ದೀಪಿಕಾ ಪಡುಕೋಣೆ ಇದ್ದ ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ

Posted In : ದೇಶ

ಮುಂಬೈ: ಇಲ್ಲಿನ ವರ್ಲಿಯಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ವಾಸವಿದ್ದ ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಅಪಾಯ ಇಲ್ಲದೇ ಪಾರಾಗಿದ್ದಾರೆ. 90ಕ್ಕೂ ಹೆಚ್ಚು ನಿವಾಸಿಗಳು ಈ ಆಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಾಹ್ನ 2 ಗಂಟೆ ವೇಳೆಗೆ ಈ ಅವಘಡ ಸಂಭವಿಸಿದ್ದು, 33ನೇ ಫ್ಲೋರ್ ನಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ. ಮೊದಲ ಎರಡು ಮಹಡಿಗಳು ಭಾರೀ ತೀವ್ರವಾಗಿ ಹಾನಿಗೊಳಗಾಗಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಅಗ್ನಿ ಶ್ಯಾಮಕ ದಳ ಸಿಬ್ಬಂದಿಗಳು ಆಗಮಿಸಿದ್ದು, ಒಟ್ಟು 6 ಅಗ್ನಿಶ್ಯಾಮಕ ವಾಹನಗಳು ಕಾರ್ಯಾಚರಣೆ ನಡೆಸುತ್ತಿವೆ. ಹಲವು ಟ್ಯಾಂಕರ್ ಗಳಲ್ಲಿ ನೀರು ಕಳುಹಿಸಲಾಗಿದ್ದು, ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ.

ಈ ತಿಂಗಳ ಆರಂಭದಲ್ಲಿ ಮುಂಬೈನಲ್ಲಿರುವ ಆದಾಯ ತೆರಿಗೆ ಕಚೇರಿಯಲ್ಲೂ ಬೆಂಕಿ ಕಾಣಿಸಿಕೊಂಡಿತ್ತು. ಕಳೆದ ವರ್ಷ ಅಕ್ಟೋಬರ್ ನಲ್ಲಿ ಹೆಚ್ಚು ವಿಐಪಿಗಳು ವಾಸಿಸುವ ಬಾಂದ್ರಾ ಪ್ರದೇಶದ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿ ಆತಂಕ ಸೃಷ್ಟಿಯಾಗಿತ್ತು.

Leave a Reply

Your email address will not be published. Required fields are marked *

seventeen − thirteen =

Recent News
Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

 
Back To Top