಂಚರಾಜ್ಯಗಳ ಮತ ಎಣಿಕೆ ಆರಂಭ: ಎಲ್ಲಿ, ಹೇಗಿದೆ ಪರಿಸ್ಥಿತಿ?

ಕೇರಳಂ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಪುದುಚೇರಿಯ ವಿಧಾನ ಸಭಾ ಚುನಾವಣಾ ಮತ ಎಣಿಕೆ ಕಾರ್ಯ ಸೋಮವಾರ ಬೆಳಗ್ಗೆ ಆರಂಭವಾಗಿದೆ. ಈವರೆಗಿನ ಲೆಕ್ಕಾಚಾರದ ಪ್ರಕಾರ ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆಯನ್ನು ಸಾಧಿಸಿದ್ದು, ತಮಿಳುನಾಡಿನಲ್ಲಿ ಎಡಿಎಂಕೆಗೆ ನಟ ವಿಜಯ್ ಅವರ ಪಕ್ಷ ಪ್ರಬಲ ಪೈಪೋಟಿಯನ್ನು ನೀಡುತ್ತಿದೆ. ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮುನ್ನಡೆಯಲ್ಲಿದೆ.

Karnataka Bypoll Results: ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆಯ ಮತ ಎಣಿಕೆ ನಾಳೆ; ಯಾರಿಗೆ ಒಲಿಯಲಿದೆ ಗೆಲುವು?

ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆಯ ಮತ ಎಣಿಕೆ ನಾಳೆ

ಬಾಗಲಕೋಟೆ ಮತ್ತು ದಾವಣಗೆರೆಯಲ್ಲಿ ಉಪಚುನಾವಣೆಯ ಮತ ಎಣಿಕೆಗೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಡಿದೆ. ಬೈ ಎಲೆಕ್ಷನ್‌ನಲ್ಲಿ ಯಾರಿಗೆ ಗೆಲುವು ಒಲಿಯಲಿದೆ ಎಂಬ ಕುತೂಹಲ ರಾಜ್ಯ ರಾಜಕೀಯ ವಲಯದಲ್ಲಿ ಮೂಡಿದೆ.

ಕ್ರೈಸ್ತ ಧರ್ಮ ಪ್ರಚಾರದ ಆರೋಪ; ಮೂವರು ಅಮೆರಿಕ ಪ್ರಜೆಗಳಿಗೆ 'ಭಾರತ ಬಿಟ್ಟು ತೊಲಗಿ' ನೋಟಿಸ್ ಜಾರಿ

ಧರ್ಮ ಪ್ರಚಾರ ಆರೋಪ: 3 ಅಮೆರಿಕನ್ನರಿಗೆ ಭಾರತ ಬಿಟ್ಟು ತೊಲಗಿ ನೋಟಿಸ್

ಪುಣೆಯಲ್ಲಿ ಪ್ರವಾಸಿ ವೀಸಾದಲ್ಲಿ ಬಂದಿದ್ದ ಮೂವರು ಅಮೆರಿಕ ಪ್ರಜೆಗಳು ಕ್ರೈಸ್ತ ಧರ್ಮ ಪ್ರಚಾರದಲ್ಲಿ ತೊಡಗಿಕೊಂಡ ಆರೋಪದ ಮೇಲೆ ಪೊಲೀಸರಿಂದ ‘ಭಾರತ ಬಿಟ್ಟು ತೊಲಗಿ’ ನೋಟಿಸ್ ಪಡೆದಿದ್ದಾರೆ. ಮೇ 10ರೊಳಗೆ ದೇಶ ತೊರೆಯುವಂತೆ ಸೂಚಿಸಲಾಗಿದೆ l

ಕೇರಳ ವಿಧಾನಸಭಾ ಚುನಾವಣೆ; ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ನೆಮೊಮ್‌ನಿಂದ ರಾಜೀವ್ ಚಂದ್ರಶೇಖರ್ ಕಣಕ್ಕೆ

ಕೇರಳ ಚುನಾವಣೆ: ಬಿಜೆಪಿ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Kerala polls: ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ವಿಧಾನಸಭೆಗಳಿಗೆ ಏಪ್ರಿಲ್ 9ರಿಂದ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, ಮೇ 4ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಲಿಸಿದೆ. ಇದೀಗ ಬಿಜೆಪಿ 47 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರಿದ್ದಾರೆ.

