lakshmi-electricals

ಎಸಿಬಿ ಬಲೆಗೆ ಕಂದಾಯ ಇಲಾಖೆ ಅಧಿಕಾರಿಗಳು

Posted In : Others

ದಾವಣಗೆರೆ: ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ರೈತರೊಬ್ಬರಿಂದ ಲಂಚ ಪಡೆಯುತ್ತಿದ್ದ ಕಂದಾಯ ಅಧಿಕಾರಿ ಹಾಗೂ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಕಂದಾಯ ಅಧಿಕಾರಿ ದಿನೇಶ್ ಬಾಬು ಹಾಗೂ ಗ್ರಾಮ ಲೆಕ್ಕಾಧಿಕಾರಿ ನವೀನ್ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಸಿಕ್ಕ ಅಧಿಕಾರಿಗಳು. ವಿವಾದದಲ್ಲಿದ್ದ ಜಮೀನೊಂದರ ವಿಚಾರವನ್ನು ಬಗೆಹರಿಸಲು ರೈತನಿಂದ 45 ಸಾವಿರ ರು. ಲಂಚದ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ರೈತ ಎಸಿಬಿ ದೂರು ನೀಡಿದ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನ ಅಧಿಕಾರಿಗಳಿಬ್ಬರು ಲಂಚ ಸ್ವೀಕರಿಸುವ ಸಂದರ್ಭ ಎಸಿಬಿ ಬಲೆಗೆ ಬಿದ್ದಿದ್ದಾರೆ. ಡಿವೈಎಸ್‌ಪಿ ಕಾಳಪ್ಪ ನೇತೃತ್ವದ ತಂಡ ದಾಳಿ ನಡೆಸಿತ್ತು.

Leave a Reply

Your email address will not be published. Required fields are marked *

four × 3 =

 
Back To Top