ಬಂಗಾಳದಲ್ಲಿ ವೇಗ ಪಡೆದುಕೊಂಡ ಎರಡನೇ ಹಂತದ SIR ಪ್ರಕ್ರಿಯೆ; ವೃದ್ಧರು, ದುರ್ಬಲರು, ವಿಶೇಷ ಚೇತನರ ಪರದಾಟ

ಪಶ್ಚಿಮ ಬಂಗಾಳದ SIR ಪ್ರಕ್ರಿಯೆಗೆ ಚುರುಕು

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಎರಡನೇ ಹಂತದ ಪ್ರಕ್ರಿಯೆ ಪ್ರಾರಂಭವಾಗಿದ್ದು, ಬ್ಲಾಕ್ ಕಚೇರಿಗಳಲ್ಲಿ ಜನಸಂದಣಿ ಹೆಚ್ಚಾಗಿದೆ. ವೃದ್ಧರು, ವಿಶೇಷಚೇತನರು ಹಾಗೂ ಸಾಮಾನ್ಯ ನಾಗರಿಕರು ತಮ್ಮ ಮತದಾನದ ಹಕ್ಕು ಉಳಿಸಿಕೊಳ್ಳಲು ದಿನನಿತ್ಯದ ಕೆಲಸವನ್ನು ಬಿಟ್ಟು, ದೂರದೂರಿನಿಂದ ಬಂದು ಸರತಿ ಸಾಲಿನಲ್ಲಿ ದಿನ ಕಳೆಯುತ್ತಿದ್ದಾರೆ.

ಲೋಕಸಭೆಯ ಅವಧಿಯನ್ನು ಬದಲಾಯಿಸುವ ಸಾಂವಿಧಾನಿಕ ಅಧಿಕಾರ ಸಂಸತ್ತಿಗಿದೆ; ಕಾನೂನು ಸಮಿತಿ ಅಭಿಪ್ರಾಯ

ಒಂದು ದೇಶ, ಒಂದು ಚುನಾವಣೆ ಬಗ್ಗೆ ಕಾನೂನು ಮಂಡಳಿ ಮಹತ್ವದ ಅಭಿಪ್ರಾಯ

ಒಂದು ದೇಶ ಒಂದು ಚುನಾವಣೆ ಬಗ್ಗೆ ಈಗಾಗಲೇ ದೇಶಾದ್ಯಂತ ಚರ್ಚೆಗಳು ನಡೆಯುತ್ತಿವೆ. ಇದೀಗ ಈ ಮಸೂದೆ ಸಂಸತ್ತಿನ ಜಂಟಿ ಸಮಿತಿಯ ಟೇಬಲ್‌ನಲ್ಲಿದ್ದು, ಇದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಕಾನೂನು ಮಂಡಳಿ ಮಹತ್ವದ ಅಭಿಪ್ರಾಯವೊಂದನ್ನು ಮುಂದಿಟ್ಟಿದೆ. ಅದೇನು ಎನ್ನುವ ವಿವರ ಇಲ್ಲಿದೆ.

Nitish Kumar: ಪ್ರತಿ ಮನೆಗೆ 125 ಯೂನಿಟ್ ಉಚಿತ ವಿದ್ಯುತ್ ಘೋಷಿಸಿದ ನಿತೀಶ್ ಕುಮಾರ್

ನಿತೀಶ್‌ ಕುಮಾರ್‌ ಭರ್ಜರಿ ಆಫರ್‌- 125 ಯೂನಿಟ್‌ವರೆಗೂ ಉಚಿತ!

ಬಿಹಾರ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ದೊಡ್ಡ ಘೋಷಣೆ ಮಾಡಿದ್ದಾರೆ. ಆಗಸ್ಟ್ 1, 2025ರಿಂದ, ಅಂದರೆ ಜುಲೈ ಬಿಲ್ಲಿಂಗ್ ಸಮಯದಿಂದ ರಾಜ್ಯದ ಎಲ್ಲ ಗೃಹ ಬಳಕೆದಾರರಿಗೆ 125 ಯೂನಿಟ್‌ಗಳವರೆಗಿನ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

Tumkur News: ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ 2ನೇ ಬಾರಿಗೆ ಕೆಂಪರಾಜಯ್ಯ ಆಯ್ಕೆ

ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ 2ನೇ ಬಾರಿಗೆ ಕೆಂಪರಾಜಯ್ಯ ಆಯ್ಕೆ

Tumkur News: ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ 2025-27ನೇ ಸಾಲಿಗೆ 2 ವರ್ಷದ ಅವಧಿಗೆ ಎಚ್. ಕೆಂಪರಾಜಯ್ಯ ಎರಡನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ 6 ಮಂದಿ ಪೈಪೋಟಿ ನಡೆಸಿದ್ದರು. ಅಂತಿಮವಾಗಿ ಕೆಂಪರಾಜಯ್ಯ 514 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Basavaraj Bommai: ಗದಗ-ಬೆಟಗೇರಿ ನಗರಸಭೆಯಲ್ಲಿ ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಬಸವರಾಜ ಬೊಮ್ಮಾಯಿ ಆರೋಪ

ಕಾಂಗ್ರೆಸ್‌ನ ಕಾನೂನು ಬಾಹಿರ ಜಯ ತಾತ್ಕಾಲಿಕ: ಬಸವರಾಜ ಬೊಮ್ಮಾಯಿ

ಗದಗ-ಬೆಟಗೇರಿ ನಗರಸಭೆಯಲ್ಲಿ ಬಿಜೆಪಿಯ ಮೂರು ಜನ ಸದಸ್ಯರನ್ನು ರಾತ್ರಿ 12 ಗಂಟೆಗೆ ಅಮಾನತು ಮಾಡಿ ಅವರನ್ನು ಮತ ಹಾಕದಂತೆ ನೋಡಿಕೊಂಡಿದ್ದಾರೆ. ಅಮಾನತುಗೊಂಡ ಸದಸ್ಯರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕೊಟ್ಟು ಆದೇಶ ನೀಡಿದೆ. ಚುನಾವಣಾಧಿಕಾರಿ ಅದನ್ನು ದಿಕ್ಕರಿಸಿ, ಎಲ್ಲ ಸಂಪರ್ಕ ಬಂದು ಮಾಡಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಅವರ ನಿರ್ದೇಶನದಂತೆ ಕೆಲಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

Delhi's New CM: ದಿಲ್ಲಿಯಲ್ಲಿ ಹಿರಿತನಕ್ಕೆ ಮಣೆ ಹಾಕಿದ ಬಿಜೆಪಿ; ಯಾರು ಈ ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ?

ಬಿಜೆಪಿಯ ಹಿರಿಯ ನಾಯಕಿ ರೇಖಾ ಗುಪ್ತಾ ಬಗ್ಗೆ ನಿಮಗೆಷ್ಟು ಗೊತ್ತು?

ದಿಲ್ಲಿ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೇರಿದೆ. ಇದೀಗ ಬಿಜೆಪಿ ತನ್ನ ಮುಖ್ಯಮಂತ್ರಿ ಹೆಸರನ್ನು ಘೋಷಿಸಿದ್ದು, ಪಕ್ಷದ ಹಿರಿಯ ನಾಯಕಿ ರೇಖಾ ಗುಪ್ತಾ ಅವರನ್ನು ಆಯ್ಕೆ ಮಾಡಿದೆ. ರೇಖಾ ಗುಪ್ತಾ ಅವರ ಹಿನ್ನೆಲೆ ಏನು? ಇಲ್ಲಿದೆ ವಿವರ.

Aravind Kejriwal:  ದೆಹಲಿ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಕೇಜ್ರಿವಾಲ್‌ಗೆ ಪಂಜಾಬ್‌ ಸಿಎಂ ಗಾದಿ?

ಚುನಾವಣೆಯಲ್ಲಿ ಸೋತರೂ ಕೇಜ್ರಿವಾಲ್‌ಗೆ ಪಂಜಾಬ್‌ ಸಿಎಂ ಪಟ್ಟ?

ದೆಹಲಿ ಚುನಾವಣೆಯ ಫಲಿತಾಂಶ ಶನಿವಾರ(ಫೆ.8) ಹೊರ ಬಿದ್ದಿದ್ದು, ಬಿಜೆಪಿ ದಾಖಲೆಯ ಗೆಲುವು ಸಾಧಿಸಿದೆ. ಕಳೆದ ಹತ್ತು ವರ್ಷಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಪ್ರಾಬಲ್ಯ ಸಾಧಿಸಿದ್ದ ಆಪ್‌ ಮಕಾಡೆ ಮಲಗಿದೆ. ಸ್ವತಃ ಅರವಿಂದ ಕೇಜ್ರಿವಾಲ್‌ ಕೂಡ ತಮ್ಮ ತವರು ಕ್ಷೇತ್ರದಲ್ಲಿಯೇ ಹೀನಾಯವಾಗಿ ಸೋತಿದ್ದಾರೆ. ಈ ಮಧ್ಯೆ ಚುನಾವಣೆಯಲ್ಲಿ ಸೋತರೂ ಕೇಜ್ರಿವಾಲ್‌ ಪಂಜಾಬಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

Delhi Election Result: ದಿಲ್ಲಿ ಚುನಾವಣೆಯಲ್ಲಿ ಅತೀ ಹೆಚ್ಚು, ಅತೀ ಕಡಿಮೆ ಅಂತರದಿಂದ ಗೆದ್ದವರು

ದಿಲ್ಲಿ ರಿಸಲ್ಟ್: ಅತೀ ಹೆಚ್ಚು, ಅತೀ ಕಡಿಮೆ ಗೆಲುವಿನ ಅಂತರವೆಷ್ಟು ಗೊತ್ತೇ?

ದೆಹಲಿ ವಿಧಾನಸಭೆಯ ಮತದಾನದ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಮೂಡಿ ಬಂದಿದ್ದು ಆಡಳಿತಾ ರೂಢ ಆಮ್ ಆದ್ಮಿ ಪಕ್ಷಕ್ಕೆ ಮತದಾರ ಸೋಲಿನ ರುಚಿ ತೊರಿಸಿದ್ದಾನೆ. ಈ ಫಲಿತಾಂಶದಲ್ಲಿ ಅತೀ ಹೆಚ್ಚು ಮತ್ತು ಅತೀ ಕಡಿಮೆ ಗೆಲುವಿನ ಅಂತರದ ವಿವರ ಇಲ್ಲಿದೆ...

BJP Dominance: ದೇಶದ 15 ರಾಜ್ಯಗಳಲ್ಲಿ ಕೇಸರಿ ಪಡೆಯ ಆಧಿಪತ್ಯ: 4 ದಶಕಗಳ ನಂತರ ಇತಿಹಾಸ ಬರೆದ ಬಿಜೆಪಿ!

ದೇಶದ 15 ರಾಜ್ಯಗಳಲ್ಲಿ ʼಕಮಲ‌ʼ ಕಮಾಲ್!

ಈ ಬಾರಿಯ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಆ ಮೂಲಕ 27 ವರ್ಷಗಳ ನಂತರ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರದ ಗದ್ದುಗೆಗೆ ಏರಿದೆ. ಕಳೆದ ಹತ್ತು ವರ್ಷಗಳಿಂದ ದೆಹಲಿಯನ್ನು ಭದ್ರಕೋಟೆಯಾಗಿಸಿಕೊಂಡಿದ್ದ ಆಮ್‌ ಆದ್ಮಿ ಈ ಬಾರಿಯ ಚುನಾವಣೆಯಲ್ಲಿ ಮಕಾಡೆ ಮಲಗಿದೆ. ಆಪ್‌ನ ಹ್ಯಾಟ್ರಿಕ್‌ ಗೆಲುವಿನ ಕನಸು ಭಗ್ನಗೊಂಡಿದೆ. ಇದೀಗ ದೆಹಲಿಯಲ್ಲಿ ಅಧಿಕಾರವನ್ನು ಪಡೆಯುವ ಮೂಲಕ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

Atishi Marlena: ದೆಹಲಿ ಚುನಾವಣೆಯಲ್ಲಿ ಮುಗ್ಗರಿಸಿದ ಆಪ್: ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ರಾಜೀನಾಮೆ!

ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ರಾಜೀನಾಮೆ!

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ‌ ಆಪ್ ಹೀನಾಯವಾಗಿ ಸೋಲು ಕಂಡ ಬೆನ್ನಲ್ಲೇ ಅತಿಶಿ ಇಂದು (ಫೆ.9) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅತಿಶಿ ಬೆಳಗ್ಗೆ 11 ಗಂಟೆ ಸುಮಾರಿಗೆ ರಾಜಭವನಕ್ಕೆ ತೆರಳಿ ಲೆಫ್ಟಿನಂಟ್ ಗವರ್ನರ್ ವಿ.ಕೆ. ಸಕ್ಕೇನಾ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ರಾಷ್ಟ್ರ ರಾಜಧಾನಿಯಲ್ಲಿ ಒಂದು ದಶಕ ಅಧಿಪತ್ಯ ಸಾಧಿಸಿದ್ದ ಆಮ್ ಆದ್ಮಿ ಪಕ್ಷದ ಆಡಳಿತ ಇದೀಗ ಅಂತ್ಯವಾಗಿದೆ.

Oath ceremony : ದೆಹಲಿಯ ನೂತನ ಸಿಎಂ ಪ್ರಮಾಣವಚನ ಯಾವಾಗ? ಇಲ್ಲಿದೆ ಮಾಹಿತಿ

ದೆಹಲಿಯ ನೂತನ ಸಿಎಂ ಪ್ರಮಾಣವಚನ ಯಾವಾಗ?

ಮುಖ್ಯ ಮಂತ್ರಿ ಪದಗ್ರಹಣ ಸಮಾರಂಭ ಕಾರ್ಯಕ್ರಮ ಕೊಂಚ ವಿಳಂಬವಾಗಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸಕ್ಕೆ ತೆರಳಲಿದ್ದು, ಅವರು ಭಾರತಕ್ಕೆ ಹಿಂದಿರುಗುವ ವರೆಗೂ ದೆಹಲಿ ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮ ನಡೆಯುವುದು ಬಹುತೇಕ ಅನುಮಾನ.

Loading...